Weight Loss: ನಿಮ್ಮ ಅಡುಗೆಮನೆಯಲ್ಲಿರುವ ಈ ಪದಾರ್ಥಗಳು ತೂಕ ಇಳಿಕೆಗೆ ಸಹಕಾರಿ

ತೂಕ ( Weight) ಇಳಿಕೆ ಕಣ್ಣು ಮುಚ್ಚಿ ಬಿಡುವುದರೊಳಗೆ ಆಗುವಂಥದಲ್ಲ, ಯಾವುದೇ ಮಾತ್ರೆ, ಔಷಧಗಳನ್ನು ಸೇವಿಸಿದೆ ಅಸಹಜವಾಗಿ ತೂಕ ಇಳಿಸಿಕೊಳ್ಳುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ.

Weight Loss: ನಿಮ್ಮ ಅಡುಗೆಮನೆಯಲ್ಲಿರುವ ಈ ಪದಾರ್ಥಗಳು ತೂಕ ಇಳಿಕೆಗೆ ಸಹಕಾರಿ
Kitchen Ingredients
Follow us
TV9 Web
| Updated By: ನಯನಾ ರಾಜೀವ್

Updated on:Jun 10, 2022 | 1:17 PM

ತೂಕ ( Weight) ಇಳಿಕೆ ಕಣ್ಣು ಮುಚ್ಚಿ ಬಿಡುವುದರೊಳಗೆ ಆಗುವಂಥದಲ್ಲ, ಯಾವುದೇ ಮಾತ್ರೆ, ಔಷಧಗಳನ್ನು ಸೇವಿಸಿದೆ ಅಸಹಜವಾಗಿ ತೂಕ ಇಳಿಸಿಕೊಳ್ಳುವುದರಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆಯುರ್ವೇದ ಗಿಡಮೂಲಿಕೆಗಳು ಅಥವಾ ನಿಮ್ಮ ಅಡುಗೆಮನೆಯಲ್ಲೇ ಸಿಗುವ ಪದಾರ್ಥಗಳಿಂದ ತೂಕ ಇಳಿಕೆ ಮಾಡಿಕೊಳ್ಳಬಹುದು.

ಗಿಡಮೂಲಿಕೆಗಳು ಹಾಗೂ ಮಸಾಲೆ ಪದಾರ್ಥಗಳಿಂದ ತೂಕೆ ಇಳಿಸಿಕೊಳ್ಳಬಹುದು. ಆಯುರ್ವೇದ ಗಿಡಮೂಲಿಕೆಗಳು ನಿಮ್ಮ ದೇಹದಲ್ಲಿರುವ ಬೊಜ್ಜನ್ನು ಕರಗಿಸಿ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ನಿಮ್ಮ ತೂಕ ಕಡಿಮೆ ಮಾಡಿಕೊಳ್ಳುವುದರಲ್ಲಿ ಮತ್ತು ಅದರ ನಿರ್ವಹಣೆಯಲ್ಲಿ ಆಯುರ್ವೇದವು ವಿಶೇಷವಾದ ಪಾತ್ರವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ಮತ್ತು ಅದರ ನಿರ್ವಹಣೆಗಾಗಿ ಆಯುರ್ವೇದವು ವಿವಿಧ ಗಿಡಮೂಲಿಕೆಗಳು ಮತ್ತು ಮಸಾಲೆಗಳನ್ನು ಉಲ್ಲೇಖಿಸುತ್ತದೆ.

ಕಾಳುಮೆಣಸು: ಕಾಳುಮೆಣಸಿನಲ್ಲಿ ವಿಟಮಿನ್ ಎ, ಸಿ ಹಾಗೂ ಕೆ ಅಂಶವಿದ್ದು ಅದರ ಜತೆಗೆ ಮಿನರಲ್ಸ್ ಕೂಡ ಇದ್ದು ಫ್ಯಾಟಿ ಆಸಿಡ್​ಗಳನ್ನು ಕರಗಿಸಲು ಸಹಕಾರಿಯಾಗಿದೆ. ಇದನ್ನು ಮೆಟಾಬಾಲಿಕ್ ಬೂಸ್ಟರ್ ಎಂದೇ ಕರೆಯಲಾಗುತ್ತದೆ.

ಶುಂಠಿ: ಆಹಾರದಲ್ಲಿ ಶುಂಠಿಯನ್ನು ಹೆಚ್ಚು ಬಳಕೆ ಮಾಡುವುದರಿಂದ ಜೀರ್ಣಕ್ರಿಯೆ ಹೆಚ್ಚು ಸಹಕಾರಿಯಾಗುತ್ತದೆ. ನೀವು ತಿನ್ನುವ ಆಹಾರವು ಸುಲಭವಾಗಿ ಜೀರ್ಣವಾದಾಗ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ನಿಮ್ಮ ಬಳಿ ಸುಳಿಯುವುದಿಲ್ಲ.

ದಾಲ್ಚಿನ್ನಿ ಚಕ್ಕೆ: ತೂಕ ಇಳಿಕೆ ಚಕ್ಕೆಯು ತುಂಬಾ ಸಹಕಾರಿಯಾಗಿದೆ, ರಕ್ತದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ. ಹಾಲು, ಟೀ ಅಥವಾ ಯೋಗರ್ಟ್​ನಲ್ಲಿ ಮಿಕ್ಸ್ ಮಾಡಿ ಸೇವಿಸಬಹುದು.

ಅರಿಶಿನ: ಅರಿಶಿನವನ್ನು ದಿನದ ಡಯೆಟ್​ನಲ್ಲಿ ಬಳಕೆ ಮಾಡಿ, ಇದರಿಂದ ರೋಗ ನಿರೋಧಕ ಶಕ್ತಿಯು ವೃದ್ಧಿಯಾಗುತ್ತದೆ. ಅರಿಶಿನದಲ್ಲಿ ಆಂಟಿಆಕ್ಸಿಡೆಂಟ್ಸ್​ಗಳಿವೆ. ಇವು ತೂಕ ಇಳಿಕೆಗೆ ತುಂಬಾ ಸಹಕಾರಿಯಾಗಿದೆ. ಬೆಚ್ಚನೆಯ ಹಾಲು, ಸ್ಮೂದಿಗಳಲ್ಲಿ ಬಳಕೆ ಮಾಡಬಹುದು. ಅರಿಶಿನವು ತೂಕ ನಿರ್ವಹಣಾ ಗುಣಲಕ್ಷಣಗಳನ್ನು ಹೊಂದಿದೆ. ಅರಿಶಿನವು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಇದು ತೂಕ ಕಳೆದುಕೊಳ್ಳಲು ಬಯಸುವವರಿಗೆ ಉತ್ತಮ ಸಂಕೇತವಾಗಿದೆ.

ಜೀರಿಗೆ: ಜೀರಿಗೆಯು ಕೂಡ ತೂಕ ಇಳಿಕೆಗೆ ತುಂಬಾ ಸಹಕಾರಿಯಾಗಿದೆ, ಇದು ಜೀರ್ಣಕ್ರಿಯೆನ್ನು ಉತ್ತಮವಾಗಿಸುತ್ತದೆ. ಜೀರಿಗೆಯನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಆ ನೀರನ್ನು ಕುಡಿಯುವುದರಿಂದ ಕೇವಲ ತೂಕ ಇಳಿಕೆ ಮಾತ್ರವಲ್ಲದೆ ಗ್ಯಾಸ್ಟ್ರಿಕ್ ಸಮಸ್ಯೆಯನ್ನೂ ನಿವಾರಿಸುತ್ತದೆ. ಜೀರಿಗೆ ಚಯಾಪಚಯವನ್ನು ಪ್ರಚೋದಿಸುವ ಅಂಶಗಳನ್ನು ಹೊಂದಿದೆ, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಜೀರಿಗೆಯು ಹೊಟ್ಟೆ ಉಬ್ಬರ ಮತ್ತು ಕರುಳಿನಲ್ಲಿ ಅನಿಲ ರಚನೆಯನ್ನು ತಡೆಯುತ್ತದೆ ಎಂದು ತಿಳಿದು ಬಂದಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Fri, 10 June 22

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್