ಬೆಂಗಳೂರು: ರಾಜ್ಯದಲ್ಲಿ ಇಂದು (ಜುಲೈ 17) 944 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 7,569 ಇದ್ದು, ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 3.25 ರಷ್ಟಿದೆ. ಬೆಂಗಳೂರಿನಲ್ಲಿಂದು 799 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇಂದಿನ 17/07/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/1mNptHTr8t @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/Wby6DXhfxb
— K'taka Health Dept (@DHFWKA) July 17, 2022
ಇಂದು 670 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 3938620 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ಒಟ್ಟು 29,022 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಈ ಪೈಕಿ 944 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 7569 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಸೋಂಕಿಗೆ ಒಟ್ಟು 40089 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಂಡ್ಯ ಜಿಲ್ಲೆಯಲ್ಲಿಂದು ನಾಲ್ವರಿಕೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯದ ಇಬ್ಬರಿಗೆ, ಪಾಂಡವಪುರ ಹಾಗೂ ನಾಗಮಂಗಲ ತಾಲೂಕಿನ ತಲಾ ಒಬ್ಬರಿಗೆ ಕೊರೋನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಕೊವಿಡ್ ಪ್ರಕರಣಗಳು 13 ಇವೆ ಎಂದು ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆಯಿಂದ ಅಧಿಕೃತ ಮಾಹಿತಿ ನೀಡಿದ್ದಾರೆ.
Published On - 8:27 pm, Sun, 17 July 22