AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದರೆ ಇವುಗಳು ನಿಮ್ಮ ಆಹಾರದಲ್ಲಿರಲಿ

ನಿಮಗೆ ಅಧಿಕ ರಕ್ತದೊತ್ತಡ ಸಮಸ್ಯೆ ಕಾಡುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ಇವುಗಳು ಸೇರಿರಲಿ. ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿವೆ ಕೆಲವು ಸಲಹೆಗಳು.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದರೆ ಇವುಗಳು ನಿಮ್ಮ ಆಹಾರದಲ್ಲಿರಲಿ
ಸಂಗ್ರಹ ಚಿತ್ರ
TV9 Web
| Edited By: |

Updated on: Oct 26, 2021 | 8:39 AM

Share

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಉತ್ತಮ ಆಹಾರ ಪದ್ಧತಿಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಜತೆಗೆ ಒಳ್ಳೆಯ ಆಹಾರ ಸೇವಿಸುವ ಮೂಲಕ ನಿಮ್ಮ ಮಾನಸಿಕ ಸ್ಥಿತಿ ಬದಲಾಗುತ್ತದೆ. ನಿಮಗೆ ಹೆಚ್ಚಿನ ಒತ್ತಡ, ಕಿರಿ ಕಿರಿ ಅನುಭವ, ಮಾನಸಿಕ ಸ್ಥಿತಿ ಏರುಪೇರು ಕಂಡು ಬರುತ್ತಿದ್ದರೆ ಅಥವಾ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಆಹಾರ ಪದ್ಧತಿ ನಿಮ್ಮದಾಗಿರಲಿ.

ಬಿಟ್ರೂಟ್ ಬಿಟ್ರೂಟ್ ಅನೇಕ ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರಲ್ಲಿ ಫೈಬರ್, ಕಬ್ಬಿಣ, ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಉತ್ತಮ ಮೂಲವಾಗಿದೆ. ಇದು ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸುತ್ತದೆ. ಜತೆಗೆ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಟ್ರೂಟ್​ ಜ್ಯೂಸ್​ ಅಥವಾ ಅಡುಗೆಯಲ್ಲಿ ಬಿಟ್ರೂಟ್​ ಬಳಸಿ ಸೇವಿಸುವ ಮೂಲಕ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ನಿಂಬೆ ಪಾನಕ ಹೆಚ್ಚಿನ ಜನರಿಗೆ ನಿಂಬೆ ಪಾನಕವೆಂದರೆ ಇಷ್ಟ. ನಿಂಬೆಯಲ್ಲಿ ವಿಟಮಿನ್ ಸಿ ಕಂಡು ಬರುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕ ಶಕ್ತಿ ಇದ್ದು, ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಹಾಗಿರುವಾಗಿ ನಿಂಬೆ ಪಾನಕ ಸೇವಿಸುವ ಮೂಲಕ ನಿಮ್ಮ ರಕ್ತದೊತ್ತಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಟೊಮ್ಯಾಟೊ ಟೊಮ್ಯಾಟೊ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗಿದೆ. ಇದರಲ್ಲಿ ಪೊಟ್ಯಾಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜತೆಗೆ ಟೊಮ್ಯಾಟೊ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಬಾಳೆಹಣ್ಣು ಅಧಿಕ ರಕ್ತದೊತ್ತಡ ನಿಯಂತ್ರಿಸಲು ಬಾಳೆಹಣ್ಣು ಸೇವನೆ ಒಳ್ಳೆಯದು. ಪ್ರತಿನಿತ್ಯ ಒಂದು ಬಾಳೆಹಣ್ಣು ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ರಕ್ತದ ಒತ್ತಡ ಸಮಸ್ಯೆ ನಿಯಂತ್ರಣದ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಜೀರ್ಣಕ್ರಿಯೆ ಚೆನ್ನಾಗಿರಲು 9 ಆಯುರ್ವೇದ ಸಲಹೆಗಳು ಇಲ್ಲಿವೆ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ