National Dentist’s Day: ರಾಷ್ಟ್ರೀಯ ದಂತ ವೈದ್ಯರ ದಿನ; ನಿಮ್ಮ ಮೊಗದಲ್ಲಿ ನಗು ಅರಳಿಸುವ ದಂತ ವೈದ್ಯರಿಗೊಂದು ಶುಭಾಶಯ

ಮಾರ್ಚ್ 6 ರಂದು ದೇಶಾದ್ಯಂತ ದಂತ ವೈದ್ಯರ ದಿನ ಎಂದು ಆಚರಿಸಲಾಗುತ್ತದೆ. ರಾಷ್ಟ್ರೀಯ ದಂತವೈದ್ಯರ ದಿನವಾದ ಇಂದು ಎಲ್ಲ ದಂತವೈದ್ಯರ ಸೇವೆಗೆ ಗೌರವ ಸಲ್ಲಿಸೋಣ. ಹಾಗೆಯೇ ನಮ್ಮ ಹಲ್ಲಿನ ಸುರಕ್ಷತೆ ಬಗ್ಗೆ ಕಾಳಜಿ ವಹಿಸುವ ಜತೆಗೆ ಬೇರೆಯವರಿಗೂ ಜಾಗೃತಿ ಮೂಡಿಸೋಣ.

National Dentist’s Day: ರಾಷ್ಟ್ರೀಯ ದಂತ ವೈದ್ಯರ ದಿನ; ನಿಮ್ಮ ಮೊಗದಲ್ಲಿ ನಗು ಅರಳಿಸುವ ದಂತ ವೈದ್ಯರಿಗೊಂದು ಶುಭಾಶಯ
ಡಾ ರವಿಕಿರಣ ಪಟವರ್ಧನ ಶಿರಸಿ
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Mar 06, 2024 | 10:26 AM

ಮಾರ್ಚ್ 6 ರಂದು ದೇಶಾದ್ಯಂತ ‘ದಂತ ವೈದ್ಯರ ದಿನ’(National Dentist’s Day) ಎಂದು ಆಚರಿಸಲಾಗುತ್ತದೆ. ದಂತ ವೈದ್ಯರ ಸೇವೆಯನ್ನು ಸ್ಮರಿಸುತ್ತಾ ಅವರಿಗೊಂದು ಧನ್ಯವಾದ ಅಥವಾ ಅಭಿನಂದನೆ ತಿಳಿಸುವ ಸುದಿನ. ಅದೇಕೋ ದಂತ ವೈದ್ಯರ ಬಗೆಗಿನ ಭಯ ಜನ ಸಾಮಾನ್ಯರಲ್ಲಿ ಇನ್ನೂ ಉಳಿದಿದೆ. ದಂತ ವೈದ್ಯರು ಎಂದರೆ ‘ನೋವು ಉಂಟು ಮಾಡುವವರು ಎಂಬ ಹಣೆ ಪಟ್ಟಿ ಇನ್ನೂ ಪೂರ್ತಿಯಾಗಿ ಕಳಚಿಕೊಂಡಿಲ್ಲ. ತಲೆ ತಲಾಂತರಗಳಿಂದ ದಂತ ವೈದ್ಯರನ್ನು ‘ಖಳ ನಾಯಕ’ನ ರೀತಿಯಲ್ಲಿ ಚಿತ್ರಿಸಲಾಗಿದೆ ಮತ್ತು ಜನಮಾನಸದಲ್ಲಿ ದಂತ ವೈದ್ಯರ ಬಗ್ಗೆ ಬೀತಿಯ ಕಲ್ಪನೆ ಇನ್ನೂ ತೊಲಗಿಲ್ಲದಿರುವುದೇ ಸೋಜಿಗರ ಮತ್ತು ದೌರ್ಭಾಗ್ಯದ ಸಂಗತಿ. ಯಾವೊಬ್ಬ ವ್ಯಕ್ತಿಯೂ ನೋವಿಲ್ಲದೇ ಇನ್ನೂ ದಂತ ವೈದ್ಯರ ಬಳಿ ಬರಲು ಹಿಂದೇಟು ಹಾಕುವುದಂತೂ ಸತ್ಯ. ದಂತ ವೈದ್ಯರ ದಂತ ಕುರ್ಚಿ ಮಾತ್ರ ಇನ್ನೂ ಹೆಚ್ಚಿನವರಿಗೆ ಮುಳ್ಳಿನ ಹಾಸಿಗೆಯಾಗಿ ಉಳಿದಿರುವುದೇ ಬಹು ದೊಡ್ಡ ಜೀರ್ಣಿಸಿಕೊಳ್ಳಲಾಗದ ಸತ್ಯ.

ಹಿಂದಿನ ಕಾಲದಲ್ಲಿ ವೈಜ್ಞಾನಿಕತೆ ತಂತ್ರಜ್ಞಾನ ಮತ್ತು ಕೌಶಲ್ಯಗಳ ಕೊರತೆಯಿಂದಾಗಿ ದಂತ ವೈದ್ಯಕೀಯ ಕ್ಷೇತ್ರ ಅಂದರೆ ಜನರಲ್ಲಿ ಒಂದು ರೀತಿಯ ಅವ್ಯಕ್ತ ಭಯ ಕಾಡುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಹೊಸ ಹೊಸ ಆವಿಷ್ಕಾರ ಬಂದಿದೆ. ತಂತ್ರಜ್ಞಾನ ಮತ್ತು ವೈದ್ಯ ವಿಜ್ಞಾನದಲ್ಲಿ ಅಪಾರ ಬದಲಾವಣೆ ಉಂಟಾಗಿದೆ. ಹಾಗಾಗಿ ದಂತ ವೈದ್ಯಕೀಯ ಕ್ಷೇತ್ರ ಈಗ ಮೊದಲಿನಂತೆ ಉಳಿದಿಲ್ಲ. ದಂತ ವೈದ್ಯಕೀಯ ಆಸ್ಪತ್ರೆ ಎಂದರೆ ಯಾವುದೋ ಹೊಸ ಲೋಕಕ್ಕೆ ಎಂದಂತೆ ಭಾಸವಾಗುವ ರೀತಿಯಲ್ಲಿ ಮಾರ್ಪಾಡಾಗಿದೆ. ವಿಶಾಲವಾದ ಜಾಗ, ಮೆತ್ತನೆಯ ದೇಹದಾಕೃತಿಯ ದಂತ ಚಿಕಿತ್ಸೆ ಕುರ್ಚಿ, ಹವಾನಿಯಂತ್ರಿಕ ವಾತಾವರಣ, ಕಿವಿಗೊಪ್ಪುವ ಲಘು ಸಂಗೀತ…ಹಾಗೇ ಬಹಳಷ್ಟು ಬದಲಾವಣೆ ಉಂಟಾಗಿದೆ. ದಂತ ವೈದ್ಯಕೀಯ ಚಿಕಿತ್ಸೆ ಈಗ ಬರೀ ನೋವು ನಿವಾರಕ ವ್ಯವಸ್ಥೆಗಿಂತಲೂ ಸೌಂದರ್ಯವರ್ಧಕ ಚಿಕಿತ್ಸೆಯಾಗಿ ಬದಲಾಗಿರುವುದು ಖಂಡಿತವಾಗಿಯೂ ಸತ್ಯ. ಇಷ್ಟೆಲ್ಲಾ ಬದಲವಣೆಯಾಗಿದ್ದರೂ ಜನರು ಮಾತ್ರ ದಂತ ವೈದ್ಯರ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳನ್ನು ಹೊಂದಿರುವುದು ಸೋಜಿಗವೇ ಸರಿ. ಅದೇನೋ ಇರಲಿ ನಿಮ್ಮ ನೋವನ್ನು ಶಮನ ಮಾಡುವ ನಿಮ್ಮನ್ನು ಸದಾ ನಗಿಸಲು ಮತ್ತು ಹಸನ್ಮುಖಿಯಾಗಿ ಇರುವಂತೆ ಶುಭ್ರ ದಂತಪಂಕ್ತಿಗಳಿಗಾಗಿ ಸದಾಕಾಲ ಶ್ರಮ ಪಡುವ ದಂತ ವೈದ್ಯರನ್ನು ಸ್ಮರಿಸುವ ಮತ್ತು ಒಂದು ಪುಟ್ಟ ಥ್ಯಾಂಕ್ಸ್ ಹೇಳುವ ದಿನ ಮಾರ್ಚ್ 6 ಎಂಬುದಂತೂ ನಿಜ.

ಯಾಕಾಗಿ ದಂತ ವೈದ್ಯರ ದಿನ ಆಚರಿಸಲಾಗುತ್ತದೆ?

  • ಬಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಅರಿವು ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಣೆ ಮಾಡಲಾಗುತ್ತಿದೆ.
  • ದಂತ ಸಂಬಂಧಿ ರೋಗಗಳಾದ ದಂತ ಕ್ಷಯ, ದಂತ ಕುಳಿ, ದಂತ ಸವೆತ, ದಂತ ಅತಿ ಸಂವೇದನೆ ಮುಂತಾದ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತದೆ.
  • ದಂತ ಆರೋಗ್ಯ ಮತ್ತು ಬಾಯಿ ಆರೋಗ್ಯಕ್ಕೆ ಪೂರಕವಾದ ಹವ್ಯಾಸಗಳ ಬಗ್ಗೆ ಜನರಲ್ಲಿ ಒಲವು ಮೂಡಿಸುವ ಉದ್ದೇಶದಿಂದಾಗಿ ಈ ಆಚರಣೆ ಮಾಡಲಾಗುತ್ತಿದೆ.
  • ಮಕ್ಕಳಲ್ಲಿ ದಂತ ಸಂಬಂಧಿ ರೋಗಗಳನ್ನು ತಡೆಯುವ ಬಗ್ಗೆ ಮತ್ತು ಮಕ್ಕಳಲ್ಲಿ ದಂತ ರಕ್ಷಣೆಯ ಬಗ್ಗೆ ಒಲವು ಮೂಡಿಸುವ ಉದ್ದೇಶದಿಂದ.
  • ಮುಖ ಮನಸ್ಸಿನ ಕನ್ನಡಿ ಇದ್ದಂತೆ. ಸುಂದರವಾದ ದಂತ ಪಂಕ್ತಿಗಳಿಂದ ಕೂಡಿದ ನಗು ಮುಖದ ಅಂದವನ್ನು ಹೆಚ್ಚಿಸುತ್ತದೆ. ಜನರ ಹಲ್ಲನ್ನು ಸರಿಪಡಿಸಿ ನಗುವಿನ ಮಾದಕತೆ ಹೆಚ್ಚಿಸುವಂತೆ ಪ್ರೇರೇಪಿಸಿ ರೋಗಿಗಳ ಆತ್ಮವಿಶ್ವಾಸವನ್ನು ವೃದ್ಧಿಸುವ ಸದುದ್ದೇಶದಿಂದ ಈ ಆಚರಣೆ ಮಾಡಲಾಗುತ್ತಿದೆ.
  • ದಂತ ಆರೋಗ್ಯವನ್ನು ವೃದ್ಧಿಸುವ ಹವ್ಯಾಸಗಳಾದ ದಂತದಾರ ಬಳಕೆ, ದಂತ ಕುಂಚಗಳ ಸೂಕ್ತ ಬಳಕೆ, ದಂತ ಚೂರ್ಣಗಳ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಮೂಲ ಉದ್ದೇಶದೊಂದಿಗೆ ದಂತ ವೈದ್ಯರ ದಿನ ಆಚರಿಸಲಾಗುತ್ತಿದೆ.

ದಂತ ವೈದ್ಯರ ದಿನದ ಸಂದೇಶ:

  • ದಿನಕ್ಕೆರಡು ಬಾರಿ ಕನಿಷ್ಠ ಮೂರು ನಿಮಿಷಗಳ ಕಾಲ ಹಲ್ಲುಜ್ಜಬೇಕು.
  • ದಿನಕ್ಕೊಮ್ಮೆಯಾದರೂ ದಂತದಾರ ಅಥವಾ ದಂತ ಬಳ್ಳಿ ಬಳಸಿ ಹಲ್ಲುಗಳ ಸಂದುಗಳನ್ನು ಶುಚಿಗೊಳಿಸಿ.
  • ಹಲ್ಲು ನೋವು ಬಂದಾಗ ಮಾತ್ರ ದಂತ ವೈದ್ಯರ ಭೇಟಿ ಮಾಡುವುದು ಸರಿಯಾದ ಕ್ರಮವಲ್ಲ.
  • ನೀವು ಸೇವಿಸುವ ಆಹಾರದ ಮೇಲೆ ನಿಗಾ ಇರಲಿ. ಸಮತೋಲಿತ ಮತ್ತು ಹಲ್ಲಿನ ಆರೋಗ್ಯಕ್ಕೆ ಪೂರಕವಾದ ನಾರುಯುಕ್ತ ಹಣ್ಣು ಹಂಪಲು, ಹಸಿ ತರಕಾರಿ ಯುಕ್ತ ಆಹಾರ ಸೇವಿಸಿ. ಇಂಗಾಲಯುಕ್ತ ಕೃತಕ ಪೇಯಗಳನ್ನು ತ್ಯಜಿಸಬೇಕು. ತಾಜಾ ಹಣ್ಣಿನ ರಸ, ಕಬ್ಬಿನ ಹಾಲು ಎಳನೀರು ಮುಂತಾದ ನೈಸರ್ಗಿಕ ಪೇಯಗಳನ್ನು ಸೇವಿಸಬೇಕು.
  • ಎರಡೂ ಊಟಗಳ ನಡುವೆ ಸಿಹಿ ಪದಾರ್ಥ ಮತ್ತು ಅಂಟು ಪದಾರ್ಥಗಳನ್ನು ಸೇವಿಸುವುದನ್ನು ಕಡಿಮೆ ಮಾಡಿ. ಅನಿವಾರ್ಯವಾದಲ್ಲಿ ಸೇವಿಸಿದ ಬಳಿಕ ಚೆನ್ನಾಗಿ ಬಾಯಿ ಮುಕ್ಕಳಿಸಬೇಕು.
  • ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಮೌತ್‍ವಾಶ್ ಅಥವಾ ಕನಿಷ್ಠ ಪಕ್ಷ ಬಿಸಿ ನೀರಿಗೆ ಒಂದು ಚಿಟಿಕೆ ಉಪ್ಪುಹಾಕಿ. ಆ ದ್ರಾವಣದಿಂದ ಬಾಯಿ ಶುಚಿಗೊಳಿಸಬೇಕು.
  • ದಂತ ವೈದ್ಯರು ಹಲ್ಲು ಶುಚಿಗೊಳಿಸುವದರಿಂದ ಬಾಯಿವಾಸನೆ, ವಸಡಿನ ಉರಿಯೂತ ಮತ್ತು ವಸಡಿನಲ್ಲಿ ರಕ್ತ ಒಸರುವುದು ನಿಯಂತ್ರಣಕ್ಕೆ ಬರುತ್ತದೆ.
  • ಹಲ್ಲುನೋವು ಬಂದಾಗ ಸ್ವಯಂ ಔಷಧಿಗಾರಿಕೆ ಮಾಡಿಕೊಂಡು ನೋವು ನಿವಾರಕ ಔಷಧಿ ತೆಗೆದುಕೊಳ್ಳುವುದು ಬಹಳ ಅಪಾಯಕಾರಿ. ದಂತ ವೈದ್ಯರ ಸಲಹೆ ಅತೀ ಅಗತ್ಯ.

ಇದನ್ನೂ ಓದಿ: Ramadan 2024: ಈ ವರ್ಷ ರಂಜಾನ್ ಯಾವಾಗ?; ದಿನಾಂಕ, ಸಮಯ, ಇಫ್ತಾರ್​ ಕೂಟದ ವಿವರ ಇಲ್ಲಿದೆ

ಸಾವು ಸಮೀಪಿಸಿದಾಗ ವೈದ್ಯ ದೇವರಾಗಿಯೂ, ಚಿಕಿತ್ಸೆ ಆರಂಭಿಸಿದಾಗ ದೇವಮಾನವನಾಗಿಯೂ, ಚಿಕಿತ್ಸೆ ಫಲಿಸಿದಾಗ ಸಾಮಾನ್ಯ ಮನುಷ್ಯನಾಗಿಯೂ, ಶುಲ್ಕ ಕೇಳಿದಾಗ ಧನದಾಹಿ ಎಂದೂ, ಚಿಕಿತ್ಸೆ ಫಲಿಸದಾಗ ಕೊಲೆಗಡುಕ ಎಂದೂ ಜನರು ವೈದ್ಯರನ್ನೂ ಹಾಡಿ ಹೊಗಳುತ್ತಾರೆ ಮತ್ತು ತೆಗಳುತ್ತಾರೆ. ಆದರೆ ಈ ಎಲ್ಲಾ ಹೊಗಳಿಕೆಗೆ ಹಿಗ್ಗದೆ ತೆಗಳಿಕೆಗೆ ಕುಗ್ಗದೆ ಸಮಚಿತ್ತದಿಂದ ವರ್ತಿಸಿ ವೃತ್ತಿ ಧರ್ಮವನ್ನು ಪಾಲಿಸಿ ರೋಗಿಯು ಗುಣಮುಖವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುವವನೇ ನಿಜವಾದ ವೈದ್ಯ. ಈ ರೀತಿ ತನ್ನ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಸೇವೆ ಮಾಡುತ್ತಿರುವ ನೂರಾರು ದಂತ ವೈದ್ಯರು ನಮ್ಮ ಸಮಾಜದಲ್ಲಿ ಇದ್ದಾರೆ. ಅವರು ಹಾಕಿದ ಆದರ್ಶ ಮತ್ತು ತತ್ವಗಳು ಇತರರಿಗೆ ಮಾದರಿಯಾಗಲಿ.

ರಾಷ್ಟ್ರೀಯ ದಂತವೈದ್ಯರ ದಿನವಾದ ಇಂದು ಎಲ್ಲ ದಂತವೈದ್ಯರ ಸೇವೆಗೆ ಗೌರವ ಸಲ್ಲಿಸೋಣ. ಹಾಗೆಯೇ ನಮ್ಮ ಹಲ್ಲಿನ ಸುರಕ್ಷತೆ ಬಗ್ಗೆ ಕಾಳಜಿ ವಹಿಸುವ ಜತೆಗೆ ಬೇರೆಯವರಿಗೂ ಜಾಗೃತಿ ಮೂಡಿಸೋಣ.

ಲೇಖನ: ಡಾ ರವಿಕಿರಣ ಪಟವರ್ಧನ ಶಿರಸಿ

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Wed, 6 March 24

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು