Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಮಕ್ಕಳಲ್ಲಿ ಟೊಮೆಟೊ ಜ್ವರ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಕೊರೊನಾ ಸೋಂಕಿಗೂ, ಟೊಮೆಟೊ ಫ್ಲೂ ಎನ್ನಲಾಗುವ ವೈರಲ್ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಕೇರಳದ ಮಕ್ಕಳಲ್ಲಿ ಟೊಮೆಟೊ ಜ್ವರ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 12, 2022 | 11:59 AM

ಬೆಂಗಳೂರು: ಕೇರಳದ ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ (Tomato Flu) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೇರಳ ಗಡಿಯಲ್ಲಿ (Karnataka Kerala Border) ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇರಳದ 80ಕ್ಕೂ ಹೆಚ್ಚು ಪುಟ್ಟಮಕ್ಕಳಲ್ಲಿ ಟೊಮೆಟೊ ಜ್ವರ ಪತ್ತೆಯಾಗಿದೆ. ಕೊರೊನಾ ಸೋಂಕಿಗೂ, ಟೊಮೆಟೊ ಫ್ಲೂ ಎನ್ನಲಾಗುವ ವೈರಲ್ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಟೊಮೆಟೊ ಫ್ಲೂ ಮೊದಲಿನಿಂದಲೂ ಇದ್ದ ಕಾಯಿಲೆ. ಅದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್​ನಲ್ಲಿ ಟೊಮೆಟೊ ವೈರಾಣು ಸೋಂಕು ಪತ್ತೆಯಾಗಿದೆ. ಇದು ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಸಮಸ್ಯೆ. ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಈ ರೋಗದ ಲಕ್ಷಣಗಳು. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸವೂ ಕಂಡುಬರುತ್ತದೆ. ಚರ್ಮದ ಮೇಲೆ‌ ಕೆಂಪು‌ ಗುಳ್ಳೆಗಳು ಕೂಡ ಉಂಟಾಗುತ್ತವೆ.

ಕೇರಳದ ಗಡಿಯಲ್ಲಿರುವ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರಲ್ಲಿ ರೋಗ ಲಕ್ಷಣಗಳಿರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಜಿಲ್ಲೆಗಳ ಆಸ್ಪತ್ರೆಗಳಲ್ಲಿರುವ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಲು ಆರೋಗ್ಯ ಇಲಾಖೆಯ ಆಯುಕ್ತ ಡಿ.ರಣದೀಪ್ ಸೂಚನೆ ನೀಡಿದ್ದಾರೆ.

ತಮಿಳುನಾಡು ಆರೋಗ್ಯ ಇಲಾಖೆಯೂ ಇದೇ ಮಾದರಿಯ ಕಟ್ಟೆಚ್ಚರದ ಆದೇಶ ಹೊರಡಿಸಿದ್ದು ಕೇರಳದಿಂದ ಬರುವ ಪ್ರಯಾಣಿಕರ ಜೊತೆಗಿರುವ ಮಕ್ಕಳನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಿದೆ. ಪ್ರತಿ ಜಿಲ್ಲೆಯಲ್ಲಿಯೂ ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯ ಜಂಟಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಟೊಮೆಟೊ ಜ್ವರದ ಕೆಲವು ಪ್ರಮುಖ ಲಕ್ಷಣಗಳು – ವಿಪರೀತ ಜ್ವರ, ನಿರ್ಜಲೀಕರಣ, ದದ್ದುಗಳು, – ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು – ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳೆತ, ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು, – ಆಯಾಸ ಮತ್ತು ದೇಹದಲ್ಲಿ ನೋವು

ಮುನ್ನೆಚ್ಚರಿಕೆ ಮತ್ತು ಚಿಕಿತ್ಸೆ ಟೊಮೆಟೊ ಫ್ಲೂ ಕುರಿತು ಮಾಹಿತಿ ನೀಡಿರುವ ಡಾ.ಅರುಣ, ‘ಇದು ತನ್ನಿಂತಾನೆ ಕಡಿಮೆಯಾಗುವ ಸೋಂಕು. ಯಾವುದೇ ನಿರ್ದಿಷ್ಟ ಔಷಧಿ ಇಲ್ಲ’ ಎಂದು ಹೇಳಿದ್ದಾರೆ. ‘ಇದು ವೇಗವಾಗಿ ಹರಡುವ ಸೋಂಕಾಗಿರುವ ಕಾರಣ ಟೊಮೆಟೊ ಫ್ಲೂ ಬಂದವರನ್ನು ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಸೋಂಕಿನಿಂದ ಉಂಟಾಗುವ ದದ್ದುಗಳನ್ನು ಕೆರೆದುಕೊಳ್ಳಲು ಮಕ್ಕಳಿಗೆ ಬಿಡಬಾರದು. ಸೋಂಕಿತರ ಬಟ್ಟೆ ಮತ್ತು ಅವರು ಬಳಸುವ ಪಾತ್ರೆಗಳನ್ನು ಸರಿಯಾದ ರೀತಿ ಸ್ವಚ್ಛಗೊಳಿಸಬೇಕು. ದ್ರವಾಹಾರ ಸೇವನೆಯಿಂದ ನಿರ್ಜಲೀಕರಣದ ಸಮಸ್ಯೆ ಕಡಿಮೆಯಾಗುತ್ತದೆ. ಸೋಂಕಿನ ಲಕ್ಷಣ ಆಧರಿಸಿ ವೈದ್ಯರು ಚಿಕಿತ್ಸೆ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Thu, 12 May 22

ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ