AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಲಹೆಗಳು

ನೀವು ಸಹ ಮಧುಮೇಹ ರೋಗಿಗಳಾಗಿದ್ದರೆ, ಬೇಸಿಗೆಯಲ್ಲಿ ನಿಮ್ಮ ದೇಹದಲ್ಲಿನ ಸಕ್ಕರೆಯ ಅಂಶದ ಬಗ್ಗೆ ಕಾಳಜಿ ವಹಿಸಿ. ವಿಪರೀತ ಶಾಖವು ನಿಮ್ಮ ರಕ್ತದಲ್ಲಿನ ಸಕ್ಕರೆಯ ನಿಯಂತ್ರಣದ ಮೇಲೆ ಪರಿಣಾಮ ಬೀರಬಹುದು.

ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಸಲಹೆಗಳು
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on:Apr 30, 2023 | 1:33 PM

Share

ಪ್ರತಿ ಋತುವಿನಲ್ಲೂ ಮಧುಮೇಹ ಹೊಂದಿರುವ ಜನರಿಗೆ ಆರೋಗ್ಯಕ್ಕೆ ಸಂಬಂಧಿಸಿದ ಸವಾಲುಗಳು ಎದುರಾಗುತ್ತವೆ. ಚಳಿಗಾಲದಲ್ಲಿ ಜಡ ಅಭ್ಯಾಸಗಳು ಹೆಚ್ಚಾಗಿ ಮಧುಮೇಹ ನಿರ್ವಹಣೆಗೆ ಹಾನಿಯನ್ನುಂಟುಮಾಡುತ್ತದೆ. ಬೇಸಿಗೆಯಲ್ಲಿ ಮಧುಮೇಹಿಗಳು ಶಾಖದ ಬಳಲಿಕೆ ಮತ್ತು ಶಾಖದ ಹೊಡೆತಕ್ಕೆ ಗುರಿಯಾಗುತ್ತಾರೆ. ಈ ಋತುವಿನಲ್ಲಿ, ಸುಡುವ ಶಾಖವು ಮಧುಮೇಹ ಹೊಂದಿರುವ ವ್ಯಕ್ತಿಯ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಇದು ಅವರ ಸಕ್ಕರೆ ಮಟ್ಟ, ಚರ್ಮ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದು ಶಾಖದ ಬಳಲಿಕೆ ಅಥವಾ ಶಾಖದ ಹೊಡೆತದಂತಹ ವೈದ್ಯಕೀಯ ತುರ್ತುಪರಿಸ್ಥಿತಿಗಳಿಕೆ ಕಾರಣವಾಗಬಹುದು. ಅಲ್ಲದೆ ಬೇಸಿಗೆಯ ಶಾಖವು ರಕ್ತದಲ್ಲಿನ ಗ್ಲೂಕೋಸ್ ಮಟ್ಟಗಳ ಹೇರಿಕೆಗೆ ಕಾರಣವಾಗುತ್ತದೆ. ಇದು ಅಸ್ತಿತ್ವದಲ್ಲಿರುವ ನಿರ್ಜಲೀಕರಣವನ್ನು ಹೆಚ್ಚಿಸುವ ಅತಿಯಾದ ಮೂತ್ರವಿಸರ್ಜನೆಗೆ ಕಾರಣವಾಗಬಹುದು. ಡಯರೆಟಿಕ್ಸ್ ನಂತಹ ಡಯಾಬಿಟಿಸ್ ಔಷಧಿಗಳು ಸಹ ನಿಮಗೆ ನಿರ್ಜಲೀಕರಣದ ಭಾವನೆಯನ್ನು ಉಂಟುಮಾಡಬಹುದು. ಆದ್ದರಿಂದ ಮಧುಮೇಹ ಹೊಂದಿರುವ ವ್ಯಕ್ತಿಗೆ ಬೇಸಿಗೆಯಲ್ಲಿ ಹೆಚ್ಚಿನ ಆರೋಗ್ಯದ ಕಾಳಜಿಯ ಅಗತ್ಯವಿರುತ್ತದೆ.

ಶಾಖವು ರಕ್ತದಲ್ಲಿನ ಸಕ್ಕರೆಯ ನಿಯಂತ್ರಣದ ಮೇಲೆ ಪರಿಣಾಮ ಬೀರುತ್ತದೆ, ವಿಶೇಷವಾಗಿ ಇನ್ಸುಲಿನ್ ಬಳಸುವವರು ಪರಿಣಾಮಕಾರಿಯಾಗಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಾಪಾಡಿಕೊಳ್ಳಲು ಹೆಣಗಾಡುತ್ತಾರೆ. ಹೆಚ್ಚುವರಿಯಾಗಿ, ಹೆಚ್ಚಿನ ತಾಪಮಾನದಿಂದ ದೇಹದಲ್ಲಿ ಉಂಟಾಗುವ ನಿರ್ಜಲೀಕರಣವು ಮತ್ತಷ್ಟು ಸಕ್ಕರೆಯ ಮಟ್ಟದಲ್ಲಿನ ಅಸಮತೋಲನಕ್ಕೆ ಕಾರಣವಾಗಬಹುದು ಮತ್ತು ಶಾಖದ ಬಳಲಿಕೆ ಮತ್ತು ಶಾಖದ ಹೊಡೆತದ ಅಪಾಯವನ್ನು ಹೆಚ್ಚಿಸುತ್ತದೆ”ಎಂದು india.com ನ ಸಂದರ್ಶನದಲ್ಲಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿಲ್ ಸಲಹೆಗಾರ ಡಾ. ಸಂದೀಪ್ ಸೋನಾವಾನೆ ಹೇಳಿದ್ದಾರೆ.

ಬೇಸಿಗೆಯಲ್ಲಿ ರಕ್ತದ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಆರೋಗ್ಯಕರ ಜೀವನಶೈಲಿ ಅಭ್ಯಾಸಗಳು ಡಾ. ಸೋನಾವಾನೆ ಅವರು ಬೇಸಿಗೆಯಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಾಪಾಡಲು ಕೆಲವು ಜೀವನಶೈಲಿಯ ಬದಲಾವಣೆಗಳನ್ನು ಹಂಚಿಕೊಂಡರು. ಅದು ಮಧುಮೇಹಿಗಳ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಉತ್ತಮ ಜಲಸಂಚಯನ:

ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವ ಮೂಲಕ ದೇಹವನ್ನು ಹೈಡ್ರೀಕರಿಸುವುದು ಬಹು ಮುಖ್ಯ. ದಿನಕ್ಕೆ ಕನಿಷ್ಟ ಎರಡು ಲೀಟರ್ ನೀರನ್ನು ಕುಡಿಯಲು ಪ್ರಯತ್ನಿಸಿ. ಇದರಿಂದ ದೇಹ ನಿರ್ಜಲೀಕರಣಗೊಳ್ಳುವುದನ್ನು ತಪ್ಪಿಸಬಹುದು. ಮನೆಯಿಂದ ಹೊರಗೆ ಹೋಗುವಾಗ ಒಂದು ಬಾಟಲಿ ನೀರನ್ನು ತೆಗೆದುಕೊಂಡು ಹೋಗಿ, ಇದು ಹೊರಗಿನ ತಂಪು ಪಾನೀಯಗಳನ್ನು ಸೇವಿಸುವುದನ್ನು ತಪ್ಪಿಸುತ್ತದೆ.

ಇದನ್ನೂ ಓದಿ: ಆಕ್ರೋಟ್​ ಮೆದುಳಿನ ಶಕ್ತಿಯನ್ನ ಹೆಚ್ಚಿಸುತ್ತದೆ; ಅವುಗಳನ್ನು ಹೇಗೆ ಸೇವಿಸಬೇಕು, ಇನ್ನಿತರ ಪ್ರಯೋಜನಗಳು ಇಲ್ಲಿವೆ

ನಿಯಮಿತ ತಪಾಸಣೆ:

ಬೇಸಿಗೆಯ ಋತುವಿನಲ್ಲಿ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸುವುದು ಮುಖ್ಯ. ಇದು ಬೇಸಿಗೆಯಲ್ಲಿ ಉಂಟಾಗುವ ಯಾವುದೇ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯಕವಾಗುತ್ತದೆ. ಇನ್ಸುಲಿನ್ ಮಟ್ಟವನ್ನು ಪರಿಶೀಲಿಸಿ: ನಿಮ್ಮ ವೈದ್ಯರ ಬಳಿ ತಪಾಸಣೆ ಮಾಡಿ, ಇನ್ಸುಲಿನ್ ಪ್ರಮಾಣವನ್ನು ಅಗತ್ಯಕ್ಕೆ ತಕ್ಕಂತೆ ಸರಿಹೊಂದಿಸುವುದು ಸಹ ಮುಖ್ಯವಾಗಿದೆ. ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾದಾಗ ಅದಕ್ಕೆ ಚಿಕಿತ್ಸೆ ನೀಡಲು ಗ್ಲೂಕೋಸ್ ಟ್ಯಾಬ್ಲೇಟ್ ಅಥವಾ ಮಿಠಾಯಿಯಂತಹ ವಸ್ತುಗಳನ್ನು ಯಾವಾಗಲೂ ನಿಮ್ಮ ಬಲಿ ಇರಿಸಿ.

ಸನ್ ಬರ್ನ್ ತಪ್ಪಿಸಿ:

ಅತಿಯಾದ ಬಿಸಿಲಿನ ಕಾರಣದಿಂದ ದೇಹದಲ್ಲಿ ಸನ್ ಬರ್ನ್ ಉಂಟಾಗಬಹುದು. ಈ ಸನ್ ಬರ್ನ್ ನಿಂದ ತಪ್ಪಿಸಿಕೊಳ್ಳಲು ತಿಳಿಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ.

ನಾರಿನಾಂಶ ಇರುವ ಆಹಾರಗಳನ್ನು ಸೇವಿಸಿ:

ಎಲೆಕೋಸು, ಮೆಂತ್ಯಸೊಪ್ಪು, ಪಾಲಕ್, ಹಾಗಲಕಾಯಿ ಇತ್ಯಾದಿ ಹೆಚ್ಚು ನಾರಿನಾಂಶವಿರುವ ಹಸಿರು ಎಲೆಗಳ ತರಕಾರಿಗಳನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು.

ಸಿಟ್ರಿಸ್ ಆಹಾರಗಳನ್ನು ಸೇವಿಸಿ:

ನಿಂಬೆ, ನೆಲ್ಲಿಕಾಯಿ, ಕಿತ್ತಳೆ, ಸೌತೆಕಾಯಿ, ಕಲ್ಲಂಗಡಿ, ತೆಂಗಿನ ನೀರು ಮುಂತಾದವುಗಳನ್ನು ಹೆಚ್ಚಾಗಿ ಸೇವಿಸಿ. ಇದು ಬೇಸಿಗೆಯಲ್ಲಿ ನಿಮ್ಮ ದೇಹದಲ್ಲಿನ ಜಲಸಂಚಯನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಹೆಚ್ಚಿನ ಕ್ಯಾಲೋರಿ ಹಣ್ಣುಗಳನ್ನು ಮಿತವಾಗಿ ಸೇವಿಸಿ:

ರಕ್ತದಲ್ಲಿನ ಸಕ್ಕರೆಯ ಮಟ್ಟದ ಹೆಚ್ಚಳವನ್ನು ತಪ್ಪಿಸಲು ಮಾವು ಮತ್ತು ಹಲಸಿನ ಹಣ್ಣುಗಳಂತಹ ಹೆಚ್ಚಿನ ಕ್ಯಾಲೋರಿಯುಕ್ತ ಹಣ್ಣುಗಳನ್ನು ಮಿತವಾಗಿ ಸೇವನೆ ಮಾಡುವುದು ಮುಖ್ಯ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:33 pm, Sun, 30 April 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ