AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ

ಇತ್ತೀಚಿಗೆ ಥೈರಾಯ್ಡ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 42 ಮಿಲಿಯನ್ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ತಿಳಿದುಕೊಂಡು ಸಮಸ್ಯೆ ತಡೆಗಟ್ಟುವುದು ಬಹಳ ಅನಿವಾರ್ಯವಾಗಿದೆ. ಹಾಗಾದರೆ ಥೈರಾಯ್ಡ್ ಸಮಸ್ಯೆ ಇರುವವರು ತಮ್ಮ ಆಹಾರಕ್ರಮದಲ್ಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು, ಯಾವ ಆಹಾರ ಥೈರಾಯ್ಡ್ ತಡೆಗಟ್ಟಲು ಸಹಕಾರಿ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥೈರಾಯ್ಡ್‌ನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ; ಆಹಾರದಲ್ಲಿ ಈ ಬದಲಾವಣೆಯನ್ನು ಅಗತ್ಯವಾಗಿ ಮಾಡಿಕೊಳ್ಳಿ
Early Signs Of ThyroidImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 25, 2026 | 7:09 PM

Share

ಭಾರತದಲ್ಲಿ ಥೈರಾಯ್ಡ್ (Thyroid) ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ವರದಿಗಳ ಪ್ರಕಾರ ಸುಮಾರು 4.2 ಕೋಟಿ ಜನರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲಿ ಇದು ಹೆಚ್ಚು ಕಂಡುಬರುತ್ತಿದೆಯಾದರೂ, ಇತ್ತೀಚೆಗೆ ಮಕ್ಕಳು ಮತ್ತು ಪುರುಷರಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. ತಜ್ಞರ ಪ್ರಕಾರ, ಆರಂಭಿಕ ಲಕ್ಷಣಗಳನ್ನು ನಿರ್ಲಕ್ಷಿಸಿದರೆ ಸಮಸ್ಯೆ ಗಂಭೀರವಾಗಬಹುದು. ಸೀನಿಯರ್ ಡೈಟಿಷಿಯನ್ ಗೀತಿಕಾ ಚೋಪ್ರಾ ಅವರು ಹೇಳುವ ಪ್ರಕಾರ, ಥೈರಾಯ್ಡ್‌ನಲ್ಲಿ ಮುಖ್ಯವಾಗಿ ಎರಡು ವಿಧಗಳಿರುತ್ತವೆ. ಒಂದು ಹೈಪೋಥೈರಾಯ್ಡಿಸಮ್ ಮತ್ತು ಹೈಪರ್‌ಥೈರಾಯ್ಡಿಸಮ್. ಇವುಗಳ ಲಕ್ಷಣಗಳು ಕೂಡ ಬೇರೆಯಾಗಿರುತ್ತವೆ. ಹಾಗಾಗಿ ಈ ಬಗ್ಗೆ ತಿಳಿದುಕೊಂಡು ಸಮಸ್ಯೆ ತಡೆಗಟ್ಟಬೇಕಾಗುತ್ತದೆ. ಹಾಗಾದರೆ ಥೈರಾಯ್ಡ್ ಸಮಸ್ಯೆ ಇರುವವರು ತಮ್ಮ ಆಹಾರಕ್ರಮದಲ್ಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಥೈರಾಯ್ಡ್ ಇದ್ದಾಗ ಆಹಾರಕ್ರಮ ಹೇಗಿರಬೇಕು?

ಪ್ರೋಟೀನ್ ಸಮೃದ್ಧ ಆಹಾರ: ತಜ್ಞರ ಪ್ರಕಾರ, ಪ್ರೋಟೀನ್ ಸಮೃದ್ಧ ಆಹಾರ ಸೇವಿಸುವುದು ಬಹಳ ಮುಖ್ಯ. ದಾಲ್, ಪನೀರ್, ಮೊಟ್ಟೆ, ಮೊಸರು, ಮೀನು ಮತ್ತು ಚಿಕನ್ ಆಹಾರದಲ್ಲಿ ಸೇರಿಸಬೇಕು. ಇದು ಮೆಟಾಬಾಲಿಸಂ ಸುಧಾರಿಸಿ ಆಯಾಸ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಸೆಲೆನಿಯಂ ಮತ್ತು ಜಿಂಕ್ ಅಗತ್ಯ: ಪಂಪ್ಕಿನ್ ಸೀಡ್ಸ್, ನಟ್ಸ್, ಸಮುದ್ರ ಆಹಾರ ಮತ್ತು ಸಂಪೂರ್ಣ ಧಾನ್ಯಗಳಲ್ಲಿ ಇರುವ ಸೆಲೆನಿಯಂ ಹಾಗೂ ಜಿಂಕ್ ಥೈರಾಯ್ಡ್ ಹಾರ್ಮೋನ್ ಸಮತೋಲನಕ್ಕೆ ಸಹಕಾರಿ.

ಐಯೋಡಿನ್ ಸಮತೋಲನ ಮುಖ್ಯ: ಐಯೋಡಿನ್ ಅಗತ್ಯವಾದರೂ ಅದರ ಅತಿಯಾದ ಸೇವನೆ ಹಾನಿಕಾರಕವಾಗಬಹುದು. ಆದ್ದರಿಂದ ಐಯೋಡೈಸ್ ಉಪ್ಪನ್ನು ನಿಯಮಿತ ಪ್ರಮಾಣದಲ್ಲಿ ಬಳಸಬೇಕು.

ಪ್ರೊಸೆಸ್ಡ್ ಮತ್ತು ಸಕ್ಕರೆ ಆಹಾರ ಕಡಿಮೆ ಮಾಡಿ: ಸಾಫ್ಟ್ ಡ್ರಿಂಕ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಫ್ರೈಡ್ ಮತ್ತು ಹೆಚ್ಚು ಸಕ್ಕರೆ ಇರುವ ಆಹಾರಗಳು ದೇಹದಲ್ಲಿ ಉರಿಯನ್ನು ಹೆಚ್ಚಿಸಬಹುದು ಮತ್ತು ತೂಕ ಹೆಚ್ಚಾಗಲು ಕಾರಣವಾಗಬಹುದು.

ಗಟ್ ಆರೋಗ್ಯಕ್ಕೂ ಗಮನ ಕೊಡಿ: ಮೊಸರು, ಮಜ್ಜಿಗೆ, ಫರ್ಮೆಂಟೆಡ್ ಫುಡ್ಸ್ ಮತ್ತು ಫೈಬರ್ ಸಮೃದ್ಧ ಆಹಾರಗಳು ಗಟ್ ಆರೋಗ್ಯ ಸುಧಾರಿಸಿ ಥೈರಾಯ್ಡ್ ನಿಯಂತ್ರಣಕ್ಕೆ ಸಹಾಯ ಮಾಡುತ್ತವೆ.

ತಜ್ಞರ ಪ್ರಕಾರ, ಔಷಧಿಯ ಜೊತೆಗೆ ಸರಿಯಾದ ಆಹಾರ, ಉತ್ತಮ ನಿದ್ರೆ, ವ್ಯಾಯಾಮ ಮತ್ತು ನಿಯಮಿತ ಥೈರಾಯ್ಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More