Toor Dal: ದಿನವೂ ತೊಗರಿಬೇಳೆ ಹಾಕಿದ ಸಾಂಬಾರ್ ತಿನ್ನುತ್ತೀರಾ?; ಈ ಸುದ್ದಿ ಓದಿ

ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ರಸಂ ಮತ್ತು ಸಾಂಬಾರ್ ಇಲ್ಲದೆ ಊಟವೇ ಇಲ್ಲ. ದಿನವೂ ತೊಗರಿ ಬೇಳೆ ಹಾಕಿದ ಸಾರು ಮತ್ತು ಸಾಂಬಾರ್ ತಿನ್ನುವವರು ಬೇಕಾದಷ್ಟು ಜನರಿದ್ದಾರೆ. ನೀವು ಕೂಡ ಅವರಲ್ಲಿ ಒಬ್ಬರಾಗಿದ್ದರೆ ಅತಿಯಾಗಿ ತೊಗರಿ ಬೇಳೆ ತಿನ್ನುವುದರಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆಯೂ ತಿಳಿದಿರುವುದು ಉತ್ತಮ.

Toor Dal: ದಿನವೂ ತೊಗರಿಬೇಳೆ ಹಾಕಿದ ಸಾಂಬಾರ್ ತಿನ್ನುತ್ತೀರಾ?; ಈ ಸುದ್ದಿ ಓದಿ
ತೊಗರಿ ಬೇಳೆImage Credit source: iStock
Follow us
ಸುಷ್ಮಾ ಚಕ್ರೆ
|

Updated on: Feb 24, 2024 | 3:54 PM

ತೊಗರಿಬೇಳೆ ಭಾರತದಲ್ಲಿ ಹೆಚ್ಚು ಸೇವಿಸುವ ಬೇಳೆಗಳಲ್ಲಿ ಒಂದಾಗಿದೆ. ಅದರ ರುಚಿ ಮತ್ತು ಅದರ ಹೆಚ್ಚಿನ ಪ್ರೋಟೀನ್, ಫೈಬರ್ ಅಂಶದಿಂದಾಗಿ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಇದು ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ, ಆರೋಗ್ಯಕರವಾಗಿ ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮನ್ನು ಪೋಷಿಸುತ್ತದೆ. ಆದರೆ, ಅತಿಯಾಗಿ ತೊಗರಿ ಬೇಳೆಯನ್ನು ತಿನ್ನುವುದು ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು. ಆ ಬಗ್ಗೆ ಮಾಹಿತಿ ಇಲ್ಲಿದೆ.

ದ್ವಿದಳ ಧಾನ್ಯಗಳು ಹೆಚ್ಚು ಪೌಷ್ಠಿಕಾಂಶದ ಆಹಾರಗಳಲ್ಲಿ ಒಂದಾಗಿದೆ. ಇದು ವಿಟಮಿನ್ B, ಮೆಗ್ನೀಸಿಯಮ್, ಸತು ಮತ್ತು ಪೊಟ್ಯಾಸಿಯಮ್‌ಗಳಿಂದ ತುಂಬಿರುತ್ತದೆ. ಇದು ನಿಮ್ಮ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯಕರವಾಗಿ ತೂಕ ಇಳಿಸಲು ಸಹಾಯ ಮಾಡುತ್ತದೆ. ಇತರ ದ್ವಿದಳ ಧಾನ್ಯಗಳಿಗೆ ಹೋಲಿಸಿದರೆ ತೊಗರಿ ಬೇಳೆ ಪ್ರೋಟೀನ್‌ನ ಉತ್ತಮ ಮೂಲಗಳಲ್ಲಿ ಒಂದಾಗಿದೆ. ಇದು ಕಡಿಮೆ ಕೊಬ್ಬು ಮತ್ತು ಹೆಚ್ಚಿನ ಫೈಬರ್ ಮತ್ತು ಖನಿಜಗಳನ್ನು ಒಳಗೊಂಡಿರುವುದರಿಂದ ಇದು ನಿಮಗೆ ಆರೋಗ್ಯಕರ ಆಯ್ಕೆಯಾಗಿದೆ. ಇದು ನಿಮ್ಮ ಆರೋಗ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಇದನ್ನೂ ಓದಿ: ಮಲಬದ್ಧತೆಯಿಂದ ಕಂಗೆಟ್ಟಿದ್ದೀರಾ?; ಜೀರ್ಣಕ್ರಿಯೆಯನ್ನು ಸುಲಭಗೊಳಿಸಲು ಈ ಜ್ಯೂಸ್ ಸೇವಿಸಿ

ತೊಗರಿ ಬೇಳೆಯ ಅಡ್ಡ ಪರಿಣಾಮಗಳು ಹೀಗಿವೆ:

– ಅಲರ್ಜಿಯ ಪ್ರತಿಕ್ರಿಯೆಗಳು

– ಉಸಿರಾಟದ ಕಾಯಿಲೆ.

– ಜೀರ್ಣಾಂಗವ್ಯೂಹದ ಉರಿಯೂತ.

– ಹೊಟ್ಟೆಯ ನೋವು

– ಗ್ಯಾಸ್ಟ್ರಿಕ್

– ಯೂರಿಕ್ ಆಮ್ಲ

ತೊಗರಿಬೇಳೆಯನ್ನು ಬಳಸುವಾಗ ಇಂತಹ ಯಾವುದೇ ಪ್ರತಿಕ್ರಿಯೆಯನ್ನು ನೀವು ಗಮನಿಸಿದರೆ, ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ತೊಗರಿಬೇಳೆ ಸೇವಿಸುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು ಇಲ್ಲಿವೆ.

ತೊಗರಿಬೇಳೆಯು ಪ್ರೋಟೀನ್‌ನಲ್ಲಿ ಸಮೃದ್ಧವಾಗಿದೆ. ಆದ್ದರಿಂದ ಜೀರ್ಣಕಾರಿ ಅಸ್ವಸ್ಥತೆಗಳಿರುವ ಜನರು ಇದನ್ನು ಅಧಿಕವಾಗಿ ಸೇವಿಸುವಾಗ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುವಾಗ ಅನುಸರಿಸಿದಂತೆ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ಆಹಾರದ ಪ್ರಮಾಣಕ್ಕಿಂತ ಹೆಚ್ಚು ಸೇವಿಸುವಾಗ ಅನುಸರಿಸಬೇಕು. ವಿಶೇಷವಾಗಿ ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ತೊಗರಿ ಬೇಳೆಯನ್ನು ಸೇವಿಸುವಾಗ ಎಚ್ಚರಿಕೆ ವಹಿಸಬೇಕು. ನಿಮ್ಮ ವೈದ್ಯರು ಸೂಚಿಸಿದರೆ ಮಾತ್ರ ಅದನ್ನು ತೆಗೆದುಕೊಳ್ಳಬೇಕು. ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳಿಗೆ ನೀಡುವಾಗ ಹೆಚ್ಚಿನ ಎಚ್ಚರಿಕೆಯನ್ನು ತೆಗೆದುಕೊಳ್ಳಬೇಕು.

ಇದನ್ನೂ ಓದಿ: ಜೀರ್ಣಕ್ರಿಯೆಗೆ ತೊಂದರೆಯಾಗುತ್ತಿದೆಯೇ?; ಒಣದ್ರಾಕ್ಷಿಯನ್ನು ಈ ರೀತಿ ಸೇವಿಸಿ

ವಿಶೇಷವಾಗಿ ರಾತ್ರಿಯಲ್ಲಿ ಹೆಚ್ಚು ತೊಗರಿ ಬೇಳೆಯ ಸೇವನೆಯು ಅನೇಕ ಜನರಲ್ಲಿ ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಬೇಳೆಗಳು ಫೈಬರ್‌ನಿಂದ ತುಂಬಿರುತ್ತವೆ, ಇದು ಹೊಟ್ಟೆಯಲ್ಲಿ ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪೌಷ್ಟಿಕತಜ್ಞರ ಪ್ರಕಾರ, ದೇಹದ ಜೀರ್ಣಕ್ರಿಯೆಯು ಹೆಚ್ಚು ಸಕ್ರಿಯವಾಗಿರುವ ಹಗಲಿನ ಸಮಯದಲ್ಲಿ ತೊಗರಿಬೇಳೆಯನ್ನು ತಿನ್ನಬೇಕು.

ಒಂದುವೇಳೆ ನೀವು ಪೈಲ್ಸ್ ಅಥವಾ ಮೂಲವ್ಯಾಧಿಯಿಂದ ಬಳಲುತ್ತಿದ್ದರೆ ನೀವು ಹೆಚ್ಚು ತೊಗರಿ ಬೇಳೆಯನ್ನು ತಿನ್ನಬಾರದು.ಅಧ್ಯಯನಗಳ ಪ್ರಕಾರ, ಪೈಲ್ಸ್ ಇದ್ದರೆ ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಅದರಲ್ಲಿರುವ ಪ್ರೋಟೀನ್ ಅನ್ನು ಜೀರ್ಣಿಸಿಕೊಳ್ಳಲು ತುಂಬಾ ಶ್ರಮಿಸಬೇಕಾಗುತ್ತದೆ. ಇದರಿಂದಾಗಿ ಮಲಬದ್ಧತೆಯ ಸಮಸ್ಯೆ ಪ್ರಾರಂಭವಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ