AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷರ ಫಲವತ್ತತೆಯನ್ನು ಹೆಚ್ಚಿಸಲು ಇಲ್ಲಿವೆ 4 ಸಲಹೆಗಳು

ಅನಾರೋಗ್ಯಕರ ಜೀವನಶೈಲಿ ಪುರುಷರಲ್ಲಿ ಆಂತರಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇವುಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸಿದರೆ, ಕಡಿಮೆ ವೀರ್ಯಾಣುಗಳ ಸಂಖ್ಯೆ, ಪುರುಷ ಬಂಜೆತನದಂತಹ ಸಮಸ್ಯೆಗಳನ್ನು ಕೆಲವೇ ವಾರಗಳಲ್ಲಿ ಗುಣಪಡಿಸಬಹುದು. ಇಲ್ಲವಾದಲ್ಲಿ ಫಲವತ್ತತೆ ಸಮಸ್ಯೆಗಳನ್ನು ನಾನಾ ರೀತಿಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು.ಜೊತೆಗೆ ಮಕ್ಕಳಾಗದಿರುವುದಕ್ಕೆ ಕಾರಣವಾಗಬಹುದು. ಹಾಗಾಗಿ ಪುರುಷರು ತಮ್ಮ ಫಲವತ್ತತೆಯನ್ನು ಸುಧಾರಿಸಲು ಮತ್ತು ಗರ್ಭಧಾರಣೆಯ ಸಾಧ್ಯತೆಗಳನ್ನು ಹೆಚ್ಚಿಸಲು ಅನೇಕ ಸರಳ ಮತ್ತು ಪರಿಣಾಮಕಾರಿ ಮಾರ್ಗಗಳಿವೆ ಅವುಗಳನ್ನು ಪಾಲನೆ ಮಾಡಬಹುದು.

ಪುರುಷರ ಫಲವತ್ತತೆಯನ್ನು ಹೆಚ್ಚಿಸಲು ಇಲ್ಲಿವೆ 4 ಸಲಹೆಗಳು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Feb 13, 2025 | 3:44 PM

Share

ಮದುವೆಯಾದ ಮೇಲೆ ಮಕ್ಕಳಾಗಲಿಲ್ಲ ಎಂದಾಗ ಮೊದಲು ಹೆಣ್ಣನ್ನೇ ದೂಷಿಸುವವರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಕುಟುಂಬ ಯೋಜನೆಯ ವಿಷಯಕ್ಕೆ ಬಂದಾಗ, ಪ್ರತಿಯೊಬ್ಬರೂ ಕೂಡ, ಮೊದಲು ಮಹಿಳೆಯ ಆರೋಗ್ಯದ ಬಗ್ಗೆ ಯೋಚಿಸುತ್ತಾರೆ, ಪುರುಷರ ಆರೋಗ್ಯವನ್ನು ಹೆಚ್ಚಾಗಿ ಕಡೆಗಣಿಸುತ್ತಾರೆ. ಆದರೆ ಮಹಿಳೆಯರ ಆರೋಗ್ಯದಷ್ಟೇ ಪುರುಷರ ಆರೋಗ್ಯವೂ ಕೂಡ ಬಹಳ ಮುಖ್ಯವಾಗಿರುತ್ತದೆ. ಏಕೆಂದರೆ ಪುರುಷ ಫಲವತ್ತತೆಯು ಕುಟುಂಬ ಯೋಜನೆ ಮತ್ತು ಒಟ್ಟಾರೆ ಆರೋಗ್ಯಕ್ಕೆ ಬಹಳ ನಿರ್ಣಾಯಕ ಅಂಶವಾಗಿದೆ. ಜೊತೆಗೆ ಆಹಾರ ಮತ್ತು ಜೀವನಶೈಲಿಯಂತಹ ಅನೇಕ ವಿಷಯಗಳು ಕೂಡ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಪರಿಣಾಮ ಬೀರಬಹುದು ಎಂದು ತಜ್ಞರು ಹೇಳುತ್ತಾರೆ.

ಅನಾರೋಗ್ಯಕರ ಜೀವನಶೈಲಿ ಪುರುಷರಲ್ಲಿ ಆಂತರಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇವುಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸಿದರೆ, ಕಡಿಮೆ ವೀರ್ಯಾಣುಗಳ ಸಂಖ್ಯೆ, ಪುರುಷ ಬಂಜೆತನದಂತಹ ಸಮಸ್ಯೆಗಳನ್ನು ಕೆಲವೇ ವಾರಗಳಲ್ಲಿ ಗುಣಪಡಿಸಬಹುದು. ಇಲ್ಲವಾದಲ್ಲಿ ಫಲವತ್ತತೆ ಸಮಸ್ಯೆಗಳನ್ನು ನಾನಾ ರೀತಿಯ ಸಮಸ್ಯೆಗೆ ದಾರಿ ಮಾಡಿಕೊಡಬಹುದು.ಜೊತೆಗೆ ಮಕ್ಕಳಾಗದಿರುವುದಕ್ಕೆ ಕಾರಣವಾಗಬಹುದು. ಹಾಗಾಗಿ ಪುರುಷರು ತಮ್ಮ ಫಲವತ್ತತೆಯನ್ನು ಸುಧಾರಿಸಲು ಮತ್ತು ಗರ್ಭಧಾರಣೆಯ ಸಾಧ್ಯತೆಗಳನ್ನು ಹೆಚ್ಚಿಸಲು ಅನೇಕ ಸರಳ ಮತ್ತು ಪರಿಣಾಮಕಾರಿ ಮಾರ್ಗಗಳಿವೆ ಅವುಗಳನ್ನು ಪಾಲನೆ ಮಾಡಬಹುದು.

ಅತಿಯಾದ ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು: ನೀವು ಅತಿಯಾದ ಶಾಖ ಇರುವಲ್ಲಿ ಕೆಲಸ ಮಾಡುತ್ತಿದ್ದರೆ ರಕ್ಷಣಾತ್ಮಕ ಬಟ್ಟೆಗಳನ್ನು ಧರಿಸುವುದರ ಜೊತೆಗೆ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಏಕೆಂದರೆ ಹೆಚ್ಚಿನ ತಾಪಮಾನಕ್ಕೆ ದೀರ್ಘಕಾಲ ಒಡ್ಡಿಕೊಳ್ಳುವುದರಿಂದ ಜೊತೆಗೆ ಬಿಸಿ ನೀರಿನ ಸ್ನಾನ, ಪ್ರತಿನಿತ್ಯ ಬಿಗಿಯಾದ ಒಳ ಉಡುಪುಗಳನ್ನು ಧರಿಸುವುದರಿಂದ ವೀರ್ಯಾಣುಗಳ ಉತ್ಪಾದನೆ ಮತ್ತು ಗುಣಮಟ್ಟವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಸಡಿಲವಾಗಿರುವ ಒಳ ಉಡುಪುಗಳನ್ನು ಧರಿಸುವುದರ ಜೊತೆಗೆ ಶಾಖ ಹೆಚ್ಚಾಗಿರುವ ಜಾಗಗಳಲ್ಲಿ ಬಹಳ ಸಮಯ ಕೆಲಸ ಮಾಡುವುದನ್ನು ತಪ್ಪಿಸುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು.

ಹಾನಿಕಾರಕ ವಸ್ತುಗಳನ್ನು ತಪ್ಪಿಸುವುದು: ಪುರುಷರಲ್ಲಿ ಆರೋಗ್ಯಕಾರಿ ವೀರ್ಯ ಮತ್ತು ಫಲವತ್ತತೆ ಹೆಚ್ಚಿಸಲು ನಾನಾ ರೀತಿಯ ಔಷಧಿಗಳ ಸೇವನೆ ಮಾಡುವುದರ ಜೊತೆಗೆ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಮಾಡುವುದನ್ನು ತಪ್ಪಿಸಬೇಕು. ಈ ವಸ್ತುಗಳು ವೀರ್ಯದ ಗುಣಮಟ್ಟ ಮತ್ತು ಪುರುಷ, ಮಹಿಳೆಯರ ಒಟ್ಟಾರೆ ಸಂತಾನೋತ್ಪತ್ತಿ ಆರೋಗ್ಯಕ್ಕೆ ಹಾನಿ ಮಾಡುತ್ತವೆ ಎಂಬುದು ಸಂಶೋಧನೆಗಳಿಂದ ಈಗಾಗಲೇ ತಿಳಿದು ಬಂದಿದೆ. ಇದಲ್ಲದೆ, ಅತಿಯಾದ ಆಲ್ಕೋಹಾಲ್ ಸೇವನೆಯು ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ವೀರ್ಯದ ಗುಣಮಟ್ಟವನ್ನು ಕಡಿಮೆ ಮಾಡುತ್ತದೆ.

ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ: ದೀರ್ಘಕಾಲದ ಒತ್ತಡವು ಹಾರ್ಮೋನ್ ಮತ್ತು ವೀರ್ಯಾಣು ಉತ್ಪಾದನೆಗೆ ಅಡ್ಡಿಪಡಿಸುವ ಮೂಲಕ ಪುರುಷ ಫಲವತ್ತತೆಗೆ ಹಾನಿ ಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಯೋಗ, ಧ್ಯಾನ, ಪ್ರಕೃತಿ ವೀಕ್ಷಣೆ ಅಥವಾ ಸಾಕು ಪ್ರಾಣಿಗಳೊಂದಿಗೆ ಸಮಯ ಕಳೆಯುವಂತಹ ವಿಶ್ರಾಂತಿ ಚಟುವಟಿಕೆಗಳನ್ನು ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತ. ಈ ರೀತಿ ಪುರುಷರು ತಮ್ಮನ್ನು ಒಳಗಿನಿಂದ ಸಂತೋಷವಾಗಿಡಲು ಪ್ರಯತ್ನಿಸಬೇಕಾಗುತ್ತದೆ. ಮನಸ್ಸು ಖುಷಿಯಾಗಿದ್ದರೆ ದೇಹ ಆರೋಗ್ಯವಾಗಿರುತ್ತದೆ. ದೈಹಿಕ ಆರೋಗ್ಯದಷ್ಟೇ ನಿಮ್ಮ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಮುಖ್ಯ.

ಆರೋಗ್ಯಕರ ಆಹಾರವನ್ನು ಕಾಪಾಡಿಕೊಳ್ಳಿ: ವಿಟಮಿನ್ ಸಿ ಮತ್ತು ಇ ನಂತಹ ಅಗತ್ಯ ಪೋಷಕಾಂಶಗಳನ್ನು ಒದಗಿಸುವ ಹಣ್ಣುಗಳು, ತರಕಾರಿಗಳು, ತೆಳ್ಳಗಿನ ಪ್ರೋಟೀನ್, ಧಾನ್ಯಗಳು ಮತ್ತು ಬೀಜಗಳಂತಹ ಉತ್ಕರ್ಷಣ ನಿರೋಧಕ ಭರಿತ ಆಹಾರಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ನಿಮ್ಮ ಒಟ್ಟಾರೆ ಆರೋಗ್ಯ ಮತ್ತು ವೀರ್ಯದ ಗುಣಮಟ್ಟ ಹೆಚ್ಚಿಸಲು ಸಹಾಯ ಮಾಡುತ್ತವೆ. ಅಲ್ಲದೆ ಇದು ಪುರುಷ ಫಲವತ್ತತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಅದಲ್ಲದೆ ಕುಂಬಳಕಾಯಿ ಬೀಜಗಳು, ಕಡಲೆಕಾಯಿ, ಬೀನ್ಸ್ ಮತ್ತು ಬೇಳೆ- ಕಾಳುಗಳಂತಹ ಸತು ಸಮೃದ್ಧ ಆಹಾರಗಳು ವೀರ್ಯಾಣು ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಸಾಬೂದಾನದಲ್ಲಿದೆ ಅದ್ಭುತ ಆರೋಗ್ಯ ಪ್ರಯೋಜನಗಳು! ಎಷ್ಟು ಸಮಸ್ಯೆಗಳು ದೂರವಾಗುತ್ತವೆ ತಿಳಿದಿದೆಯೇ?

ಈ ರೀತಿ ಚಿಕ್ಕ ಚಿಕ್ಕ ಅಂಶಗಳು ಫಲವತ್ತತೆಯ ಮೇಲೆ ಪರಿಣಾಮ ಬೀರಬಹುದು ಎಂಬುದನ್ನು ಪುರುಷರು ಎಂದಿಗೂ ಮರೆಯಬಾರದು. ಜೊತೆಗೆ ಬಂಜೆತನ ನಿವಾರಣೆ ಮಾಡಲು ದೈಹಿಕ ಮತ್ತು ಭಾವನಾತ್ಮಕ ಯೋಗಕ್ಷೇಮಕ್ಕೆ ಆದ್ಯತೆ ನೀಡುವುದು ಅತ್ಯಗತ್ಯ. ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವ ಮೂಲಕ ಪುರುಷರು ತಮ್ಮ ಫಲವತ್ತತೆಯನ್ನು ಹೆಚ್ಚಿಸಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!