
ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಈ ಸಮಸ್ಯೆಯಲ್ಲಿ ಆಹಾರ ಪದ್ಧತಿ ಬಹಳ ಮಹತ್ವದ್ದಾಗಿದ್ದು, ಕೆಟ್ಟ ಆಹಾರ ಸೇವನೆಯಿಂದ ಸಮಸ್ಯೆ ಇನ್ನಷ್ಟು ಗಂಭೀರವಾಗಬಹುದು. ನಿಮಗೆ ತಿಳಿರಿರಬಹುದು ಥೈರಾಯ್ಡ್ ಒಂದು ಗ್ರಂಥಿಯಾಗಿದ್ದು, ಇದು ಕುತ್ತಿಗೆಯ ಭಾಗದಲ್ಲಿ ಇರುತ್ತದೆ ಮತ್ತು ದೇಹದ ಮೆಟಾಬಾಲಿಸಮ್‌ನ್ನು ನಿಯಂತ್ರಿಸುತ್ತದೆ. ಇದು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು, ದಣಿವು, ಕೂದಲು ಉದುರುವುದು ಮುಂತಾದ ಸಮಸ್ಯೆಗಳು ಕಂಡುಬರಬಹುದು. ಜೀವನಶೈಲಿ, ಒತ್ತಡ, ಹಾರ್ಮೋನ್ ಬದಲಾವಣೆಗಳು ಮತ್ತು ಪೌಷ್ಟಿಕಾಂಶ ಕೊರತೆ ಇದಕ್ಕೆ ಕಾರಣವಾಗಬಹುದು. ಹಾಗಾಗಿ ಥೈರಾಯ್ಡ್ ಸಮಸ್ಯೆ ಬರಬಾರದು ಎಂದರೆ ಅಥವಾ ಈಗಾಗಲೇ ಈ ರೀತಿಯ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತವರು ತಮ್ಮ ಆಹಾರಕ್ರಮದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಬಹಳ ಉತ್ತಮ. ಹಾಗಾದರೆ ಥೈರಾಯ್ಡ್ ಸಮಸ್ಯೆ ಇದ್ದಾಗ ಯಾವ ರೀತಿಯ ಆಹಾರಗಳ ಸೇವನೆ ಮಾಡಬಾರದು, ಜೀವನಶೈಲಿಯಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಇದನ್ನೂ ಓದಿ: ಈ ಮೂರು ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷ್ಯ ಮಾಡಬೇಡಿ; ಇದು ಥೈರಾಯ್ಡ್ ಸಮಸ್ಯೆ ಬರುವ ಮುನ್ಸೂಚನೆಯಾಗಿರಬಹುದು
ಒಟ್ಟಿನಲ್ಲಿ, ಸರಿಯಾದ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಥೈರಾಯ್ಡ್ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು. ಅದರ ಜೊತೆಗೆ ತಜ್ಞರ ಸಲಹೆಯನ್ನು ಪಾಲಿಸುವುದು ಕೂಡ ಬಹಳ ಮುಖ್ಯ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ