Cardamom health benefits: ಏಲಕ್ಕಿಯಲ್ಲಿರುವ ಆರೋಗ್ಯ ಪ್ರಯೋಜನ ತಿಳಿದರೆ ಅಚ್ಚರಿ ಪಡುತ್ತೀರಾ

ಏಲಕ್ಕಿ ಗಾತ್ರದಲ್ಲಿ ಚಿಕ್ಕದಾಗಿ ಕಂಡರೂ ಇದರ ಉಪಯೋಗವನ್ನು ನೀವು ಊಹಿಸಲೂ ಸಾಧ್ಯವಾಗುವುದಿಲ್ಲ. ನಮ್ಮ ಪೂರ್ವಜರು ಇದನ್ನು ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಉಪಯೋಗ ಮಾಡುತ್ತಿದ್ದರು. ಇದರ ಪರಿಮಳ ಭರಿತ ಸುವಾಸನೆ ಆಹಾರದ ರುಚಿಯನ್ನು ಹೆಚ್ಚಿಸುವಂತೆ ಇದರಲ್ಲಿರುವ ಔಷಧೀಯ ಗುಣಗಳು ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Cardamom health benefits: ಏಲಕ್ಕಿಯಲ್ಲಿರುವ ಆರೋಗ್ಯ ಪ್ರಯೋಜನ ತಿಳಿದರೆ ಅಚ್ಚರಿ ಪಡುತ್ತೀರಾ
ಏಲಕ್ಕಿ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 18, 2024 | 5:46 PM

ಅಡುಗೆ ಮನೆಯಲ್ಲಿ ಏಲಕ್ಕಿ ಇದ್ದರೆ ನೀವು ಕೆಲವು ಆರೋಗ್ಯ ಸಮಸ್ಯೆಗಳು ಬಂದರೆ ಹೆದರುವ ಅವಶ್ಯಕತೆ ಇರುವುದಿಲ್ಲ. ಗಾತ್ರದಲ್ಲಿ ಚಿಕ್ಕದಾಗಿ ಕಂಡರೂ ಇದರ ಉಪಯೋಗವನ್ನು ನೀವು ಊಹಿಸಲೂ ಸಾಧ್ಯವಾಗುವುದಿಲ್ಲ. ನಮ್ಮ ಪೂರ್ವಜರು ಇದನ್ನು ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಉಪಯೋಗ ಮಾಡುತ್ತಿದ್ದರು. ಇದರ ಪರಿಮಳ ಭರಿತ ಸುವಾಸನೆ ಆಹಾರದ ರುಚಿಯನ್ನು ಹೆಚ್ಚಿಸುವಂತೆ ಇದರಲ್ಲಿರುವ ಔಷಧೀಯ ಗುಣಗಳು ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

  • ಏಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದಿರಬಹುದು. ಊಟದ ನಂತರ ಎರಡು ಏಲಕ್ಕಿ ತಿನ್ನುವುದರಿಂದ ಜೀರ್ಣಕ್ರಿಯೆ ಹೆಚ್ಚುತ್ತದೆ. ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.
  • ಏಲಕ್ಕಿಯಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಏಲಕ್ಕಿ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಗಂಟಲು ನೋವು ನಿವಾರಣೆಯಾಗುತ್ತದೆ. ಶೀತ ಮತ್ತು ಕೆಮ್ಮನ್ನು ನಿವಾರಿಸುತ್ತದೆ.
  • ಏಲಕ್ಕಿಯನ್ನು ಮಕ್ಕಳ ಆಹಾರದಲ್ಲಿ ನೀಡುವುದರಿಂದ ಅವರ ಮೂಳೆಗಳು ಬಲಗೊಳ್ಳುತ್ತದೆ.
  • ಏಲಕ್ಕಿ ತಿನ್ನುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಹಾಗಾಗಿಯೇ ಇದರ ರಸವನ್ನು ಅನೇಕ ಮೌತ್ ಫ್ರೆಶನರ್ ಗಳಿಗೆ ಸೇರಿಸಲಾಗುತ್ತದೆ.
  • ಏಲಕ್ಕಿ ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ. ಜೊತೆಗೆ ಊಟದ ನಂತರ ಏಲಕ್ಕಿ ಸೇವಿಸಿದರೆ ತೂಕ ಕಡಿಮೆಯಾಗುತ್ತದೆ.
  • ರಕ್ತದೊತ್ತಡ ಹೆಚ್ಚಿದ್ದರೆ ಏಲಕ್ಕಿ ತಿನ್ನಬೇಕು. ಏಕೆಂದರೆ ಇದರ ನಿಯಮಿತ ಸೇವನೆಯಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
  • ಏಲಕ್ಕಿ ಯಕೃತ್ತಿನ ಆರೋಗ್ಯಕ್ಕೆ ಸಹಕಾರಿ. ಯಕೃತ್ತು ದೊಡ್ಡದಾಗುವುದನ್ನು ಇದು ತಡೆಯುತ್ತದೆ.
  • ಆತಂಕ ಮತ್ತು ಒತ್ತಡಗಳಿಂದ ಬಳಲುವವರು ಏಲಕ್ಕಿ ಸೇವನೆಯನ್ನು ಆರಂಭಿಸಬಹುದು.
  • ಮಾನವರನ್ನು ಕಾಡುವ ಉದರದ ಹುಣ್ಣು (ಅಲ್ಸರ್) ಗಳಿಗೆ ಏಲಕ್ಕಿ ಪ್ರಯೋಜನಕಾರಿಯಾಗಬಹುದು.
  • ಸಿಹಿ ತಿಂದ ನಂತರ ಏಲಕ್ಕಿ ಸೇವನೆ ಮಾಡುವುದರಿಂದ ಹಲ್ಲುಗಳಲ್ಲಿ ಕುಳಿ ಬೀಳುವುದನ್ನು ತಡೆಯಬಹುದು.
  • ಏಲಕ್ಕಿಗೆ ರೋಗಾಣುಗಳ ವಿರುದ್ಧ ಹೋರಾಡುವ ಶಕ್ತಿ ಇದೆ ಮತ್ತು ಅದು ಸೋಂಕುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಲ್ಲದು ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಸಂಬಂಧ ಪಟ್ಟಂತೆ ಹೆಚ್ಚಿನ ಅಧ್ಯಯನಗಳ ಅವಶ್ಯಕತೆ ಇದೆ.
  • ಏಲಕ್ಕಿಯಲ್ಲಿರುವ ಉರಿಯೂತ ನಿವಾರಕ ಗುಣಗಳು ಅಸ್ತಮಾ, ಬ್ರಾಂಖೈಟಿಸ್ ಮೊದಲಾದ ಶ್ವಾಸ ಸಂಬಂಧಿ ತೊಂದರೆಗಳಿಂದ ರಕ್ಷಿಸುತ್ತದೆ ಹಾಗೂ ಶ್ವಾಸನಾಳಗಳಲ್ಲಿ ತೇವವನ್ನು ಹೆಚ್ಚಿಸುವ ಮೂಲಕ ಗಂಟಲಲ್ಲಿ ಎದುರಾಗುವ ತುರಿಕೆ ಮತ್ತು ಒಣಗುವಿಕೆಯನ್ನು ನಿವಾರಣೆ ಮಾಡುತ್ತದೆ. ಆ ಮೂಲಕ ಶ್ವಾಸವ್ಯವಸ್ಥೆಯ ಆರೋಗ್ಯವನ್ನು ವೃದ್ದಿಸುತ್ತದೆ.
  • ಇದರಲ್ಲಿ ವಿಟಮಿನ್ ಎ ಹೇರಳವಾಗಿದ್ದು ತ್ವಚೆಯ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೆ ವಿಟಮಿನ್ ಎ ಕಣ್ಣುಗಳಿಗೆ ಕೂಡ ಒಳ್ಳೆಯದು.

ಏಲಕ್ಕಿಯನ್ನು ಅದರಲ್ಲಿರುವ ಔಷಧೀಯ ಗುಣಗಳಿಗಾಗಿ ಉಪಯೋಗಿಸಲಾಗುತ್ತಿರುವುದರಿಂದ ಸುರಕ್ಷಿತ ಎನ್ನಲಡ್ಡಿಯಿಲ್ಲ. ಯಾವುದಕ್ಕೂ ಏಲಕ್ಕಿ ಸೇವನೆ ಆರಂಭಿಸುವ ಮುನ್ನ ನಿಮ್ಮ ವೈದ್ಯರನ್ನು ಸಂಪರ್ಕಿಸುವುದು ಒಳಿತು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ