Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು

ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು
Species
Follow us
TV9 Web
| Updated By: shivaprasad.hs

Updated on: Dec 02, 2021 | 9:32 AM

ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಆರೋಗ್ಯದ ಕುರಿತಾಗಿ ಎಷ್ಟು ಕಾಳಜಿ ಮಾಡಿದರೂ ಸಾಲದು. ಆರೋಗ್ಯ ಸುಧಾರಣೆಗೆ ನಾವು ಸೇವಿಸುವ ಆಹಾರದ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ತಿಳಿಯಬೇಕು. ಪೌಷ್ಟಿಕ ಆಹಾರ ವ್ಯವಸ್ಥೆ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ. ಹೀಗಿರುವಾಗ ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಲವರು ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ? ಎಂಬ ಮಾಹಿತಿಯನ್ನು ತಿಳಿಯೋಣ. ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

ಯಾವುದೇ ಆಗಲಿ ಅತಿಯಾಗಿ ಸೇವಿಸಿದರೆ ಆರೋಗ್ಯವನ್ನು ಹಾಳು ಮಾಡುತ್ತವೆ. ನಿಯಮಿತವಾದ ಆಹಾರ ವ್ಯವಸ್ಥೆ ಜೊತೆಗೆ ನಿಯಮಿತವಾದ ವ್ಯಾಯಾಮ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕ. ನೀವು ಪ್ರತಿನಿತ್ಯ ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಅರಿಶಿಣ ಭಾರತೀಯರ ಅಡುಗೆಯಲ್ಲಿ ಸಾಮಾನ್ಯವಾಗಿ ಹೆಚ್ಚು ಬಳಸುವ ಪದಾರ್ಥವಿದು. ಇದರಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತ ಮತ್ತು ನಂಜುನಿರೋಧಕ ಗುಣಲಕ್ಷಣಗಳು ಕಂಡು ಬರುತ್ತವೆ. ಅರಿಶಿಣವು ಚಯಾಪಚಯವನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯ ಸುಧಾರಣೆಗೆ ಅರಿಶಿಣ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ.

ಜೀರಿಗೆ ಜೀರಿಗೆಯು ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯ ಜೀರ್ಣಕ್ರಿಯೆ ಮತ್ತು ಕಾರ್ಯನಿರ್ವಹಣೆಯನ್ನು ಹೆಚ್ಚಿಸುತ್ತದೆ. ಮಲಬದ್ಧತೆ, ಹೊಟ್ಟೆ ನೀವು, ವಾಂತಿ ಬರುವಂತಾಗುವುದು ಈ ರೀತಿಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವ ಸಾಮರ್ಥ್ಯ ಜೀರಿಗೆಯಲ್ಲಿದೆ.

ಕೆಂಪು ಮೆಣಸಿನ ಪುಡಿ ಆಹಾರದಲ್ಲಿ ಖಾರ ರುಚಿ ಹೆಚ್ಚಿಸುತ್ತದೆ. ಹೆಚ್ಚಾಗಿ ಭಾರತೀಯರು ಖಾರದ ಅಡುಗೆಗೆ ಕೆಂಪು ಮೆಣಸಿನ ಪುಡಿಯನ್ನು ಬಳಸುತ್ತಾರೆ. ರುಚಿಯ ಜೊತೆಗೆ ಬಣ್ಣವನ್ನು ನೀಡುವುದರೊಂದಿಗೆ ಜೀರ್ಣಕ್ರಿಯೆ ಸುಧಾರಣೆಗೆ ಇದು ಸಹಾಯಕವಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕರಿ ಮೆಣಸು ಕರಿ ಮೆಣಸು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಜೊತೆಗೆ ಖಾರದ ರುಚಿಯನ್ನು ನೀಡುವುದರಿಂದ ಸ್ಪೈಸಿ ತಿನಿಸುಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಇದರಲ್ಲಿರುವ ಪೆಪರಿನ್ ಉತ್ಕರ್ಷಣ ನಿರೋಧಕ ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ನಿಯಮಿತವಾಗಿ ಕೆಂಪು ಮೆಣಸಿನ ಪುಡಿಯನ್ನು ಬಳಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Weight Loss: ಚಳಿಗಾಲದಲ್ಲಿ ಆರೋಗ್ಯಕರ ತೂಕ ನಷ್ಟಕ್ಕೆ ಸೇವಿಸಬಹುದಾದ ಆಹಾರ ಪದಾರ್ಥಗಳಿವು

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?