ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು?

|

Updated on: Sep 20, 2024 | 5:49 PM

ತಿರುಪತಿ ತಿಮ್ಮಪ್ಪನ ಸನ್ನಿಧಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣವಾಗಿದೆ ಎಂಬ ಹೇಳಿಕೆ ಆಂಧ್ರಪ್ರದೇಶ ಮಾತ್ರವಲ್ಲ ಇಡೀ ದೇಶದಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಪ್ರಾಣಿಗಳ ಕೊಬ್ಬು ಅಥವಾ ಗೋಮಾಂಸ ದೇಹಕ್ಕೆ ಎಷ್ಟು ಹಾನಿಕಾರಕ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸಬಹುದು. ಇದನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು?
Animal Fat
Follow us on

ಖ್ಯಾತ ಧಾರ್ಮಿಕ ಕ್ಷೇತ್ರ ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಪ್ರಸಾದವಾಗಿ ಸಿಗುವ ಲಡ್ಡುಗಳಲ್ಲಿ ಪ್ರಾಣಿ ಮತ್ತು ಮೀನಿನ ಎಣ್ಣೆಯ ಕುರುಹುಗಳು ಪತ್ತೆಯಾಗಿವೆ. ಈ ವಿಚಾರ ಈಗ ಆಂಧ್ರಪ್ರದೇಶ ಮಾತ್ರವಲ್ಲ ಇಡೀ ದೇಶದಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಪ್ರಾಣಿಗಳ ಕೊಬ್ಬು ಅಥವಾ ಗೋಮಾಂಸ ದೇಹಕ್ಕೆ ಎಷ್ಟು ಹಾನಿಕಾರಕ ಎಂಬ ಪ್ರಶ್ನೆ ನಿಮ್ಮಲ್ಲಿ ಉದ್ಭವಿಸಬಹುದು. ಆದ್ದರಿಂದ ಗೋಮಾಂಸ ಅಥವಾ ಪ್ರಾಣಿಗಳ ಕೊಬ್ಬನ್ನು ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮವೇನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಾರ್ವರ್ಡ್ ಹೆಲ್ತ್​​ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ ಹಂದಿ, ಕುರಿ ಮತ್ತು ಗೋಮಾಂಸ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಬಹಿರಂಗಪಡಿಸಿದೆ. ಇದಲ್ಲದೇ ಪ್ರಾಣಿಗಳ ಕೊಬ್ಬನ್ನು ತಿನ್ನುವುದು ಹೊಟ್ಟೆ ನೋವು, ಮಲಬದ್ಧತೆ, ವಾಂತಿ, ಅತಿಸಾರ ಮತ್ತು ಇತರ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಂಗೈ ಉಜ್ಜುವ ಅಭ್ಯಾಸವಿದ್ದರೆ ನಿಮಗಿಂತ ಆರೋಗ್ಯವಂತರಿಲ್ಲ!

ದೀರ್ಘಕಾಲದವರೆಗೆ ದನದ ಮಾಂಸವನ್ನು ಸೇವಿಸಿದರೆ, ನಿಮ್ಮ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ದನದ ಮಾಂಸವನ್ನು ತಿನ್ನುವುದರಿಂದ ಜೀರ್ಣಕ್ರಿಯೆಗೆ ತೊಂದರೆ ಉಂಟಾಗುತ್ತದೆ ಮತ್ತು ಕ್ಯಾನ್ಸರ್ ಅಪಾಯವೂ ಹೆಚ್ಚಾಗುತ್ತದೆ. ಪ್ರಾಣಿಗಳ ಕೊಬ್ಬು ಬಹಳಷ್ಟು ಕ್ಯಾಲೊರಿಗಳನ್ನು ಹೊಂದಿರುತ್ತದೆ, ಆದ್ದರಿಂದ ನಿಮ್ಮ ತೂಕವು ವೇಗವಾಗಿ ಹೆಚ್ಚಾಗುತ್ತದೆ. ಕೊಬ್ಬಿನ ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ನಿಮ್ಮ ದೇಹಕ್ಕೆ ದೊಡ್ಡ ಹಾನಿ ಉಂಟಾಗಬಹುದು ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ