AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ಹೂವು ಕೇವಲ ಅಂದಕ್ಕಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿ ಅಡಗಿದೆ

ಕಾಲೋಚಿತ ಕಾಯಿಲೆಗಳನ್ನು ಕಡಿಮೆ ಮಾಡುವುದರ ಜತೆಗೆ ಚರ್ಮದ ಸಮಸ್ಯೆಗಳನ್ನು ಹೂವು ಕಡಿಮೆ ಮಾಡುತ್ತದೆ. ಕೇಸರಿ ಮತ್ತು ಗುಲಾಬಿಯಂತಹ ಹೂವುಗಳನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ.

Health Benefits: ಹೂವು ಕೇವಲ ಅಂದಕ್ಕಷ್ಟೇ ಅಲ್ಲ ಅನೇಕ ಆರೋಗ್ಯಕರ ಗುಣಗಳು ಇದರಲ್ಲಿ ಅಡಗಿದೆ
ಗುಲಾಬಿ ಹೂವು
TV9 Web
| Edited By: |

Updated on: Aug 02, 2021 | 7:24 AM

Share

ಸುಂದರವಾದ ಹೂವುಗಳು ಮನಸ್ಸಿಗೆ ಖುಷಿಯ ಜತೆಗೆ ನೆಮ್ಮದಿಯನ್ನು ನೀಡುತ್ತವೆ. ಹೀಗಾಗಿಯೇ ಕೆಲವರು ಅದನ್ನು ಪ್ರೀತಿಪಾತ್ರರ ಮನವೊಲಿಸುವ ಅಸ್ತ್ರವಾಗಿ ಬಳಸುತ್ತಾರೆ. ಇನ್ನು ಮನೆಯಂಗಳದಲ್ಲಿ ಅರಳುವ ಹೂವುಗಳನ್ನು ದೇವರ ಪೂಜೆಗೆ, ಅಲಂಕಾರಕ್ಕೆ, ಅಷ್ಟೇ ಏಕೆ ಮಹಿಳೆಯರು ಮುಡಿಯಲು ಕೂಡ ಬಳಸುತ್ತಾರೆ. ಆದರೆ ಸುಂಗಂಧ ಬೀರುವ ಅನೇಕ ಹೂವುಗಳು ಕೇವಲ ಅಂದಕ್ಕೆ ಅಷ್ಟೇ ಅಲ್ಲ, ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲಿ ವಿಶೇಷವಾಗಿ ಹೂವು(Flower)ಗಳನ್ನು ಈ ಕಾರಣಕ್ಕಾಗಿಯೇ ಬಳಸಲಾಗಿದೆ. ಕೆಲವು ಹೂವುಗಳಲ್ಲಿ ಇರುವ ಪೋಷಕಾಂಶಗಳನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಇದು ಕಾಲೋಚಿತ ಕಾಯಿಲೆಗಳನ್ನು ಕಡಿಮೆ ಮಾಡುವುದರ ಜತೆಗೆ ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೇಸರಿ ಮತ್ತು ಗುಲಾಬಿ( Rose) ಯಂತಹ ಹೂವುಗಳನ್ನು ಅನೇಕ ಔಷಧಿಗಳಲ್ಲಿ ಬಳಸಲಾಗುತ್ತದೆ. ಹೂವುಗಳು ರೋಗಗಳನ್ನು ಗುಣಪಡಿಸುವ ಅಂಶವನ್ನು ಹೊಂದಿದೆ. ಅದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಗುಲಾಬಿ ಗುಲಾಬಿ ಹೂವುಗಳಲ್ಲಿ ಟ್ಯಾನಿನ್, ವಿಟಮಿನ್ ಎ, ಬಿ ಮತ್ತು ಸಿ ಇರುತ್ತದೆ. ಗುಲಾಬಿ ಹೂವುಗಳ ರಸವು ದೇಹದ ಶಾಖ ಮತ್ತು ತಲೆನೋವನ್ನು ಕಡಿಮೆ ಮಾಡುತ್ತದೆ. ಒಣಗಿದ ಗುಲಾಬಿ ಹೂವುಗಳು ಗರ್ಭಿಣಿ ಮಹಿಳೆಯರಲ್ಲಿ ಮೂತ್ರದ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗೆಯೇ ಗುಲಾಬಿ ಹೂವು ಒಣಗಿಸಿ ಮಾಡಿದ ಪುಡಿಯನ್ನು ನೀರಿಗೆ ಬೆರೆಸಿ ಕುಡಿಯುವುದರಿಂದ ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತವೆ. ಗುಲಾಬಿಯನ್ನು ಮಾರ್ಮಲೇಡ್ ನಂತಹ ಸಿಹಿತಿಂಡಿಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಹಾಗೆಯೇ ಕೆಮ್ಮು, ಅಸ್ತಮಾ, ಬ್ರಾಂಕೈಟಿಸ್, ಅಜೀರ್ಣ ಮತ್ತು ವಾಯು ಮುಂತಾದ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ. ಗುಲಾಬಿ ಹೂವಿನ ನೀರು ಕಣ್ಣಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆಯನ್ನು ಸಹ ಇದು ನಿಯಂತ್ರಿಸುತ್ತದೆ.

ದಾಸವಾಳ ಸಾಮಾನ್ಯವಾಗಿ ದಾಸವಾಳ ಕೂದಲಿನ ಸಮಸ್ಯೆಗಳಿಗೆ ಪರಿಹಾರವಾಗಿ ಕೆಲಸ ಮಾಡುತ್ತದೆ. ಕೆಂಪು, ಬಿಳಿ, ಹಳದಿ ಮತ್ತು ಕಿತ್ತಳೆ ಬಣ್ಣದ ಹೂವುಗಳು ಕೂದಲು ಮತ್ತು ಚರ್ಮದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ದಾಸವಾಳ ಹೂವುಗಳನ್ನು ಆಯುರ್ವೇದದ ಚಹಾ ತಯಾರಿಕೆಯಲ್ಲಿಯೂ ಬಳಸಲಾಗುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜತೆಗೆ ರಕ್ತಸ್ರಾವ, ಕೂದಲು ಉದುರುವುದು, ಅಧಿಕ ರಕ್ತದೊತ್ತಡ, ಕೆಮ್ಮು ಮುಂತಾದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಮಲ್ಲಿಗೆ ಹೂವು ಮಲ್ಲಿಗೆ ಹೂವಿನ ಪರಿಮಳ ಮನಸ್ಸನ್ನು ಶಾಂತವಾಗಿಸುತ್ತದೆ. ಮಲ್ಲಿಗೆ ಹೂವಿನಿಂದ ತಯಾರಿಸಿದ ಚಹಾವು ಆತಂಕ, ಒತ್ತಡ, ನಿದ್ರಾಹೀನತೆ ಮತ್ತು ನರಮಂಡಲದ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮಲ್ಲಿಗೆ ಹೂವು ಜೀರ್ಣಕಾರಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಅಲ್ಲದೆ ಮಹಿಳೆಯರಿಗೆ ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ನೋವು ಮತ್ತು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ: Noni Fruit: ನೋಣಿ ಹಣ್ಣಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೇರು, ಹಣ್ಣು ಮತ್ತು ಎಲೆ ಅನೇಕ ಆರೋಗ್ಯಕರ ಗುಣಗಳಿಂದ ಕೂಡಿದೆ

ನೀವು ಎಂದಾದರೂ ಹಸಿರು ಬಾದಾಮಿಯನ್ನು ಸೇವಿಸಿದ್ದೀರಾ? ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ