Boost Immunity With These Superfoods
Image Credit source: Getty Images
ಇತ್ತೀಚಿನ ದಿನಗಳಲ್ಲಿ ಆರೋಗ್ಯವಾಗಿರುವುದೇ ಒಂದು ದೊಡ್ಡ ಸವಾಲಾಗಿದೆ. ಜೀವನಶೈಲಿಯಲ್ಲಿ ಮಾಡಿಕೊಂಡಿರುವ ಬದಲಾವಣೆ, ಕೆಲಸದ ಒತ್ತಡ, ಸರಿಯಾಗಿ ಆಹಾರ ಸೇವನೆ ಮಾಡದಿರುವುದು ಸೇರಿದಂತೆ ನಾನಾ ಕಾರಣಗಳು ಇದಕ್ಕೆ ಕಾರಣವಾಗಿರಬಹುದು. ಏನೇ ಆಗಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದೇ ರೀತಿ ದೊಡ್ಡ ದೊಡ್ಡ ಕಾಯಿಲೆಗಳಿಂದ ದೂರವಿರಬೇಕಾಗುತ್ತದೆ. ಆದರೆ ಇದಕ್ಕೆ ನಾನಾ ರೀತಿಯ ಔಷಧಿ, ಮಾತ್ರೆಗಳನ್ನು ಸೇವನೆ ಮಾಡುವ ಮೊದಲು ದೇಹದಲ್ಲಿನ ರೋಗನಿರೋಧಕ ವ್ಯವಸ್ಥೆಯನ್ನು (Immune System) ಬಲಪಡಿಸಿಕೊಳ್ಳಬೇಕು. ಏಕೆಂದರೆ ಪ್ರತಿಯೊಬ್ಬ ವ್ಯಕ್ತಿ ಆರೋಗ್ಯವಾಗಿರಲು ಇದು ಪ್ರಮುಖ ಅಡಿಪಾಯವಾಗಿರುತ್ತದೆ. ಈ ರೋಗನಿರೋಧಕ ಶಕ್ತಿ ಬಲವಾಗಿದ್ದಷ್ಟೂ ಆರೋಗ್ಯ ಸಮಸ್ಯೆಗಳು ದೂರ ಉಳಿಯುತ್ತವೆ. ಹಾಗಾದರೆ ಇದನ್ನು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
- ಬೆಟರ್ ಹೆಲ್ತ್ ಪ್ರಕಾರ, ರೋಗನಿರೋಧಕ ಶಕ್ತಿ ಬಿಳಿ ರಕ್ತ ಕಣಗಳು, ಪ್ರತಿಕಾಯಗಳು, ದುಗ್ಧರಸ ವ್ಯವಸ್ಥೆ, ಗುಲ್ಮ, ಮೂಳೆ ಮಜ್ಜೆ ಮತ್ತು ಥೈಮಸ್ ಗ್ರಂಥಿಯಂತಹ ಹಲವು ಪ್ರಮುಖ ಅಂಶಗಳನ್ನು ಒಳಗೊಂಡಿದೆ. ಅದಕ್ಕಾಗಿಯೇ ನಿಮ್ಮ ರೋಗನಿರೋಧಕ ಶಕ್ತಿಯನ್ನು ಆರೋಗ್ಯಕರವಾಗಿಟ್ಟುಕೊಳ್ಳುವುದು ಬಹಳ ಮುಖ್ಯವಾಗುತ್ತದೆ.
- ರೋಗನಿರೋಧಕ ಶಕ್ತಿ ದುರ್ಬಲಗೊಂಡರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸಬಹುದು. ಹಾಗಾಗಿ ಸೇವಿಸುವ ಆಹಾರವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ.
- ಅದಕ್ಕಾಗಿಯೇ ಆಹಾರದಲ್ಲಿ ಸಾಧ್ಯವಾದಷ್ಟು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳನ್ನು ಸೇರಿಸಿಕೊಳ್ಳುವುದು ಒಳ್ಳೆಯದು. ಹಣ್ಣುಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ತ್ವರಿತವಾಗಿ ಹೆಚ್ಚಿಸುವ ಏಕೈಕ ಆಹಾರಗಳಾಗಿವೆ. ಆದ್ದರಿಂದ, ಪೌಷ್ಟಿಕತಜ್ಞರು ವರ್ಷದ ಆಯಾ ಸಮಯಕ್ಕೆ ಅನುಗುಣವಾಗಿ ಎಲ್ಲಾ ಋತುಗಳಲ್ಲಿ ಲಭ್ಯವಿರುವ ಹಣ್ಣುಗಳನ್ನು ಸೇವಿಸಲು ಸಲಹೆ ನೀಡುತ್ತಾರೆ.
- ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಕೇವಲ ಹಣ್ಣುಗಳಷ್ಟೇ ಅಲ್ಲ. ಗ್ರೀನ್ ಟೀ ಕೂಡ ಮುಖ್ಯ. ಟೀ ಅಥವಾ ಕಾಫಿ ಕುಡಿಯುವ ಬದಲು ಗ್ರೀನ್ ಟೀಯನ್ನು ನಿಮ್ಮ ದೈನಂದಿನ ಜೀವನಶೈಲಿಯಲ್ಲಿ ಸೇರಿಸಿಕೊಂಡರೆ, ರೋಗಗಳು ದೂರವಾಗುತ್ತವೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ