AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕ್ಕೆ ಎರಡು ಬಾರಿ ಈ ತರಕಾರಿ ಸೇವನೆ ಮಾಡಿದ್ರೆ ಕ್ಯಾನ್ಸರ್ ಬರೋದಿಲ್ವಂತೆ!

ಕ್ಯಾರೆಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ಸಲಾಡ್‌ಗಳಿಂದ ಹಿಡಿದು ಜ್ಯೂಸ್‌ಗಳವರೆಗೆ ಹಲವು ವಿಧಗಳಲ್ಲಿ ಸೇವನೆ ಮಾಡಬಹುದಾಗಿದೆ. ಆದರೆ ನಿಮಗೆ ಗೊತ್ತಾ? ಕೇವಲ ಈ ಒಂದು ತರಕಾರಿಯನ್ನು ವಾರಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಯಬಹುದಾಗಿದೆ. ಹೌದು, ಈ ತರಕಾರಿಯಲ್ಲಿ ಅಷ್ಟು ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಹಾಗಾದರೆ ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳೇನು? ಯಾವ ರೀತಿಯ ಕ್ಯಾನ್ಸರ್ ತಡೆಯಲು ಸಹಕಾರಿ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಾರಕ್ಕೆ ಎರಡು ಬಾರಿ ಈ ತರಕಾರಿ ಸೇವನೆ ಮಾಡಿದ್ರೆ ಕ್ಯಾನ್ಸರ್ ಬರೋದಿಲ್ವಂತೆ!
carrots reduce cancer risk
ಪ್ರೀತಿ ಭಟ್​, ಗುಣವಂತೆ
|

Updated on: Dec 16, 2025 | 4:43 PM

Share

ಕ್ಯಾರೆಟ್ (Carrots) ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದ ವಿಚಾರ. ಆದರೆ ಆರೋಗ್ಯ (Health) ತಜ್ಞರು ವಾರಕ್ಕೆ ಎರಡು ಬಾರಿ ಕ್ಯಾರೆಟ್ ತಿನ್ನುವುದರಿಂದಲೂ ಗಂಭೀರ ಕಾಯಿಲೆಗಳಿಂದ ದೂರವಿರಲು ಸಹಾಯವಾಗುತ್ತದೆ ಎಂದು ಹೇಳುತ್ತಾರೆ. ಹೌದು, ಈ ತರಕಾರಿಯಲ್ಲಿ ಅಷ್ಟು ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಕ್ಯಾರೆಟ್ ಅನ್ನು ಸಲಾಡ್‌ಗಳಿಂದ ಹಿಡಿದು ಜ್ಯೂಸ್‌ಗಳವರೆಗೆ ಹಲವು ವಿಧಗಳಲ್ಲಿ ಸೇವನೆ ಮಾಡಬಹುದು. ಅದರಲ್ಲಿಯೂ ಈ ಚಳಿಗಾಲದಲ್ಲಿ ತಾಜಾ ತರಕಾರಿ, ಹಣ್ಣುಗಳ ಜೊತೆಗೆ ಕ್ಯಾರೆಟ್ ಕೂಡ ಮಾರುಕಟ್ಟೆಗೆ ಬರುವುದರಿಂದ ಯಾವುದೇ ರೀತಿಯ ತೊಂದರೆ ಇಲ್ಲದೆ ತಾಜಾ ಕ್ಯಾರೆಟ್ ಸೇವನೆ ಮಾಡಬಹುದಾಗಿದೆ. ಇದು ತಿನ್ನುವುದಕ್ಕೆ ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ಕೊಲೊರೆಕ್ಟಲ್ ಕ್ಯಾನ್ಸರ್ ತಡೆಯಲು ಸಹಕಾರಿ:

ತಾಜಾ ಕ್ಯಾರೆಟ್‌ಗಳನ್ನು ಕೆಲವರು ಹಸಿಯಾಗಿ ತಿಂದರೆ ಇನ್ನು ಕೆಲವರು ಇದರಿಂದ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಸೇವನೆ ಮಾಡುತ್ತಾರೆ. ವಿಶೇಷವೆಂದರೆ ನೀವು ಈ ಕ್ಯಾರೆಟ್‌ಗಳನ್ನು ಹೇಗೆ ಸೇವಿಸಿದರೂ ಅವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇತ್ತೀಚಿನ ಒಂದು ಅಧ್ಯಯನದ ಪ್ರಕಾರ, ವಾರಕ್ಕೆ 2 ರಿಂದ 4 ಹಸಿ ಕ್ಯಾರೆಟ್ ತಿನ್ನುವುದರಿಂದ ಕೊಲೊರೆಕ್ಟಲ್ ಕ್ಯಾನ್ಸರ್ ಅಪಾಯವನ್ನು ಸುಮಾರು 17 ಪ್ರತಿಶತದಷ್ಟು ಕಡಿಮೆ ಮಾಡಬಹುದಾಗಿದೆ. ಕೊಲೊರೆಕ್ಟಲ್ ಕ್ಯಾನ್ಸರ್ ಎಂದರೆ ದೊಡ್ಡ ಕರುಳು (ಕೊಲೊನ್) ಅಥವಾ ಗುದನಾಳದಲ್ಲಿ ಪ್ರಾರಂಭವಾಗುವ ಕ್ಯಾನ್ಸರ್ ಆಗಿದ್ದು, ಇದು ಸಾಮಾನ್ಯವಾಗಿ ಪಾಲಿಪ್ಸ್ ಎಂಬ ಬೆಳವಣಿಗೆಗಳಿಂದ ಉಂಟಾಗುತ್ತದೆ.

ಇದನ್ನೂ ಓದಿ: ಈ ತರಕಾರಿಗಳನ್ನು ಬೇಯಿಸುವುದು ಬೇಕಾಗಿಲ್ಲ ಹಸಿಯಾಗಿ ತಿನ್ನುವುದೇ ಪ್ರಯೋಜನಕಾರಿ

ಕ್ಯಾರೆಟ್‌ಗಳು ಕ್ಯಾರೊಟಿನಾಯ್ಡ್‌ಗಳು ಮತ್ತು ಲುಟೀನ್‌ನಂತಹ ಸಂಯುಕ್ತಗಳನ್ನು ಹೊಂದಿದ್ದು ವಾರಕ್ಕೆ ಕನಿಷ್ಠ ಎರಡು ಬಾರಿ ಅವುಗಳನ್ನು ಸೇವಿಸುವುದು ಒಳ್ಳೆಯದು. ಜೊತೆಗೆ ಕ್ಯಾರೆಟ್‌ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆಂಟಿ- ಇಂಫ್ಲಮೇಟರಿ ಗುಣಲಕ್ಷಣಗಳಿಂದ ರಕ್ತನಾಳಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಕೆ, ವಿಟಮಿನ್ ಬಿ6 ಮತ್ತು ಇತರ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಇದರಲ್ಲಿರುವ ಬೀಟಾ-ಕ್ಯಾರೋಟೀನ್‌ ರಾತ್ರಿ ಕುರುಡುತನ ಮತ್ತು ಕಣ್ಣಿನ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಆದರೆ ಕ್ಯಾರೆಟ್‌ನಿಂದ ತಯಾರಿಸಿದ ಸಿಹಿ ತಿಂಡಿಗಳು ಅಥವಾ ಇತರ ಆಹಾರಗಳನ್ನು ಸೇವಿಸುವುದಕ್ಕಿಂತ ಹಸಿ ಕ್ಯಾರೆಟ್ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಆದರೆ ಅತಿಯಾಗಿ ತಿಂದರೆ ಫೈಬರ್ ಅಂಶದಿಂದಾಗಿ ಹೆಚ್ಚಿನ ಜೀರ್ಣಕಾರಿ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಿ, ಆರೋಗ್ಯ ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?