ಕೊರೊನಾ ವೈರಸ್​ನಿಂದ ಚೇತರಿಸಿಕೊಂಡ ಬಳಿಕವೂ ತಲೆ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆಯೇ?

Hair Fall: ನೀವು ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಡಯಟ್​ನಿಂದಾಗಿ ಕೂದಲು ಉದುರುವ ಸಮಸ್ಯೆ ಎದುರಾಗಬಹುದು. ಹಾಗಿರುವಾಗ ಕಾಲೋಚಿತ ಹಣ್ಣುಗಳೊಂದಿಗೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮ.

ಕೊರೊನಾ ವೈರಸ್​ನಿಂದ ಚೇತರಿಸಿಕೊಂಡ ಬಳಿಕವೂ ತಲೆ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆಯೇ?
ಸಂಗ್ರಹ ಚಿತ್ರ
Follow us
TV9 Web
| Updated By: preethi shettigar

Updated on: Aug 25, 2021 | 8:29 AM

ಕೊವಿಡ್19 ಸೋಂಕಿಗೆ  ಒಳಗಾದ ನಂತರದ ದಿನಗಳಲ್ಲಿ ಬಹಳಷ್ಟು ಜನರಿಗೆ ಕೂದಲು ಉದುರುವ ಸಮಸ್ಯೆ ಕಾಡುತ್ತಿರಬಹುದು. ಇದು ದೇಹದ ಒತ್ತಡದ ಜತೆಗೆ ರೋಗನಿರೋಧಕ ಶಕ್ತಿಯನ್ನು ಕುಂಠಿತಗೊಳಿಸಿರಬಹುದು. ಕೊರೊನಾ ವೈರಸ್​ನಿಂದ ಚೇತರಿಸಿಕೊಂಡ ಬಳಿಕವೂ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿರಬಹುದು. ಹಾಗಿರುವಾಗ ಈ ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ನಿಮ್ಮ ತಲೆಕೂದಲು ಸದೃಢತೆಯನ್ನು ಕಾಯ್ದುಕೊಳ್ಳಿ.

ನೀವು ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಡಯಟ್​ನಿಂದಾಗಿ ಕೂದಲು ಉದುರುವ ಸಮಸ್ಯೆ ಎದುರಾಗಬಹುದು. ಹಾಗಿರುವಾಗ ಕಾಲೋಚಿತ ಹಣ್ಣುಗಳೊಂದಿಗೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು ಉತ್ತಮ. ಇದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ, ಕೂದಲು ಬೆಳವಣಿಗೆ ಮತ್ತು ಕೂದಲು ಉದುರುವಿಕೆಯ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ದ್ರಾಕ್ಷಿ ಒಣ ದ್ರಾಕ್ಷಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ರಾತ್ರಿಯಲ್ಲಿ 5 ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಎದ್ದ ತಕ್ಷಣ ನೀರಿನ ಸಮೇತವಾಗಿ ಒಣದ್ರಾಕ್ಷಿಯನ್ನು ಸೇವಿಸಿ. ಇದರಿಂದ ನೀವು ಸದೃಢರಾಗುತ್ತೀರಿ ಮತ್ತು ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಕರಿಬೇವು 10 ಗ್ರಾಂ ಕರಿಬೇವಿನ ಪುಡಿಯನ್ನು ನೀರಿನಲ್ಲಿ ಕುದಿಸಿ. ಈ ಹೊಸ ರೀತಿಯ ಚಹಾವನ್ನು ಬೆಳಿಗ್ಗೆ ಎದ್ದ ತಕ್ಷಣ ಕುಡಿಯಿರಿ. ಇದರ ರುಚಿ ಸಾಮಾನ್ಯವಾಗಿ ಇಷ್ಟವಾಗುವುದಿಲ್ಲ. ಆದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೊಟ್ಟೆ ಮೊಟ್ಟೆಯಲ್ಲಿನ ಹಳದಿ ಯಾವಾಗಲೂ ಆರೋಗ್ಯಕರ ಕೊಬ್ಬುಗಳು ಮತ್ತು ಪ್ರೋಟೀನ್ಅನ್ನು ನೀಡುತ್ತದೆ ಎಂದು ಪರಿಗಣಿಸಲಾಗಿದೆ. ಮೊಟ್ಟೆಯೊಳಗಿನ ಹಳದಿಯಲ್ಲಿ ಬಯೋಟಿನ್, ವಿಟಮಿನ್ ಬಿ ಕಂಡು ಬರುತ್ತದೆ. ಇದು ಕೂದಲಿನ ಆರೋಗ್ಯಕ್ಕೆ ಮತ್ತು ಕೂದಲು ಬೆಳವಣಿಗೆಗೆ ಸಹಾಯಕ. ಜತೆಗೆ ತಲೆಯ ನೆತ್ತಿಯ ಭಾಗದ ಆರೋಗ್ಯವನ್ನು ಬಲಪಡಿಸಲು ಸಹಾಯಕವಾಗಿದೆ.

ಸೊಪ್ಪು ಪಾಲಾಕ್ ಆರೋಗ್ಯಕರ ಪೌಷ್ಟಿಕಾಂಶವನ್ನು ಹೊಂದಿರುವ ಉತ್ತಮ ಮೂಲವಾಗಿದೆ. ಇದರಲ್ಲಿ ವಿಟಮಿನ್ ಎ, ಕೆ, ಇ, ಸಿ, ಬಿ ಮತ್ತು ಮ್ಯಾಂಗನೀಸ್, ಸತು, ಕಬ್ಬಿಣ ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳ ಸಮೃದ್ಧವಾದ ಮೂಲವಾಗಿದೆ. ಇದು ಕೂಡಾ ಕೂದಲಿನ ಆರೋಗ್ಯವನ್ನು ಸುಧಾರಿಸಲು ಉತ್ತಮ ಪರಿಹಾರ ಮಾರ್ಗ. ಇದು ಜೀವಸತ್ವಗಳು ಕಾಲಜನ್ ಮತ್ತು ಕೆರಾಟಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ಕೂದಲು ಬೆಳವಣಿಗೆಯ ಪ್ರಕ್ರಿಯೆಯನ್ನು ವೇಗಗೊಳಿಸಲು ಸಹಾಯಕವಾಗಿದೆ.

ಧಾನ್ಯಗಳು ಧಾನ್ಯಗಳಲ್ಲಿ ವಿಟಮಿನ್ ಬಿ ಇದ್ದು ಇದು ಕೂದಲು ಒಡೆಯುವ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಕೂದಲಿನ ಬಲ ಮತ್ತು ಬೆಳವಣಿಗೆಯನ್ನು ಹೆಚ್ಚಿಸುತ್ತದೆ. ಓಟ್ಸ್, ಗೋಧಿ, ಬಾರ್ಲಿಯಲ್ಲಿ ಹೆಚ್ಚಿನ ಪ್ರಮಾಣದ ಸತು ಕಂಡು ಬರುತ್ತದೆ. ಇದು ಕೂದಲು ಉದುರುವ ಸಮಸ್ಯೆಗೆ ಪರಿಹಾರವಾಗಿದೆ. ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಕೂದಲು ಉದುರುವುದನ್ನು ತಡೆಯಲು ಸಹಾಯ ಮಾಡುತ್ತದೆ ಹಾಗೂ ಇದು ಕೂದಲಿನ ಬೆಳವಣಿಗೆ ಮತ್ತು ಬಲವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ:

Health Tips: ಯಕೃತ್ತಿನ ಆರೋಗ್ಯ ಕಾಪಾಡಲು ಈ ಕೆಲವು ಆಹಾರ ಪದಾರ್ಥಗಳ ಸೇವನೆ ಮುಖ್ಯ

Health Tips: ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ 6 ಆರೋಗ್ಯಕರ ತರಕಾರಿಗಳು

(These tips for post covid 19 hair fall problem)

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್