AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

40 ವರ್ಷ ದಾಟಿದ ಪುರುಷರು ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿವೆ ಟಿಪ್ಸ್​

ವಯಸ್ಸಾಗುತ್ತಿದ್ದಂತೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವುದು ಕೂಡ ಮುಖ್ಯವಾಗುತ್ತದೆ. ಡಯೆಟ್, ಉತ್ತಮ ಆಹಾರ ಸೇವನೆ, ವ್ಯಾಯಾಮ ಇವೆಲ್ಲಾ ಹೆಣ್ಣುಮಕ್ಕಳಿಗೆ ಮಾತ್ರ ಸೀಮಿತವಲ್ಲ ಆರೋಗ್ಯವು ಉತ್ತಮವಾಗಿರಬೇಕು ಎನ್ನುವ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ.

40 ವರ್ಷ ದಾಟಿದ ಪುರುಷರು ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು? ಇಲ್ಲಿವೆ ಟಿಪ್ಸ್​
Men Health
TV9 Web
| Edited By: |

Updated on: Jul 01, 2022 | 11:07 AM

Share

ವಯಸ್ಸಾಗುತ್ತಿದ್ದಂತೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವುದು ಕೂಡ ಮುಖ್ಯವಾಗುತ್ತದೆ. ಡಯೆಟ್, ಉತ್ತಮ ಆಹಾರ ಸೇವನೆ, ವ್ಯಾಯಾಮ ಇವೆಲ್ಲಾ ಹೆಣ್ಣುಮಕ್ಕಳಿಗೆ ಮಾತ್ರ ಸೀಮಿತವಲ್ಲ ಆರೋಗ್ಯವು ಉತ್ತಮವಾಗಿರಬೇಕು ಎನ್ನುವ ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ.

ಹಲವು ಪುರುಷರು ಸದಾ ಒತ್ತಡಕ್ಕೆ ಒಳಗಾಗಿರುತ್ತಾರೆ ದುಃಖ ಭಯದಿಂದ ಬಳಲುತ್ತಿರುತ್ತಾರೆ. ಪುರುಷರ ಮೇಲೆ ಸಮಾಜ, ಕುಟುಂಬದ ನಿರೀಕ್ಷೆ ಅಪಾರ. ಕೆಲವು ಸಲ ಈ ನಿರೀಕ್ಷೆಗಳು ಅವಾಸ್ತವಿಕವಾಗಿರುತ್ತವೆ. ಪುರುಷರು ನಿತ್ಯ ಒತ್ತಡದ ಜೀವನ ನಡೆಸುತ್ತಿರುತ್ತಾರೆ, ಆರೋಗ್ಯದ ಬಗ್ಗೆ ಕಾಳಜಿವಹಿಸುವ ಎಷ್ಟೇ ಮಾತನಾಡಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ತಮ್ಮ ಒತ್ತಡವನ್ನು ಬದಿಗಿಟ್ಟು ಆರೋಗ್ಯದ ಬಗ್ಗೆ ಕಾಳಜಿವಹಿಸುವ ಸಮಯ ಬಂದಿದೆ.

40 ವರ್ಷ ದಾಟಿದ ಪುರುಷರು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಫೈಬರ್​ಯುಕ್ತ ಆಹಾರ ಸೇವಿಸಿ: ಫೈಬರ್​ಯುಕ್ತ ಆಹಾರ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮವಾಗಿರುತ್ತದೆ. ಹಾಗೆಯೇ ಫೈಬರ್​ಯುಕ್ತ ಆಹಾರದಿಂದ ಹೃದಯ ಸಂಬಂಧಿ ಕಾಯಿಲೆ, ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಬಟಾಣಿ, ಮಸೂರ, ಬಿಳಿ ಎಳ್ಳು, ಅಗಸೆಬೀಜ, ಕುಂಬಳಕಾಯಿ ಬೀಜ, ಓಟ್ಸ್​, ಬಾದಾಮಿ, ಗೋಡಂಬಿ, ಮತ್ತು ಪಾಲಿಶ್ ಮಾಡದ ಅಕ್ಕಿಯಲ್ಲಿ ಹೆಚ್ಚು ಫೈಬರ್ ಅಂಶವಿರುತ್ತದೆ.

ಸೋಡಿಯಂ ಅಂಶವಿರುವ ಆಹಾರದ ಬಳಕೆ ಕಡಿಮೆ ಮಾಡಿ: ಆಹಾರದಲ್ಲಿ ಸೋಡಿಯಂ ಅಂಶ ಸೇವನೆಯನ್ನು ಕಡಿಮೆ ಮಾಡಿ. ಬೆಳೆಹಣ್ಣು ಹಾಗೂ ಪಾಲಕ್ ಸೊಪ್ಪಿನ ಸೇವನೆ ಹೆಚ್ಚಿಸಿ ಪೊಟ್ಯಾಶಿಯಂ ಪ್ರಮಾಣವನ್ನು ಹೆಚ್ಚಿಸಿಕೊಳ್ಳಿ.

ಕೊಬ್ಬಿನ ಆಹಾರ ಸೇವನೆ ಕಡಿಮೆ ಮಾಡಿ: ಕೆಂಪು ಮಾಂಸ, ಹಾಲು ಮತ್ತು ಡೈರಿ ಉತ್ಪನ್ನಗಳಲ್ಲಿ ಕಂಡುಬರುವ ಸ್ಯಾಚುರೇಟೆಡ್ ಕೊಬ್ಬನ್ನು ತಪ್ಪಿಸುವುದು ಪ್ರಯೋಜನಕಾರಿಯಾಗಿದೆ. ಹಸುವಿನ ತುಪ್ಪವನ್ನು ಸೇವಿಸಿ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕರಿಮೆಣಸು, ದಾಲ್ಚಿನ್ನಿ, ಲವಂಗ ಮತ್ತು ಒಣ ಶುಂಠಿಯನ್ನು ಬಳಕೆ ಮಾಡಿ.

ಗಿಡಮೂಲಿಕೆಗಳನ್ನು ಬಳಸಿ: ತುಳಸಿ, ಯಷ್ಟಿಮಧು, ಅಶ್ವಗಂಧ, ಮತ್ತು ಒಣ ಶುಂಠಿಯಂತಹ ಗಿಡಮೂಲಿಕೆಗಳು ಮತ್ತು ಮಸಾಲೆಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಹಾಗೆಯೇ ಜೀರಿಗೆ, ಧನಿಯಾ, ಅರಿಶಿನ, ಕಪ್ಪು ಜೀರಿಗೆ, ಕರಿಮೆಣಸು, ದಾಲ್ಚಿನ್ನಿ, ಮತ್ತು ಲವಂಗಗಳಂತಹ ಮಸಾಲೆ ಪದಾರ್ಥಗಳನ್ನು ಆಹಾರದಲ್ಲಿ ಸೇರಿಸಿ.

ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ: ಕರುಳಿನ ಆರೋಗ್ಯವನ್ನು ಕಾಪಾಡುವ ಆಹಾರವನ್ನು ಸೇವನೆ ಮಾಡಿ, ಉತ್ತಮವಾಗಿ ಜೀರ್ಣವಾಗಬಲ್ಲ ಆಹಾರ ಸೇವಿಸಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ