AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು

ಮನೆಯಲ್ಲಿ ವೃದ್ಧರಿದ್ದರೆ, ಅವರ ಆರೋಗ್ಯದ ಬಗ್ಗೆ ವಿಶೇಷವಾಗಿ ಕಾಳಜಿ ವಹಿಸುವುದು ಅವಶ್ಯಕ. ಏಕೆಂದರೆ ವಯಸ್ಸು ಹೆಚ್ಚಾದಂತೆ ಅನೇಕ ರೀತಿಯ ರೋಗಗಳು ಬರುವ ಅಪಾಯವಿರುತ್ತದೆ. ಹಾಗಾಗಿ ಅವರ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು, ಎಷ್ಟು ದಿನಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು ಎಂಬುದರ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮನೆದಲ್ಲಿ ಹಿರಿಯರು ಇದ್ದಾರಾ? ಹಾಗಿದ್ರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು
Doctor's Advice For Elderly CareImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 01, 2026 | 6:08 PM

Share

ಮನೆಯಲ್ಲಿ ಹಿರಿಯರಿದ್ದರೆ ಮನೆ ಮಂದಿಗೆಲ್ಲಾ ಒಂದು ರೀತಿಯ ಸಂತೋಷ. ಆದರೆ ಅವರ ಜೊತೆ ಕಾಲಕಳೆಯುವುದರ ಜೊತೆಗೆ ಅವರ ಆರೋಗ್ಯದ ಕಡೆ ವಿಶೇಷ ಗಮನ ನೀಡುವುದು ಅತ್ಯಂತ ಮುಖ್ಯವಾಗುತ್ತದೆ. ಏಕೆಂದರೆ ವಯಸ್ಸು ಹೆಚ್ಚಾಗುತ್ತಿದ್ದಂತೆ ಹಲವಾರು ರೀತಿಯ ಕಾಯಿಲೆಗಳು ಬರುವ ಅಪಾಯ ಕೂಡ ಹೆಚ್ಚಾಗಿಯೇ ಇರುತ್ತದೆ. ಹಾಗಾಗಿ ಹಿರಿಯರ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಎಂಬುದರ ಕುರಿತು ತಿಳಿದುಕೊಂಡಿರುವುದು ಬಹಳ ಮುಖ್ಯವಾಗುತ್ತದೆ. ವಯೋವೃದ್ಧರಲ್ಲಿ ಹೈ ಬಿಪಿ (Hypertension), ಶುಗರ್, ಎಲುಬಿನ ನೋವು ಮತ್ತು ನೆನಪಿನ ಶಕ್ತಿ ಕುಂದುವುದು ಮುಂತಾದ ಸಮಸ್ಯೆಗಳು ಸಾಮಾನ್ಯವಾಗಿರುತ್ತವೆ. ವೈದ್ಯರ ಪ್ರಕಾರ, ಕೆಲವು ಸರಿಯಾದ ಅಭ್ಯಾಸಗಳನ್ನು ಅನುಸರಿಸಿದರೆ ಹಿರಿಯರು ದೀರ್ಘಕಾಲ ಆರೋಗ್ಯಕರ ಜೀವನ ನಡೆಸಬಹುದು ಮತ್ತು ಹಲವು ಕಾಯಿಲೆಗಳಿಂದ ದೂರವಿರಬಹುದು. ಹಾಗಾದರೆ ಅವರ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು, ಎಷ್ಟು ದಿನಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು ಎಂಬುದರ ಬಗ್ಗೆ ತಿಳಿದುಕೊಂಡಿರಬೇಕಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಸರಿಯಾದ ಆಹಾರ ಅತ್ಯಾವಶ್ಯಕ:

ಡಾ. ಪ್ರಸೂನ್ ಅವರ ಪ್ರಕಾರ, ಹಿರಿಯರನ್ನು ಕಾಯಿಲೆಗಳಿಂದ ರಕ್ಷಿಸುವುದಷ್ಟೇ ಅಲ್ಲ, ಇದ್ದ ಕಾಯಿಲೆಗಳ ಸರಿಯಾದ ನಿರ್ವಹಣೆಯೂ ಮುಖ್ಯವಾಗುತ್ತದೆ. ಎಲ್ಲವೂ ಔಷಧಿಗಳಿಂದ ಮಾತ್ರ ಸರಿಯಾಗಬೇಕೆಂದಿಲ್ಲ. ಹಲವಾರು ಸಂದರ್ಭಗಳಲ್ಲಿ ಸರಿಯಾದ ಆಹಾರ ಪದ್ಧತಿ ಆರೋಗ್ಯದಲ್ಲಿ ಮಹತ್ವದ ಬದಲಾವಣೆ ತರುತ್ತದೆ. ಅದರಲ್ಲಿಯೂ ಹಿರಿಯರ ಆಹಾರದಲ್ಲಿ ಪ್ರೋಟೀನ್, ಫೈಬರ್ ಮತ್ತು ವಿಟಮಿನ್‌ಗಳು ಸಮರ್ಪಕವಾಗಿ ಇರಬೇಕು. ಹಸಿರು ತರಕಾರಿ, ಹಣ್ಣು ಮತ್ತು ಬೇಳೆಗಳನ್ನು ಆಹಾರದಲ್ಲಿ ಇರುವಂತೆ ನೋಡಿಕೊಳ್ಳಬೇಕು. ಬೆಳಗಿನ ಉಪಾಹಾರವನ್ನು ಸಮಯಕ್ಕೆ ಸರಿಯಾಗಿ ನೀಡಬೇಕು ಮತ್ತು ರಾತ್ರಿ ತಡವಾಗಿ ಊಟ ಕೊಡಬಾರದು.

ಇದನ್ನೂ ಓದಿ: ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ಹಿರಿಯರ ಜೊತೆ ಹೆಚ್ಚು ಸಮಯ ಕಳೆಯಿರಿ:

ಹಿರಿಯರ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಹಳ ಮುಖ್ಯ. ಆದ್ದರಿಂದ ಅವರೊಂದಿಗೆ ಸಮಯ ಕಳೆಯುವುದು ಅಗತ್ಯ. ಅವರ ಮಾತುಗಳನ್ನು ಕೇಳಿ, ನಿಮ್ಮ ಮಾತುಗಳನ್ನು ಅವರೊಂದಿಗೆ ಹಂಚಿಕೊಳ್ಳಿ. ಅವರಿಗೆ ಏಕಾಂಗಿ ಭಾವನೆ ಉಂಟಾಗದಂತೆ ನೋಡಿಕೊಳ್ಳಿ. ಏಕಾಂಗಿಯಾಗಿದ್ದೇನೆ ಎನಿಸುವುದು ಮಾನಸಿಕ ಒತ್ತಡ ಮತ್ತು ಡಿಪ್ರೆಶನ್ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ಕುಟುಂಬದ ಸದಸ್ಯರು ಅವರೊಂದಿಗೆ ಮಾತನಾಡಬೇಕು.

ನಿಯಮಿತ ಆರೋಗ್ಯ ತಪಾಸಣೆ ಅಗತ್ಯ:

ಹಿರಿಯರಲ್ಲಿ ಕಂಡುಬರುವ ಯಾವುದೇ ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷಿಸಬಾರದು. ಸಮಯಕ್ಕೆ ಸರಿಯಾಗಿ ವೈದ್ಯರ ಸಲಹೆ ಪಡೆಯಬೇಕು ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಇದರಿಂದ ಕಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯಬಹುದು. ಮನೆದಲ್ಲಿ ಹಿರಿಯರ ಸುರಕ್ಷತೆ ಅತ್ಯಂತ ಮುಖ್ಯ. ಸರಿಯಾದ ಆಹಾರ, ಪ್ರೀತಿ ಮತ್ತು ಕಾಳಜಿ, ಹಾಗೂ ಸುರಕ್ಷಿತ ಪರಿಸರದಿಂದ ಹಿರಿಯರ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ