Weight Loss Tips: ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ 5 ಅತ್ಯುತ್ತಮ ಆಹಾರಗಳು ಇಲ್ಲಿವೆ

ತೂಕ ಇಳಿಸಲು ಉತ್ತಮ ಆಹಾರ ಪದ್ಧತಿಯೂ ಬಹಳ ಮುಖ್ಯ. ಆದ್ದರಿಂದ ತೂಕ ಇಳಿಸಿಕೊಳ್ಳಲು ಇಚ್ಛಿಸುವವರಿಗೆ ಸಹಾಯ ಮಾಡುವ 5 ಮುಖ್ಯ ಆಹಾರಗಳು ಇಲ್ಲಿವೆ.

Weight Loss Tips: ತೂಕ ಇಳಿಸಿಕೊಳ್ಳಲು ಸಹಾಯ ಮಾಡುವ 5 ಅತ್ಯುತ್ತಮ ಆಹಾರಗಳು ಇಲ್ಲಿವೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on: Sep 11, 2021 | 9:14 AM

ಇತ್ತೀಚಿನ ದಿನಗಳಲ್ಲಿ ಸ್ಥೂಲಕಾಯವು ಸಾಮಾನ್ಯ ಸಮಸ್ಯೆಯಾಗಿದೆ, ಈ ಕಾರಣದಿಂದಾಗಿ ಹೆಚ್ಚಿನ ಜನರು ಚಿಕ್ಕ ವಯಸ್ಸಿನಲ್ಲೇ ವಿವಿಧ ರೋಗಗಳಿಂದ ತೊಂದರೆಗೀಡಾಗುತ್ತಿದ್ದಾರೆ. ಆದ್ದರಿಂದಲೇ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ತೂಕ ಇಳಿಸಿಕೊಳ್ಳಲು ಬಯಸುತ್ತಾರೆ. ತೂಕವನ್ನು ಕಳೆದುಕೊಳ್ಳುವಾಗ, ನಾವು ನಮ್ಮ ಆಹಾರ ಮತ್ತು ಜೀವನಶೈಲಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ, ವ್ಯಾಯಾಮ, ಕಡಿಮೆ ಕೊಬ್ಬಿನ ಆಹಾರಗಳು ಮತ್ತು ಸಕ್ಕರೆ ರಹಿತ ಪಾನೀಯಗಳತ್ತ ತಿರುಗುತ್ತೇವೆ. ಈ ಸಮಯದಲ್ಲಿ, ನೀವು ಈ ಕೆಳಕಂಡ ಆಹಾರಗಳನ್ನು ಸೇವಿಸಬಹುದು. ಇವು ತೂಕ ಇಳಿಸಲು ಸಹಾಯ ಮಾಡುತ್ತವೆ.

ಸೇಬು: ದಿನಕ್ಕೆ ಒಂದು ಸೇಬು ಕೇವಲ ವೈದ್ಯರನ್ನು ದೂರವಿಡುತ್ತದೆ ಎಂಬ ಮಾತು ಜನಪ್ರಿಯವಾದದ್ದು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯವನ್ನು ಸೇಬು ಮಾಡುತ್ತದೆ. ಈ ಹಣ್ಣು ಅನಾರೋಗ್ಯಕರ ಬಾಡಿ ಮಾಸ್ ಇಂಡೆಕ್ಸ್ (ಬಿಎಂಐ) ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಡಿಮೆ ಕ್ಯಾಲೋರಿಯ ಇವುಗಳು ಜೀರ್ಣವಾಗುವ ಸಾಮರ್ಥ್ಯವನ್ನು ಹೆಚ್ಚಿಸುವ, ಹಸಿವನ್ನು ತಡೆಯುವ ಫೈಬರ್‌ನ ಸಮೃದ್ಧ ಮೂಲವಾಗಿದೆ. ಈ ಮೂಲಕ ದಿನವಿಡೀ ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಸೇಬು ಕಡಿಮೆ ಮಾಡುತ್ತದೆ.

ಮೆಣಸಿನಕಾಯಿ: ಅಧ್ಯಯನವೊಂದರ ಪ್ರಕಾರ, ಮೆಣಸಿನಕಾಯಿಯಲ್ಲಿರುವ ಅಂಶ, ಕ್ಯಾಪ್ಸೈಸಿನ್, ತೂಕ ಇಳಿಸುವಲ್ಲಿ ಸಹಾಯ ಮಾಡುತ್ತದೆ. ಇದನ್ನು ಊಟದೊಂದಿಗೆ ಸೇವಿಸಿದಾಗ, ಹೆಚ್ಚಿನ ಕ್ಯಾಲೋರಿ ತಿಂಡಿಗಳನ್ನು ತಿನ್ನುವುದನ್ನು ತಡೆಯುತ್ತದೆ. ಇದು ತೂಕ ಇಳಿಸುವ ಪ್ರಕ್ರಿಯೆಯನ್ನು ವೇಗಗೊಳಿಸಲು ಸಹಾಯ ಮಾಡುವುದಲ್ಲದೇ, ಚಯಾಪಚಯ ಕ್ರಿಯೆಯನ್ನು ಸುಧಾರಿಸಲು ಸಹಕಾರ ನೀಡುತ್ತದೆ.

ಓಟ್ ಮೀಲ್: ಸಕ್ಕರೆ ರಹಿತ ಓಟ್ ಮೀಲ್ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ತೂಕವನ್ನು ಇಳಿಸಲು ಸಹಾಯ ಮಾಡುತ್ತದೆ. ಇದನ್ನು ಹಾಲು ಮತ್ತು ತಾಜಾ ಹಣ್ಣುಗಳೊಂದಿಗೆ ಸೇವಿಸಬಹುದು. ಓಟ್ ಮೀಲ್‌ನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ನಿಧಾನಗತಿಯಲ್ಲಿ ಶಕ್ತಿಯನ್ನು ಬಿಡುಗಡೆ ಮಾಡುತ್ತವೆ. ಇದರಿಂದಾಗಿ ವ್ಯಾಯಾಮ ಮಾಡುವಾಗ ಪ್ರಯೋಜನ ಉಂಟಾಗುತ್ತದೆ.

ಅಣಬೆಗಳು: ಅಣಬೆಗಳು ತೂಕ ಇಳಿಸಲು ಸಹಾಯ ಮಾಡುವ ಒಂದು ಉತ್ತಮ ಆಹಾರ. ಇದರಲ್ಲಿ ಫೈಬರ್ ಮತ್ತು ಪ್ರೋಟೀನ್ ಸಮೃದ್ಧವಾಗಿದ್ದು, ಈ ಪೋಷಕಾಂಶಗಳು ತೂಕ ಇಳಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅಣಬೆಗಳು ಮಧುಮೇಹ ಮತ್ತು ಹೃದ್ರೋಗದಂತಹ ದೀರ್ಘಕಾಲದ ಸಮಸ್ಯೆಗಳನ್ನು ಕೂಡ ತಡೆಯುವ ಸಾಮರ್ಥ್ಯ ಹೊಂದಿವೆ.

ಬಾದಾಮಿ: ಬಾದಾಮಿಯು ಕೊಬ್ಬಿನಿಂದ ಸಮೃದ್ಧವಾಗಿದ್ದು ತೂಕ ನಷ್ಟಕ್ಕೆ ಉಪಯುಕ್ತವಲ್ಲ ಎಂದು ಅನೇಕರು ಭಾವಿಸಿರಬಹುದು. ಆದಾಗ್ಯೂ, ಅಧ್ಯಯನದ ಪ್ರಕಾರ, ಬಾದಾಮಿ ಆರೋಗ್ಯಕರ ಕೊಬ್ಬಿನ ಉತ್ತಮ ಮೂಲವಾಗಿದ್ದು ಅದು ಹೃದಯದ ಆರೋಗ್ಯಕ್ಕೆ ಮತ್ತು ತೂಕ ಇಳಿಕೆಗೆ ಕೂಡ ಒಳ್ಳೆಯದು. ಆದರೆ ಬಾದಾಮಿಯ ಪ್ರಮಾಣವನ್ನು ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ಇದನ್ನು ಅಧಿಕ ಪ್ರಮಾಣದಲ್ಲಿ ತೆಗೆದುಕೊಂಡಾಗ, ಅದು ತೂಕ ಹೆಚ್ಚಾಗುವುದಕ್ಕೂ ಕಾರಣವಾಗಬಹುದು.

ಇದನ್ನೂ ಓದಿ:

200 ಕೆಜಿ ಚಾಕೊಲೇಟ್ ಬಳಸಿ ತಯಾರಿಸಿದ ಗಣೇಶನ ವಿಗ್ರಹವಿದು; ಈ ಮೂರ್ತಿಯ ವಿಸರ್ಜನೆ ಹೇಗೆ ಮಾಡುತ್ತಾರಂತೆ ಗೊತ್ತಾ?

Weight Loss: ತೂಕ ಇಳಿಸಿಕೊಳ್ಳಲು ಸುಲಭ ಮಾರ್ಗ ಏಲಕ್ಕಿ ನೀರು ಸೇವನೆ

(To reduce weight here is the list of 5 best foods)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ