High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದರೆ ಇವುಗಳು ನಿಮ್ಮ ಆಹಾರದಲ್ಲಿರಲಿ

ನಿಮಗೆ ಅಧಿಕ ರಕ್ತದೊತ್ತಡ ಸಮಸ್ಯೆ ಕಾಡುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ಇವುಗಳು ಸೇರಿರಲಿ. ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಇಲ್ಲಿವೆ ಕೆಲವು ಸಲಹೆಗಳು.

High Blood Pressure: ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದರೆ ಇವುಗಳು ನಿಮ್ಮ ಆಹಾರದಲ್ಲಿರಲಿ
ಸಂಗ್ರಹ ಚಿತ್ರ
Edited By:

Updated on: Oct 26, 2021 | 8:39 AM

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಉತ್ತಮ ಆಹಾರ ಪದ್ಧತಿಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಜತೆಗೆ ಒಳ್ಳೆಯ ಆಹಾರ ಸೇವಿಸುವ ಮೂಲಕ ನಿಮ್ಮ ಮಾನಸಿಕ ಸ್ಥಿತಿ ಬದಲಾಗುತ್ತದೆ. ನಿಮಗೆ ಹೆಚ್ಚಿನ ಒತ್ತಡ, ಕಿರಿ ಕಿರಿ ಅನುಭವ, ಮಾನಸಿಕ ಸ್ಥಿತಿ ಏರುಪೇರು ಕಂಡು ಬರುತ್ತಿದ್ದರೆ ಅಥವಾ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಆಹಾರ ಪದ್ಧತಿ ನಿಮ್ಮದಾಗಿರಲಿ.

ಬಿಟ್ರೂಟ್
ಬಿಟ್ರೂಟ್ ಅನೇಕ ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದರಲ್ಲಿ ಫೈಬರ್, ಕಬ್ಬಿಣ, ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಉತ್ತಮ ಮೂಲವಾಗಿದೆ. ಇದು ದೇಹದಲ್ಲಿ ರಕ್ತದ ಹರಿವನ್ನು ಸುಧಾರಿಸುತ್ತದೆ. ಜತೆಗೆ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಟ್ರೂಟ್​ ಜ್ಯೂಸ್​ ಅಥವಾ ಅಡುಗೆಯಲ್ಲಿ ಬಿಟ್ರೂಟ್​ ಬಳಸಿ ಸೇವಿಸುವ ಮೂಲಕ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ನಿಂಬೆ ಪಾನಕ
ಹೆಚ್ಚಿನ ಜನರಿಗೆ ನಿಂಬೆ ಪಾನಕವೆಂದರೆ ಇಷ್ಟ. ನಿಂಬೆಯಲ್ಲಿ ವಿಟಮಿನ್ ಸಿ ಕಂಡು ಬರುತ್ತದೆ. ಇದರಲ್ಲಿ ಉತ್ಕರ್ಷಣ ನಿರೋಧಕ ಶಕ್ತಿ ಇದ್ದು, ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ದೇಹದಿಂದ ಸ್ವತಂತ್ರ ರಾಡಿಕಲ್​ಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಹಾಗಿರುವಾಗಿ ನಿಂಬೆ ಪಾನಕ ಸೇವಿಸುವ ಮೂಲಕ ನಿಮ್ಮ ರಕ್ತದೊತ್ತಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಟೊಮ್ಯಾಟೊ
ಟೊಮ್ಯಾಟೊ ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗಿದೆ. ಇದರಲ್ಲಿ ಪೊಟ್ಯಾಶಿಯಂ ಇದ್ದು, ಇದು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಜತೆಗೆ ಟೊಮ್ಯಾಟೊ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಬಾಳೆಹಣ್ಣು
ಅಧಿಕ ರಕ್ತದೊತ್ತಡ ನಿಯಂತ್ರಿಸಲು ಬಾಳೆಹಣ್ಣು ಸೇವನೆ ಒಳ್ಳೆಯದು. ಪ್ರತಿನಿತ್ಯ ಒಂದು ಬಾಳೆಹಣ್ಣು ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ರಕ್ತದ ಒತ್ತಡ ಸಮಸ್ಯೆ ನಿಯಂತ್ರಣದ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ; ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ಜೀರ್ಣಕ್ರಿಯೆ ಚೆನ್ನಾಗಿರಲು 9 ಆಯುರ್ವೇದ ಸಲಹೆಗಳು ಇಲ್ಲಿವೆ