Health Tips: ಏಕಾಗ್ರತೆ ಸಮಸ್ಯೆ ಕಾಡುತ್ತಿದೆಯೇ? ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್​

ಏಕಾಗ್ರತೆ: ಪ್ರಾಚೀನ ಕಾಲದಿಂದಲೂ ಔಷಧಿಗೆ ಅಶ್ವಗಂಧವನ್ನು ಬಳಸಲಾಗುತ್ತದೆ. ದೈಹಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

Health Tips: ಏಕಾಗ್ರತೆ ಸಮಸ್ಯೆ ಕಾಡುತ್ತಿದೆಯೇ? ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Jun 28, 2021 | 6:55 AM

ಮರೆವು ಎಂಬುದು ಎಲ್ಲರಿಗೂ ಸಹಜ. ಆದರೆ ಕೆಲವೊಮ್ಮೆ ಅತಿಯಾಗಿ ಎಲ್ಲವನ್ನೂ ಮರೆತು ಬಿಡುತ್ತೇವೆ. ಇಂದು ಮಾಡುವ ಕೆಲಸದ ಪಟ್ಟಿಯಲ್ಲಿ ಮುಖ್ಯವಾಗಿರುವುದೇ ಮರೆತು ಹೋಗುತ್ತದೆ. ವಿದ್ಯಾರ್ಥಿಗಳೆಲ್ಲ ಪರೀಕ್ಷೆಗೆಂದು ರಾತ್ರಿ ಇಡೀ ಕಷ್ಟಪಟ್ಟು ಓದಿರುತ್ತಾರೆ. ಆದರೆ ಪರೀಕ್ಷೆಯ ಹಾಲ್​ನಲ್ಲಿ ಕುಳಿತಾಗ ಎಲ್ಲವೂ ಮರೆತೇ ಹೋಯಿತು ಎಂದು ಹೇಳುವುದನ್ನು ಕೇಳಿಯೇ ಇರುತ್ತೀರಿ. ಹಾಗಾದರೆ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದರ ಕುರಿತಾಗಿ ತಿಳಿಯೋಣ.

ಮರೆಯಲು ಮುಖ್ಯವಾದ ಕಾರಣವೆಂದರೆ ಏಕಾಗ್ರತೆ ಕೊರತೆ. ಕೆಲವು ವಿಷಯಗಳನ್ನು ನಾವು ಗಮನವಿಟ್ಟು ಆಲಿಸಿಯೇ ಇರುವುದಿಲ್ಲ. ಇದರಿಂದಾಗಿ ವಿಷಯಗಳು ನಮ್ಮಲ್ಲಿ ಮರೆತು ಹೋಗುತ್ತವೆ. ಹಾಗಿರುವಾಗ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವ ಕುರಿತಾಗಿ ಯೋಚಿಸಬೇಕು.

ಒಂದೆಲಗ ಇದೊಂದು ಪ್ರಾಚೀನ ಗಿಡಮೂಲಿಕೆ. ಬ್ರಾಹ್ಮಿ ಅಥವಾ ಒಂದೆಲಗ ಎಂದು ಇದನ್ನು ಕರೆಯುತ್ತಾರೆ. ಸಾವಿರಾರು ವರ್ಷಗಳ ಹಿಂದಿನಿಂದಲೂ ಇದನ್ನು ಔಷಧಿಯಲ್ಲಿ ಬಳಸಲಾಗುತ್ತಿದೆ. ಮೆದುಳಿನ ಕಾರ್ಯವನ್ನು ಸುಧಾರಿಸಲು ಬ್ರಾಹ್ಮಿ ಸಹಾಯ ಮಾಡುತ್ತದೆ. ಮಾನಸಿಕ ಒತ್ತಡ ಮತ್ತು ಆತಂಕವನ್ನು ನಿಭಾಯಿಸುತ್ತದೆ. ಮಾನಸಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಒಂದೆಲಗ ಸಹಾಯ ಮಾಡುತ್ತದೆ. ನೀವು ಈ ಗಿಡಮೂಲಿಕೆಯ ತಂಬುಳಿ ಅಥವಾ ಕಷಾಯ ಮಾಡಿ ಸೇವಿಸಬಹುದು. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಇದರ ಪ್ರಯೋಜನ ಪಡೆಯಬಹುದು. ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಿಲ್ಲ.

ಅಶ್ವಗಂಧ ಪ್ರಾಚೀನ ಕಾಲದಿಂದಲೂ ಔಷಧಿಗೆ ಅಶ್ವಗಂಧವನ್ನು ಬಳಸಲಾಗುತ್ತದೆ. ದೈಹಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿದೆ. ಹಾಲು, ನೀರು, ಜೇನುತುಪ್ಪದ ಜತೆ ಬೆರೆಸಿ ಇದನ್ನು ಸೇವಿಸಬಹುದಾಗಿದೆ.

ತುಳಸಿ ಇತರ ಗಿಡ ಮೂಲಿಕೆಗಳಿಗಿಂತಲೂ ತುಳಸಿ ಅತ್ಯುತ್ತಮ ಔಷಧೀಯ ಗುಣವನ್ನು ಹೊಂದಿದೆ ಎಂದು ಪರಿಗಣಿಸಲಾಗಿದೆ. ಆಯುರ್ವೇದದಲ್ಲಿ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ, ಕ್ಯಾನ್ಸರ್​ ವಿರೋಧಿ ಗುಣಗಳನ್ನು ಹೊಂದಿದೆ. ಜತೆಗೆ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. 5 ರಿಂದ 10 ತುಳಸಿ ಎಲೆ, 5 ಬಾದಾಮಿ, 5 ಕರಿಮೆಣಸು ಮತ್ತು ಜೇನುತುಪ್ಪವನ್ನು ಒಟ್ಟೆಗೆ ಸೇರಿಸಿ ಮಿಶ್ರಣ ಮಾಡಿ ಸೇವಿಸಬಹುದು. ಇದರಿಂದ ನಿಮ್ಮ ಏಕಾಗ್ರತೆ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಧ್ಯಾನ ನಿಯಮಿತ ಧ್ಯಾನದ ಮೂಲಕ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಮನಸ್ಸು ಶಾಂತವಾಗಿರಲು ಇದು ಸಹಾಯ ಮಾಡುತ್ತವೆ. ಧ್ಯಾನವು ಒತ್ತಡವನ್ನು ಕಡಿಮೆ ಮಾಡುತ್ತವೆ. ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

ಪರೀಕ್ಷೆಯ ಸನಿಹದಲ್ಲಿರುವ ನಿಮ್ಮ ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಆಹಾರ ಪದ್ಧತಿ ಮತ್ತು ಜೀವನಶೈಲಿ ಸಹಕಾರಿ

Post Covid: ದೀರ್ಘಕಾಲಿಕ ಕೊವಿಡ್​ ಬಳಿಕ ಅನುಸರಿಸಬಹುದಾದ ವ್ಯಾಯಾಮ ಭಂಗಿಗಳು

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ