AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈರಾಯ್ಡ್ ಸಮಸ್ಯೆ ಇದ್ಯಾ? ಹಾಗಿದ್ರೆ ಚಳಿಗಾಲದಲ್ಲಿ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬೇಡಿ

ಚಳಿಗಾಲದಲ್ಲಿ ಥೈರಾಯ್ಡ್ ಸಮಸ್ಯೆ ಇರುವವರು ತಾವು ಸೇವಿಸುವ ಆಹಾರಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಏಕೆಂದರೆ ಈ ಸಮಯದಲ್ಲಿ ಥೈರಾಯ್ಡ್ ಸಮಸ್ಯೆ ಹೆಚ್ಚಾಗುವ ಭಯವಿರುವುದರಿಂದ ಆಹಾರ ಸೇವನೆಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾಗಿ ಈ ಋತುವಿನಲ್ಲಿ ಥೈರಾಯ್ಡ್ ರೋಗಿಗಳು ಯಾವ ಆಹಾರಗಳನ್ನು ಸೇವಿಸಬಾರದು ಮತ್ತು ಯಾವುದು ಅವರ ಆರೋಗ್ಯ ಕಾಪಾಡಲು ಸಹಕಾರಿ ಎಂಬುದನ್ನು ಡಾ. ಅಮಿತ್ ಕುಮಾರ್ ಅವರು ತಿಳಿಸಿದ್ದು ಈ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

ಥೈರಾಯ್ಡ್ ಸಮಸ್ಯೆ ಇದ್ಯಾ? ಹಾಗಿದ್ರೆ ಚಳಿಗಾಲದಲ್ಲಿ ಈ ಆಹಾರಗಳನ್ನು ಅಪ್ಪಿತಪ್ಪಿಯೂ ಸೇವನೆ ಮಾಡಬೇಡಿ
Thyroid Diet In Winter
ಪ್ರೀತಿ ಭಟ್​, ಗುಣವಂತೆ
|

Updated on: Dec 28, 2025 | 7:20 PM

Share

ಚಳಿಗಾಲದಲ್ಲಿ ಥೈರಾಯ್ಡ್ (Thyroid) ರೋಗಿಗಳು ಆರೋಗ್ಯದ ಬಗ್ಗೆ ಸ್ವಲ್ಪ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಶೀತ ಹೆಚ್ಚಾದಂತೆ, ದೇಹದಲ್ಲಿ ಆಲಸ್ಯ, ಆಯಾಸ, ತೂಕ ಹೆಚ್ಚಾಗುವುದು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಉದ್ಭವಿಸಬಹುದು. ಅದರಲ್ಲಿಯೂ ಥೈರಾಯ್ಡ್ ಇರುವಾಗ, ಔಷಧಿಗಳ ಜೊತೆಗೆ, ಸರಿಯಾದ ಆಹಾರ ಸೇವನೆಯೂ ಸಹ ಬಹಳ ಮುಖ್ಯವಾಗುತ್ತದೆ. ಹೆಚ್ಚು ಹುರಿದ ಮತ್ತು ಸಿಹಿ ಅಂಶವಿರುವ ಆಹಾರ ಸೇವನೆ ಥೈರಾಯ್ಡ್ ರೋಗಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ಈ ರೀತಿಯ ಅನುಚಿತ ಆಹಾರ ಪದ್ಧತಿ, ಔಷಧಿಗಳ ಪರಿಣಾಮವನ್ನು ಕೂಡ ಕಡಿಮೆ ಮಾಡಬಹುದು. ಹಾಗಾಗಿ ರೋಗಲಕ್ಷಣಗಳು ನಿಯಂತ್ರಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಚಳಿಗಾಲದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಮತ್ತು ಮಾಡಬಾರದು ಎಂಬುದರ ಬಗ್ಗೆ ವಿಶೇಷ ಗಮನ ಹರಿಸುವುದು ಮುಖ್ಯವಾಗುತ್ತದೆ. ಹಾಗಾದರೆ, ಥೈರಾಯ್ಡ್ ರೋಗಿಗಳು ಚಳಿಗಾಲದಲ್ಲಿ ಯಾವ ರೀತಿಯ ಆಹಾರವನ್ನು ಸೇವಿಸಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥೈರಾಯ್ಡ್ ರೋಗಿಗಳು ಚಳಿಗಾಲದಲ್ಲಿ ಯಾವ ರೀತಿಯ ಆಹಾರಗಳನ್ನು ಸೇವಿಸಬಾರದು?

ಡಾ. ಅಮಿತ್ ಕುಮಾರ್ ಅವರು ಹೇಳುವ ಪ್ರಕಾರ, ಚಳಿಗಾಲದಲ್ಲಿ ಥೈರಾಯ್ಡ್ ಸಮಸ್ಯೆ ಇರುವವರು ಹೊರಗೆ ಸಿಗುವ ಹುರಿದ, ಮಸಾಲೆಯುಕ್ತ ಮತ್ತು ಜಂಕ್ ಫುಡ್‌ಗಳನ್ನು ಸೇವಿಸುವುದನ್ನು ತಪ್ಪಿಸಬೇಕು, ಏಕೆಂದರೆ ಇವು ತೂಕ ಹೆಚ್ಚಾಗಲು ಮತ್ತು ಆಯಾಸವನ್ನು ಹೆಚ್ಚಿಸಲು ಕಾರಣವಾಗಬಹುದು. ಸೋಯಾ ಮತ್ತು ಸೋಯಾ ಆಧಾರಿತ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಥೈರಾಯ್ಡ್ ಹಾರ್ಮೋನುಗಳ ಸಮತೋಲನವನ್ನು ಅಡ್ಡಿಪಡಿಸಬಹುದು. ಎಲೆಕೋಸು, ಹೂಕೋಸು ಮತ್ತು ಬ್ರೊಕೊಲಿಯಂತಹ ತರಕಾರಿಗಳನ್ನು ಕಚ್ಚಾ ರೂಪದಲ್ಲಿ ಅತಿಯಾಗಿ ತಿನ್ನುವುದು ಸಹ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೆಚ್ಚುವರಿಯಾಗಿ, ಹೆಚ್ಚು ಸಕ್ಕರೆ, ಸಂಸ್ಕರಿಸಿದ ಹಿಟ್ಟು ಮತ್ತು ಬೇಕರಿ ಉತ್ಪನ್ನಗಳನ್ನು ಸೇವಿಸುವುದು ಹಾನಿಕಾರಕವಾಗಿದೆ. ಚಳಿಗಾಲದಲ್ಲಿ ಚಹಾ ಮತ್ತು ಕಾಫಿಯನ್ನು ಅತಿಯಾಗಿ ಸೇವಿಸುವುದು ಥೈರಾಯ್ಡ್ ರೋಗಿಗಳಿಗೆ ಸೂಕ್ತವಲ್ಲ. ಆದ್ದರಿಂದ, ಈ ಆಹಾರಗಳನ್ನು ಸೀಮಿತಗೊಳಿಸುವುದರಿಂದ ರೋಗಲಕ್ಷಣಗಳನ್ನು ನಿಯಂತ್ರಿಸುವುದು ಸುಲಭವಾಗುತ್ತದೆ.

ಥೈರಾಯ್ಡ್‌ ರೋಗಿಗಳು ಸೇವಿಸಬೇಕಾದ ಆಹಾರಗಳು:

ಚಳಿಗಾಲದಲ್ಲಿ, ಥೈರಾಯ್ಡ್ ಸಮಸ್ಯೆ ಇದ್ದವರು ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಸೀಮಿತ ಪ್ರಮಾಣದಲ್ಲಿ ಬೆಚ್ಚಗಿನ ಹಾಲು, ಮೊಸರು ಮತ್ತು ಚೀಸ್ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಹಸಿರು ತರಕಾರಿ, ಕಾಲೋಚಿತ ಹಣ್ಣು ಮತ್ತು ಧಾನ್ಯಗಳು ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ. ಬಾದಾಮಿ, ವಾಲ್ನಟ್ಸ್ ಮತ್ತು ಅಗಸೆಬೀಜಗಳಂತಹ ಬೀಜಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತವೆ ಮತ್ತು ಶೀತದಿಂದ ರಕ್ಷಿಸುತ್ತವೆ. ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್ ಸೇವಿಸುವುದರಿಂದ ಆಯಾಸ ಕಡಿಮೆಯಾಗುತ್ತದೆ ದೇಹವನ್ನು ಸಕ್ರಿಯವಾಗಿರಿಸುತ್ತದೆ. ಈ ಆಹಾರಗಳು ಥೈರಾಯ್ಡ್ ರೋಗಿಗಳಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಈ ಭಾಗಗಳಲ್ಲಿ ನೋವು ಕಂಡುಬಂದರೆ ನಿರ್ಲಕ್ಷಿಸಬೇಡಿ ಇದು ಥೈರಾಯ್ಡ್ ಲಕ್ಷಣವಾಗಿರಬಹುದು!

ಈ ಸಲಹೆಗಳನ್ನು ತಪ್ಪದೆ ಪಾಲಿಸಿ:

  • ಪ್ರತಿದಿನ ನಿಗದಿತ ಸಮಯದಲ್ಲಿ ಔಷಧಿಗಳನ್ನು ತೆಗೆದುಕೊಳ್ಳಿ.
  • ಹೆಚ್ಚು ಚಳಿ ಇರುವ ಸಮಯದಲ್ಲಿ ದೇಹವನ್ನು ಆದಷ್ಟು ಬೆಚ್ಚಗಿಟ್ಟುಕೊಳ್ಳಿ.
  • ಪ್ರತಿದಿನ ಲಘು ವ್ಯಾಯಾಮ ಅಥವಾ ಯೋಗ ಮಾಡಿ.
  • ಒಳ್ಳೆಯ ನಿದ್ರೆ ಮಾಡಿ.
  • ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ.
  • ಕಾಲಕಾಲಕ್ಕೆ ಥೈರಾಯ್ಡ್ ಅನ್ನು ಪರೀಕ್ಷಿಸಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!