Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸೈನಸ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಯೋಗ ಭಂಗಿಗಳು ಮುಖ್ಯ

ಸನೈಸ್​ ಸಮಸ್ಯೆ ಕಾಡುತ್ತಿರುವಾಗ ಉಸಿರಾಟದಲ್ಲಿ ಸಾಕಷ್ಟು ತೊಂದರೆಗಳಾಗುತ್ತವೆ. ಈ ಸಮಸ್ಯೆಯನ್ನು ಸೈನುಟಿಸ್ ಎಂದು ಕರೆಯಲಾಗುತ್ತದೆ. ಸಾಮಾನ್ಯ ಭಾಷೆಯಲ್ಲಿ ಸೈನಸ್ ಎನ್ನುತ್ತಾರೆ. ಸೈನಸ್‌ನಿಂದ ಪರಿಹಾರ ಪಡೆಯಲು ನೀವು ಈ 5 ಯೋಗಾಸನಗಳನ್ನು ರೂಢಿಯಲ್ಲಿಟ್ಟುಕೊಳ್ಳಿ.

Health Tips: ಸೈನಸ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಯೋಗ ಭಂಗಿಗಳು ಮುಖ್ಯ
ಯೋಗ, ಧ್ಯಾನ
Follow us
TV9 Web
| Updated By: shruti hegde

Updated on: Jul 08, 2021 | 12:03 PM

ಇತ್ತೀಚೆಗೆ ಜನರಲ್ಲಿ ಸೈನಸ್​ ಸಮಸ್ಯೆ ಹೆಚ್ಚು ಕಾಡುತ್ತಿದೆ. ಇದರಿಂದ ತಲೆನೋವಿನ ಸಮಸ್ಯೆ ಅತಿಯಾಗಿ ಕಾಡುತ್ತಿದೆ ಎಂಬುದೆ ಜನರ ಆತಂಕ. ಹಾಗಿರುವಾಗ ಕೆಲವು ಯೋಗ ಭಂಗಿಗಳನ್ನು ಮಾಡುವ ಮೂಲಕ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದಾಗಿದೆ. ಯೋಗವು ದೈಹಿಕ ವ್ಯಾಯಾಮ, ಉಸಿರಾಟದ ನಿಯಂತ್ರಣ, ವಿಶ್ರಾಂತಿ, ಆಹಾರ ನಿಯಂತ್ರಣದ ಜತೆಗೆ ದೇಹ, ಮನಸ್ಸು ಮತ್ತು ಪರಿಸರದಲ್ಲಿ ಸಾಮರಸ್ಯವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದು ದೈಹಿಕ ಸ್ಥಿತಿಯನ್ನು ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. 

ಸನೈಸ್​ ಸಮಸ್ಯೆ ಕಾಡುತ್ತಿರುವಾಗ ಉಸಿರಾಟದಲ್ಲಿ ಸಾಕಷ್ಟು ತೊಂದರೆಗಳಾಗುತ್ತವೆ. ಈ ಸಮಸ್ಯೆಯನ್ನು ಸೈನುಟಿಸ್ ಎಂದು ಕರೆಯಲಾಗುತ್ತದೆ. ಸಾಮಾನ್ಯ ಭಾಷೆಯಲ್ಲಿ ಸೈನಸ್ ಎನ್ನುತ್ತಾರೆ. ಅಲರ್ಜಿಯಿಂದಾಗಿ ಅನೇಕ ಜನರು ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಬದಲಾಗುತ್ತಿರುವ ಹವಾಮಾನ ಮತ್ತು ಪರಿಸರ ಮಾಲಿನ್ಯದಿಂದಾಗಿ ಸೈನಸ್‌ನ ಸಮಸ್ಯೆ ಹೆಚ್ಚಾಗುತ್ತದೆ. ನಿರಂತರ ಸೈನುಟಿಸ್ ಸಮಸ್ಯೆಯು ಆಸ್ತಮಾ ರೋಗಕ್ಕೆ ಕಾರಣವಾಗಬಹುದು. ಸೈನಸ್‌ನಿಂದ ಪರಿಹಾರ ಪಡೆಯಲು ನೀವು ಈ 5 ಯೋಗಾಸನಗಳನ್ನು ಮಾಡಿ.

ಗೋಮುಖಾಸನ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅಭ್ಯಾಸ ಮಾಡಿದರೆ ಒಳ್ಳೆಯದು. ಈ ಭಂಗಿ ಎದೆಯ ಸ್ನಾಯುಗಳನ್ನು ವಿಸ್ತರಿಸುತ್ತದೆ. ಉಸಿರಾಟದ ಕ್ರಿಯೆಯಲ್ಲಿ ನಮ್ಯತೆಯನ್ನು ಹೆಚ್ಚಿಸುತ್ತದೆ. ದೇಹದ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯಕ. ನೀವು ದಣಿದಿದ್ದರೆ ಮತ್ತು ಚಿಂತೆ ಮಾಡುತ್ತಿದ್ದರೆ ಈ ಯೋಗ ಆಸನವನ್ನು ಅಭ್ಯಾಸ ಮಾಡಬಹುದು.

ಜಾನು ಶೀರ್ಷಾಸನ

ಈ ಆಸನದಲ್ಲಿ ಕುಳಿತುಕೊಳ್ಳುವ ಸ್ಥಾನದಲ್ಲಿ ಮೊಣಕಾಲಿಗೆ ನಿಮ್ಮ ತಲೆಯನ್ನು ಸ್ಪರ್ಶಿಸಬೇಕಾಗುತ್ತದೆ. ಬೆಳಿಗ್ಗೆ ಅಥವಾ ಸಂಜೆಯ ಸಮಸಯದಲ್ಲಿ ಖಾಲಿ ಹೊಟ್ಟೆಯಲ್ಲಿ ಅಭ್ಯಾಸ ಮಾಡಿದರೆ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಮನಸ್ಸು ಶಾಂತವಾಗಿರುತ್ತದೆ. ಉಸಿರಾಟ ಕ್ರಿಯೆಯನ್ನು ಸುಲಭಗೊಳಿಸುತ್ತದೆ.  ತಲೆನೋವು, ಆಯಾಸ ಮತ್ತು ಆತಂಕ ನಿವಾರಣೆಗೆ ಸಹಾಯಕವಾಗಿದೆ. ಜತೆಗೆ ನಿದ್ರಾಹೀನತೆ ಸಮಸ್ಯೆಯನ್ನು ಗುಣಪಡಿಸುತ್ತದೆ.

ಉಷ್ಟ್ರಾಸನ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಯೋಗ ಭಂಗಿಯನ್ನು ಅಭ್ಯಾಸ ಮಾಡುವುದು ಒಳ್ಳೆಯದು. ನಿಮ್ಮ ಉಸಿರಾಟ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಗಂಟಲು ಮತ್ತು ಎದೆಯನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಈ ಆಸನವು ನಿಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ.

ಸೇತು ಬಂಧಾಸನ

ಬೆನ್ನಿನ ಒತ್ತಡವನ್ನು ನಿವಾರಿಸಲು ಈ ಯೋಗ ಭಂಗಿ ಸಹಾಯ ಮಾಡುತ್ತದೆ. ಈ ಆಸನವು ಕುತ್ತಿಗೆ ಮತ್ತು ಎದೆಯ ಭಾಗವನ್ನು ಸಡಿಲಗೊಳಿಸುತ್ತದೆ.  ಖಿನ್ನತೆ ಮತ್ತು ಆತಂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

Yoga Benefits: ಬೆಳಗ್ಗೆ ಬೇಗ ಎದ್ದು ಮಾಡುವ ಯೋಗ ಭಂಗಿಗಳಿವು

Health Tips: ಸೈನಸ್ ಸಮಸ್ಯೆಯ ನಿವಾರಣೆಗೆ ಸರಳ ಉಪಾಯ; ಮನೆಯಲ್ಲೇ ತಯಾರಿಸಬಹುದಾದ ಔಷಧಿಗಳ ಬಗ್ಗೆ ಗಮನಹರಿಸಿ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ