ಉಪ್ಪನ್ನು ಹೆಚ್ಚು ಸೇವಿಸುತ್ತೀರಾ, ಈ ಗಂಭೀರ ಕಾಯಿಲೆ ಬರಬಹುದು ಎಚ್ಚರ

ಭಾರತದಲ್ಲಿ ಕೋಟಿಗಟ್ಟಲೆ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಎಲ್ಲಾ ವಯಸ್ಸಿನ ಜುನರಲ್ಲೂ ಕಾಣಬಹುದು.

ಉಪ್ಪನ್ನು ಹೆಚ್ಚು ಸೇವಿಸುತ್ತೀರಾ, ಈ ಗಂಭೀರ ಕಾಯಿಲೆ ಬರಬಹುದು ಎಚ್ಚರ
Salt
Follow us
TV9 Web
| Updated By: ನಯನಾ ರಾಜೀವ್

Updated on:Nov 15, 2022 | 2:16 PM

ಭಾರತದಲ್ಲಿ ಕೋಟಿಗಟ್ಟಲೆ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಎಲ್ಲಾ ವಯಸ್ಸಿನ ಜನರಲ್ಲೂ ಕಾಣಬಹುದು. ಕಳಪೆ ಜೀವನಶೈಲಿ, ಅನಾರೋಗ್ಯಕರ ಆಹಾರ ಮತ್ತು ಒತ್ತಡವು ಅಧಿಕ ರಕ್ತದೊತ್ತಡವನ್ನು ಉಂಟು ಮಾಡಬಹುದು. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕೂಡ ಹೆಚ್ಚಿಸುತ್ತದೆ. ಅದೇ ಸಮಯದಲ್ಲಿ ಅತಿಯಾದ ಉಪ್ಪು ಸೇವನೆ ಇದಕ್ಕೆ ಮುಖ್ಯ ಕಾರಣಗಳಲ್ಲಿ ಒಂದಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ನೀಡಿರುವ ಮಾಹಿತಿ ಪ್ರಕಾರ, ದಿನಕ್ಕೆ ಐದು ಗ್ರಾಂಕ್ಕಿಂತ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ರಕ್ತದೊತ್ತಡ ಉಂಟಾಗುವ ಸಾಧ್ಯತೆಗಳು ಹೆಚ್ಚಾಗುತ್ತದೆ. ಇದು ಭವಿಷ್ಯದಲ್ಲಿ ಹೃದಯ ಕಾಯಿಲೆಗಳಿಗೆ ಕಾರಣವಾಗಬಹುದು, ಅಮೆರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್​ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ಆಹಾರದಲ್ಲಿ ಸಾಮಾನ್ಯವಾಗಿ 3.8 ಗ್ರಾಂ ಇರುತ್ತದೆ, ಇದು ತಿಂದ ಬಳಿಕ ರಕ್ತನಾಳಗಳನ್ನು ತೆರೆಯುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಅಪಧಮನಿಗಳ ಕಿರಿದಾಗುವಿಕೆಗೆ ಕಾರಣವಾಗುತ್ತದೆ. ಮತ್ತು ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ಅಚ್ಚರಿಯ ವಿಷಯವೆಂದರೆ ಈ ಸ್ಥಿತಿಯು ಆಹಾರ ಸೇವಿಸಿದ ಅರ್ಧ ಗಂಟೆಯ ನಂತರ ಮಾತ್ರ ರೂಪುಗೊಳ್ಳಲು ಪ್ರಾರಂಭಿಸುತ್ತದೆ.

ಹೆಚ್ಚುವರಿ ಉಪ್ಪು ದೇಹಕ್ಕೆ ಹಾನಿ ಉಂಟು ಮಾಡುತ್ತದೆ ಆಹಾರದಲ್ಲಿ ಉಪ್ಪು ಸೇವನೆಯು ರಕ್ತದೊತ್ತಡ, ಸಾಮಾನ್ಯ ಹೃದಯ ಕಾಯಿಲೆ ಅಪಾಯವನ್ನು ಹೆಚ್ಚಿಸುತ್ತದೆ. ಯಾವುದೇ ವ್ಯಕ್ತಿಯು ಇಡೀ ದಿನದಲ್ಲಿ ಯಾವುದೇ ಸ್ಥಿತಿಯಲ್ಲಿ ಐದು ಗ್ರಾಂಗಿಂತಹೆಚ್ಚು ಉಪ್ಪನ್ನು ಸೇವಿಸಬಾರದು ಮತ್ತು ಇಡೀ ದಿನದಲ್ಲಿ ಕೇವಲ 2 ಗ್ರಾಂ ಉಪ್ಪು ಮಾತ್ರ ನಿಮ್ಮ ದೇಹಕ್ಕೆ ಹೋಗಬೇಕು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರು ದಿನಕ್ಕೆ 1.5 ಗ್ರಾಂಗಿಂತ ಹೆಚ್ಚು ಉಪ್ಪನ್ನು ಸೇವಿಸುವುದು ಹಾನಿಕಾರಕ.

ವಯಸ್ಕರು ದಿನಕ್ಕೆ ಎರಡು ಗ್ರಾಂಗಿಂತ ಹೆಚ್ಚು ಸೋಡಿಯಂ ಅನ್ನು ಸೇವಿಸಬಾರದು, ಅಂದರೆ, ಪ್ರತಿದಿನ ಐದು ಗ್ರಾಂಗಿಂತ ಹೆಚ್ಚು ಉಪ್ಪನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರ.

ರುಚಿಕರವಾದ ಆಹಾರವೂ ಕೂಡ ಉಪ್ಪು ಇಲ್ಲದಿದ್ದರೆ ಸಪ್ಪೆಯಾಗಿರುತ್ತದೆ, ಉಪ್ಪು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರಿಂದ ನಾವು ಅಯೋಡಿನ್ ಪಡೆಯುತ್ತೇವೆ. ಇದು ಥೈರಾಯ್ಡ್​ ಗ್ರಂಥಿಯನ್ನು ನಿಯಂತ್ರಿಸುತ್ತದೆ ಮತ್ತು ದೇಹದಲ್ಲಿನ ದ್ರವದ ಪ್ರಮಾಣವನ್ನು ಅಮತೋಲಗೊಳಿಸುತ್ತದೆ.

ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಆದರೆ ಅದರ ಅತಿಯಾದ ಬಳಕೆಯು ದೇಹವನ್ನು ಕೆಟ್ಟದಾಗಿ ಹಾನಿಗೊಳಿಸುತ್ತದೆ. ನೀವು ಹಗಲಿನಲ್ಲಿ ಎಷ್ಟು ಸೋಡಿಯಂ ಸೇವಿಸುತ್ತೀರಿ ಎಂಬುದನ್ನು ಗಮನಿಸಬೇಕು. ನಿಮ್ಮ ಆಹಾರದಲ್ಲಿ ಉಪ್ಪಿನ ಬಳಕೆಯನ್ನು ಮಿತಗೊಳಿಸಿದರೆ ನೀವು ಅನೇಕ ರೋಗಗಳನ್ನು ತಪ್ಪಿಸಬಹುದು ಮತ್ತು ಆರೋಗ್ಯಕರ ಜೀವನವನ್ನು ಆನಂದಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Tue, 15 November 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್