Health Tips: ಯಕೃತ್ತು ಆರೋಗ್ಯ ಸುಧಾರಿಸಲು ಸೇವಿಸಬೇಕಾದ ಆಹಾರ ಪದಾರ್ಥಗಳು
ಯಕೃತ್ತು ಸರಿಯಾಗಿ ಕಾರ್ಯ ನಿರ್ವಹಿಸದಿದ್ದಾಗ ಅನೇಕ ಜೀರ್ಣಕಾರಿ ಸಮಸ್ಯೆಗಳು ಕಾಡುತ್ತವೆ. ಹಾಗಿರುವಾಗ ಯಕೃತ್ತು ಆರೋಗ್ಯವಾಗಿರುವುದು ನಾವು ಸೇವಿಸುವ ಆಹಾರವನ್ನು ಅವಲಂಬಿಸಿರುತ್ತದೆ.
ನಾವು ಆರೋಗ್ಯವಾಗಿರಲು ಉತ್ತಮ ಆಹಾರ ಮುಖ್ಯ. ಪೌಷ್ಟಿಕಾಂಶಯುಕ್ತ ಆಹಾರ ನಮ್ಮಲ್ಲಿ ಶಕ್ತಿ ತುಂಬುತ್ತದೆ. ಜತೆಗೆ ನಮ್ಮ ದೇಹದಲ್ಲಿನ ಯಕೃತ್ತು ಕೂಡಾ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ನಮ್ಮ ದೇಹದಲ್ಲಿ ಸೇರುವ ಆಹಾರದಿಂದ ಕಾರ್ಬೋಹೈಡ್ರೆಟ್ ಮತ್ತು ಗ್ಲೂಕೋಸ್ ತಯಾರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯಕೃತ್ತು ಆರೋಗ್ಯಕರವಾಗಿದ್ದಾಗ ಮಾತ್ರ ನಾವು ತಿನ್ನುವ ಆಹಾರ ಸರಿಯಾಗಿ ಜೀರ್ಣವಾಗುತ್ತದೆ. ಯಕೃತ್ತು ಸರಿಯಾಗಿ ಕಾರ್ಯ ನಿರ್ವಹಿಸದಿದ್ದಾಗ ಅನೇಕ ಜೀರ್ಣಕಾರಿ ಸಮಸ್ಯೆಗಳು ಕಾಡುತ್ತವೆ. ಹಾಗಿರುವಾಗ ಯಕೃತ್ತು ಆರೋಗ್ಯವಾಗಿರುವುದು ನಾವು ಸೇವಿಸುವ ಆಹಾರವನ್ನು ಅವಲಂಬಿಸಿರುತ್ತದೆ.
ಯಕೃತ್ತು ಸರಿಯಾಗಿ ಕಾರ್ಯ ನಿರ್ವಹಿಸದುರುವುದು ಜೀರ್ಣಕಾರಿ ಸಮಸ್ಯೆ ಮತ್ತು ಟೈಪ್ 2 ಮಧುಮೇಹ ಸಮಸ್ಯೆಗೆ ಕಾರಣವಾಗಬಹುದು. ಈ ಸಮಯದಲ್ಲಿ ಯಕೃತ್ತಿನ ಕಾರ್ಯವನ್ನು ಸುಧಾರಿಸಲು ಯಾವ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿಯೋಣ.
ಬೆಳ್ಳುಳ್ಳಿ ಸಾಮಾನ್ಯವಾಗಿ ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಜತೆಗೆ ಅನೇಕ ಔಷಧೀಯ ಗುಣಗಳನ್ನೂ ಸಹ ಹೊಂದಿದೆ. ಬೆಳ್ಳುಳ್ಳಿಯನ್ನು ನಮ್ಮ ಆಹಾರದ ಭಾಗವಾಗಿ ಸೇವಿಸುವುದರಿಂದ ನಮ್ಮ ಲಿವರ್ ಆರೋಗ್ಯವಾಗಿರಲು ಸಹಾಯಕವಾಗಿದೆ. ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಯಕೃತ್ತಿಗೆ ಹಾನಿ ಮಾಡುವ ಬ್ಯಾಕ್ಟೀರಿಯಾಗಳಿಂದ ರಕ್ಷಿಸುತ್ತವೆ.
ಕಾಫಿ ಕಾಫಿ ಬೆಳಿಗ್ಗೆ ಸೇವಿಸುವ ಅಭ್ಯಾಸ ಅರೋಗ್ಯವನ್ನು ಸುಧಾರಿಸುತ್ತದೆ. ಇದು ದೀರ್ಘಕಾಲದ ಪಿತ್ತಜನಕಾಂಗದ ಖಾಯಿಲೆಯ ಪರಿಣಾಮವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಕಾಫಿ ಕುಡಿಯುವುದರಿಂದ ಲಿವರ್ನಲ್ಲಿ ಕೊಬ್ಬಿನ ಹೆಚ್ಚಳ ಕಡಿಮೆಯಾಗುವುದಲ್ಲದೇ, ರಕ್ಷಣಾತ್ಮಕ ಉತ್ಕರ್ಷಣ ನಿರೋಧಕಗಳ ಉತ್ಪತ್ತಿಗೆ ಸಹಕಾರಿಯಾಗಿದೆ.
ಹಣ್ಣುಗಳು ಸ್ಟ್ರಾಬೆರಿ, ಬೆರಿ ಹಣ್ಣುಗಳಲ್ಲಿ ಹೆಚ್ಚು ಆ್ಯಂಟಿಆ್ಯಾಕ್ಸಿಡೆಂಟ್ ಪಾಲಿಫಿನಾಲ್ಗಳು ಕಂಡುಬರುತ್ತದೆ. ಇದು ಯಕೃತ್ತು ಹಾನಿಯಿಂದ ರಕ್ಷಿಸುತ್ತದೆ. ಆದ್ದರಿಂದ ಪ್ರತಿನಿತ್ಯ ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುವುದು ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಮೀನು, ಮೊಟ್ಟೆ ನೀವು ಮಾಂಸಹಾರಿಗಳಾಗಿದ್ದರೆ ಮೀನು, ಮೊಟ್ಟೆಯನ್ನು ಸೇವಿಸಬಹುದು. ಇದರಲ್ಲಿ ಮಿಥೈಲೇಷನ್ ಅಂಶಗಳು ಮತ್ತು ಗ್ಲುಟಾಥಿಯೋನ್, ಪ್ರೋಟೀನ್ಗಳು, ವಿಟಮಿನ್ ಮತ್ತು ಒಮೆಗಾ ಕೊಬ್ಬಿನಾಮ್ಲಗಳು ಅಧಿಕವಾಗಿರುತ್ತದೆ. ಇದು ದೇಹದಲ್ಲಿ ಉತ್ಕರ್ಷಣ ನಿರೋಧಕವಾಗಿದ್ದು ಉಕೃತ್ತಿನ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.
ಇದನ್ನೂ ಓದಿ:
Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು
Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ
(These tips for keep liver healthy check in kannada)