AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer Tips: ಬೇಸಿಗೆಯ ಬಿಸಿಲ ಉರಿಯಿಂದ ದೇಹ ತಂಪಾಗಿರಿಸಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ

ಈಗಂತೂ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಲೇ ಇದೆ. ನೆತ್ತಿ ಸುಡುತ್ತಿರುವ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದು, ಉರಿ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಪರದಾಟ ನಡೆಸುತ್ತಿದ್ದಾರೆ. ಈ ಬಿಸಿಲ ಝಳ ಆರೋಗ್ಯದ ಮೇಲೂ ನಕರಾತ್ಮಕ ಪರಿಣಾಮವನ್ನು ಬೀರುವುದರ ಜೊತೆಗೆ ದೇಹದ ಉರಿಯನ್ನು ಕೂಡಾ ಹೆಚ್ಚು ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ಬೇಸಿಗೆಯ ಉರಿಯಿಂದ ದೇಹ ತಂಪಾಗಿರಿಸಲು ಈ ಕೆಲವೊಂದಷ್ಟು ಟಿಪ್ಸ್‌ಗಳನ್ನು ಫಾಲೋ ಮಾಡಿ.

Summer Tips: ಬೇಸಿಗೆಯ ಬಿಸಿಲ ಉರಿಯಿಂದ ದೇಹ ತಂಪಾಗಿರಿಸಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ
Summer Tips
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Apr 06, 2025 | 12:36 PM

Share

ಬೇಸಿಗೆ ಕಾಲ (Summer) ಈಗಾಗಲೇ ಆರಂಭವಾಗಿದೆ. ಪ್ರಾರಂಭದಲ್ಲಿಯೇ ಉರಿ ಉರಿ ಬಿಸಿಲು ಎಲ್ಲರ ನೆತ್ತಿ ಸುಡಲು ಶುರು ಮಾಡಿದ್ದು, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ತಾಪಮಾನಕ್ಕೆ (temperature) ಜನ ಹೈರಾಣಾಗಿ ಹೋಗಿದ್ದಾರೆ. ಸುಡು ಬೇಸಿಗೆಯಲ್ಲಿ ವಾತಾವರಣ ಮಾತ್ರವಲ್ಲ ದೇಹ ಕೂಡಾ ಒಳಗಿನಿಂದ ತುಂಬಾನೇ ಬಿಸಿಯಾಗಿರುತ್ತದೆ (hot). ದೇಹವು ಒಳಗಿನಿಂದ ಬಿಸಿಯಾಗಲು ಪ್ರಾರಂಭಿಸಿದಾಗ ಆಯಾಸದಂತಹ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ, ಇಂತಹ ಪರಿಸ್ಥಿತಿಯಲ್ಲಿ ಜಾಗರೂಕರಾಗಿರುವುದು ಮುಖ್ಯ. ಕೆಲವರು ಬಿಸಿಲ ಉರಿಯನ್ನು ತಾಳಲಾರದೆ ಹೊರಗಡೆಯಿಂದ ಮನೆಗೆ ಬಂದ ತಕ್ಷಣ ಫ್ರಿಡ್ಜ್‌ ಕಡೆ ಓಡಿ, ತಣ್ಣನೆಯ ನೀರು ಕುಡಿದರೆ, ಇನ್ನೂ ಕೆಲವರು ಎಸಿ, ಫ್ಯಾನ್‌ ಆನ್‌ ಮಾಡಿ ಗಂಟೆಗಟ್ಟಲೆ ಕುಳಿತು ತಣ್ಣನೆಯ ಗಾಳಿ ತೆಗೆದುಕೊಳ್ಳುವ ಮೂಲಕ ದೇಹ ಉರಿಯನ್ನು ಕಮ್ಮಿ ಮಾಡಲು ಪ್ರಯತ್ನಿಸುತ್ತಾರೆ. ಹೀಗಿರುವಾಗ ಕೆಲವೊಂದು ಕ್ರಮಗಳನ್ನು ಅನುಸರಿಸುವ ಮೂಲಕ ಬೇಸಿಗೆಯ ಉರಿಯಿಂದ ದೇಹ ತಂಪಾಗಿರಿಸಬಹುದು.

ಬಿಸಿಲ ಉರಿಯಿಂದ ದೇಹ ತಂಪಾಗಿರಿಸಲು ಈ ಸಿಂಪಲ್‌ ಟಿಪ್ಸ್‌ ಫಾಲೋ ಮಾಡಿ:

ಸ್ನಾನಕ್ಕೆ ಉಗುರು ಬೆಚ್ಚಗಿನ ಬಳಸಿ:

ಬೇಸಿಗೆ ಕಾಲದಲ್ಲಿ, ಜನರು ಹೆಚ್ಚಾಗಿ ದೇಹದ ಒಳಗಿನಿಂದ ಶಾಖದ ಹಾಗೂ ವಿಪರೀತ ಉರಿಯ ಅನುಭವವಾಗುತ್ತದೆ ಎಂದು ದೂರುತ್ತಿರುತ್ತಾರೆ. ಹೀಗಿರುವಾಗ ಬೇಸಿಗೆಯಲ್ಲಿ ಸ್ನಾನಕ್ಕೆ ಸ್ನಾನ ಮಾಡಲು ತಣ್ಣೀರಿನ ಬದಲು ಉಗುರು ಬೆಚ್ಚಗಿನ ನೀರನ್ನು ಬಳಸಿ. ಹೀಗೆ ಮಾಡುವುದರಿಂದ ದೇಹದ ಉಷ್ಣತೆ ನಿಯಂತ್ರಣದಲ್ಲಿರುತ್ತದೆ. ಮತ್ತು ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ಮೈ ಕೈ ನೋವು ಕಡಿಮೆಯಾಗುವುದರ ಜೊತೆಗೆ ನಿದ್ದೆಯೂ ಚೆನ್ನಾಗಿ ಬರುತ್ತದೆ. ಒಂದು ವೇಳೆ ಸ್ನಾನದ ನಂತರವೂ ದೇಹ ತುಂಬಾ ಬಿಸಿಲಿದ್ದರೆ, ನಿಮ್ಮ ಮಣಿಕಟ್ಟು, ಕುತ್ತಿಗೆ, ಹಣೆ ಮತ್ತು ಪಾದಗಳಿಗೆ ಕೂಲಿಂಗ್ ಪ್ಯಾಕ್ ಅನ್ನು ಹಚ್ಚಿಕೊಳ್ಳಿ. ಹೀಗೆ ಮಾಡುವುದರಿಂದ ನಿಮಗೆ ಶಾಖದಿಂದ ಪರಿಹಾರ ಸಿಗುತ್ತದೆ.

ಇದನ್ನೂ ಓದಿ
Image
ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ
Image
ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ
Image
ಬೇಸಿಗೆಯಲ್ಲಿ ಸ್ನಾನಕ್ಕೆ ಬಿಸಿ ನೀರನ್ನೇ ಆಯ್ಕೆ ಮಾಡಿಕೊಳ್ತೀರಾ?
Image
ನೀವು ಆರೋಗ್ಯವಾಗಿದ್ದೀರಿ ಎಂದು ಬೆಳಗಿನಜಾವದ ಈ ಸೂಚನೆಗಳಿಂದ ತಿಳಿಯಬಹುದು

ಆಗಾಗ್ಗೆ ನೀರು ಮತ್ತು ಜ್ಯೂಸ್ ಕುಡಿಯುತ್ತಲೇ ಇರಿ:

ಈ ಬೇಸಿಗೆಯ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿಟ್ಟುಕೊಳ್ಳುವುದು ಬಹಳ ಮುಖ್ಯ. ಏಕೆಂದರೆ ಬಿಸಿಲಿಗೆ ದೇಹ ನಿರ್ಜಲೀಕರಣವಾಗುವುದರ ಜೊತೆಗೆ ದೇಹ ಉರಿಯೂ ಹೆಚ್ಚುತ್ತದೆ. ಇಂತಹ ಸಂದರ್ಭದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದು ತುಂಬಾನೇ ಮುಖ್ಯ. ಜೊತೆಗೆ ಎಳನೀರು ಸೇರಿದಂತೆ ಆರೋಗ್ಯಕರ ಹಣ್ಣಿನ, ಹಾಗೂ ತರಕಾರಿ ಜ್ಯೂಸ್‌ಗಳನ್ನು ಸೇವನೆ ಮಾಡುವ ಮೂಲಕ ದೇಹವನ್ನು ತಂಪಾಗಿರಿಸಬಹುದು.

ಚಹಾ ಅಥವಾ ಕಾಫಿಯಿಂದ ದೂರವಿರಿ:

ಕೆಫೀನ್ ಮತ್ತು ನಿಕೋಟಿನ್ ಸೇವನೆಯು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಈ ಎರಡೂ ವಸ್ತುಗಳು ದೇಹದಲ್ಲಿನ ರಕ್ತವನ್ನು ಬಿಸಿ ಮಾಡುತ್ತದೆ ಮತ್ತು ಇದು ದೇಹ ಶಾಖ ಮತ್ತು ಬೆವರುವಿಕೆಯ ಅನುಭವವನ್ನು ನೀಡುತ್ತದೆ. ಆದ್ದರಿಂದ, ಬೇಸಿಗೆಯಲ್ಲಿ ಕಾಫಿ, ಟೀ ಬದಲು ಎಳನೀರು ನೀರು, ನಿಂಬೆ ರಸ ಮತ್ತು ಹಣ್ಣಿನ ಜ್ಯೂಸ್‌ ಸೇವನೆ ಮಾಡಿ. ಜೊತೆಗೆ ಅತಿಯಾದ ಮದ್ಯಪಾನ ಸೇವನೆಯನ್ನು ಕೂಡ ತಪ್ಪಿಸಿ.

ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ:

ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿಡಲು ಬಯಸಿದರೆ, ನಿಮ್ಮ ಆಹಾರದಲ್ಲಿ  ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸುವುದು ಬಹಳ ಮುಖ್ಯ. ನೀವು ಈ ಉರಿ ಬೇಸಿಗೆಯಲ್ಲಿ ಹೆಚ್ಚಾಗಿ ಸೌತೆಕಾಯಿ, ಕಲ್ಲಂಗಡಿ ಮತ್ತು ಸಿಟ್ರಸ್ ಹಣ್ಣುಗಳನ್ನು ತಿನ್ನುವ ಮೂಲಕ ಶಾಖದಿಂದ ಮುಕ್ತಿ ಪಡೆಯಬಹುದು.

ಇದನ್ನೂ ಓದಿ: ಈ ಅಭ್ಯಾಸಗಳು ನಿಮ್ಮ ಮೆದುಳಿಗೆ ಹಾನಿ ಮಾಡಬಹುದು!

ಹಗುರವಾದ ಮತ್ತು ಸಡಿಲವಾದ ಬಟ್ಟೆಗಳನ್ನು ಧರಿಸಿ:

ಬೇಸಿಗೆಯ ದಿನಗಳಲ್ಲಿ ನಾವು ಧರಿಸುವ ಬಟ್ಟೆಗಳು ಸಹ ನಮ್ಮ ದೇಹದ ಉಷ್ಣತೆಯ ಮೇಲೆ ಆಳವಾದ ಪರಿಣಾಮ ಬೀರುತ್ತವೆ. ಹೀಗಿರುವಾಗ ದೇಹದ ಉಷ್ಣತೆ ಹೆಚ್ಚಾಗದಂತೆ ಮತ್ತು ದಿನವಿಡೀ ತಂಪಾಗಿರಲು ನೀವು ಹಗುರವಾದ ಮತ್ತು ಸಡಿಲವಾದ ಬಟ್ಟೆಗಳನ್ನು ಆರಿಸಿಕೊಳ್ಳಬೇಕು. ಜೊತೆಗೆ ಕಪ್ಪು ಬಣ್ಣದಂತಹ ಗಾಢ ಬಣ್ಣದ ಬಟ್ಟೆ ಧರಿಸುವುದನ್ನು ತಪ್ಪಿಸಿ ಹಾಗೂ ತಿಳಿ ಬಣ್ಣದ ಬಟ್ಟೆ ಧರಿಸಿ.

ಲಘು ಆಹಾರವನ್ನು ಸೇವನೆ ಮಾಡಿ:

ಬೇಸಿಗೆಯಲ್ಲಿ ಹಗುರವಾದ, ಸಮತೋಲಿತ ಆಹಾರವನ್ನು ಸೇವನೆ ಮಾಡುವುದು ಮುಖ್ಯ. ಭಾರವಾದ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಶಾಖ ಕೂಡಾ ಹೆಚ್ಚಾಗುತ್ತದೆ. ಮತ್ತು ಈ ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ, ಇದರಿಂದಾಗಿ ಉಷ್ಣತೆ ಕೂಡಾ ಹೆಚ್ಚಾಗುತ್ತದೆ. ಹಾಗಿರುವಾಗ ಲಘು ಆಹಾರ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ