AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತ್ರೆ ನುಂಗುವ ಬದಲು ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿ

ಪ್ರಕೃತಿಯಲ್ಲಿನ ಅನೇಕ ರೀತಿಯ ಸಸ್ಯಗಳು ನಮ್ಮ ಅನಾರೋಗ್ಯಕ್ಕೆ ಮದ್ದಾಗಿರುತ್ತದೆ. ಶತಮಾನಗಳಿಂದ, ಅದಕ್ಕಾಗಿಯೇ ಆಯುರ್ವೇದದಲ್ಲಿ ವಿವಿಧ ರೀತಿಯ ಸಸ್ಯಗಳನ್ನು ಔಷಧಿಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಇವೆಲ್ಲವೂ ನಮ್ಮ ದೈಹಿಕ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿರುವುದರಿಂದ ಇವುಗಳನ್ನು ನಮ್ಮ ಮನೆಯಲ್ಲಿಯೂ ಬೆಳೆಸಬಹುದು. ಹಾಗಾದರೆ ಮನೆಯಲ್ಲಿ ಯಾವ ರೀತಿಯ ಗಿಡಗಳನ್ನು ಬೆಳೆಸಬೇಕು? ಇವುಗಳಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಮಾತ್ರೆ ನುಂಗುವ ಬದಲು ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿ
ಔಷಧಿ ಗಿಡಗಳುImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 14, 2025 | 3:45 PM

Share

ನಮ್ಮ ಪ್ರಕೃತಿಯಲ್ಲಿ ಕಂಡುಬರುವಂತಹ ಅನೇಕ ರೀತಿಯ ಸಸ್ಯಗಳು (Plants) ಆಯುರ್ವೇದ ಔಷಧಿಗಳಾಗಿ ಕಾರ್ಯನಿರ್ವಹಿಸುತ್ತವೆ. ಇದೆ ರೀತಿ ಶತಮಾನಗಳಿಂದ, ವಿವಿಧ ರೀತಿಯ ಸಸ್ಯಗಳನ್ನು ಆಯುರ್ವೇದದಲ್ಲಿ ಬಳಸಲಾಗುತ್ತಿದೆ. ಇವು ನಮ್ಮ ದೈಹಿಕ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದ್ದು. ಇವುಗಳಲ್ಲಿ ಕೆಲವನ್ನು ನಾವು ಮನೆಯಲ್ಲಿಯೂ ಬೆಳೆಸಬಹುದು. ಈ ರೀತಿಯ ಔಷಧೀಯ ಸಸ್ಯಗಳು (Medicinal Plants) ಪ್ರತಿಯೊಬ್ಬರ ಮನೆಯಲ್ಲಿಯೂ ಇರಬೇಕಾಗುತ್ತದೆ. ಆರೋಗ್ಯಕ್ಕೆ (Health) ಪ್ರಯೋಜನಕಾರಿಯಾದಂತಹ ಗಿಡಗಳನ್ನು ಮನೆಯಲ್ಲಿ ಬೆಳೆಸಿ ಅವುಗಳ ಪ್ರಯೋಜನಗಳನ್ನು (benefits) ತಿಳಿಯುವುದರಿಂದ ಸಣ್ಣ ಪುಟ್ಟ ಸಮಸ್ಯೆಗಳು ಬಂದಾಗ ವೈದ್ಯರ ಬಳಿ ಓಡುವ ಅಥವಾ ಒಂದಿಷ್ಟು ಮಾತ್ರೆಗಳನ್ನು ನುಂಗುವ ಪ್ರಮೇಯ ಬರುವುದಿಲ್ಲ. ಹಾಗಾದರೆ ಮನೆಯಲ್ಲಿ ಯಾವ ರೀತಿಯ ಗಿಡಗಳನ್ನು ಬೆಳೆಸಬೇಕು? ಇವುಗಳಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಪುದೀನ:

ಈ ಎಲೆಯ ಪರಿಮಳವೇ ಮನಸ್ಸಿಗೆ ಒಂದು ರೀತಿಯ ಉಲ್ಲಾಸ ನೀಡುತ್ತದೆ. ಆಹಾರದ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸಲು ಈ ಎಲೆಗಳನ್ನು ಅಡುಗೆಯಲ್ಲಿ ಯಥೇಚ್ಛವಾಗಿ ಬಳಕೆ ಮಾಡಲಾಗುತ್ತದೆ. ಆದರೆ ಈ ಪುದೀನ ಎಲೆಗಳು ಕೇವಲ ಭಕ್ಷ್ಯಗಳ ರುಚಿ ಹೆಚ್ಚಿಸುವುದು ಮಾತ್ರವಲ್ಲ, ನಮ್ಮ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಅದಕ್ಕಾಗಿಯೇ ಪ್ರತಿನಿತ್ಯ ನಮ್ಮ ಆಹಾರದಲ್ಲಿ ಪುದೀನ ಎಲೆಗಳನ್ನು ಸೇರಿಸುವುದು ಬಹಳ ಅವಶ್ಯಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಇದನ್ನು ಚಹಾ, ಸಾಸ್ ಮತ್ತು ಸಿಹಿ ತಿಂಡಿಗಳಲ್ಲಿ ಬಳಸಲಾಗುತ್ತದೆ. ಅಲ್ಲದೆ ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. ಹೊಟ್ಟೆ ಉಬ್ಬರವನ್ನು ಕಡಿಮೆ ಮಾಡುತ್ತದೆ. ಇವುಗಳನ್ನು ಮನೆಯಲ್ಲಿ ಬೆಳೆಸಿ ಪ್ರತಿನಿತ್ಯ ಉಪಯೋಗ ಮಾಡುವುದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಬರುವುದಿಲ್ಲ. ಆರೋಗ್ಯವೂ ಚೆನ್ನಾಗಿರುತ್ತದೆ.

ತುಳಸಿ:

ಹಿಂದೂ ಧರ್ಮದಲ್ಲಿ, ತುಳಸಿಗೆ ವಿಶೇಷ ಮಹತ್ವವಿದೆ. ಬಹುತೇಕ ಪ್ರತಿಯೊಂದು ಮನೆಯಲ್ಲಿಯೂ ತುಳಸಿ ಗಿಡವಿರುತ್ತದೆ. ಏಕೆಂದರೆ ಈ ಗಿಡವನ್ನು ಲಕ್ಷ್ಮೀ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ, ಪ್ರತಿದಿನ ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಿ, ಪೂಜೆ ಮಾಡಿ, ಬೆಳಿಗ್ಗೆ ಮತ್ತು ಸಂಜೆ ದೀಪಗಳನ್ನು ಬೆಳಗಿಸಲಾಗುತ್ತದೆ. ಹೀಗೆ ಮಾಡುವುದರಿಂದ ಲಕ್ಷ್ಮೀ ದೇವಿಯ ಆಶೀರ್ವಾದ ಸಿಗುತ್ತದೆ ಎಂಬುದು ಹಲವರ ನಂಬಿಕೆ. ಆದರೆ ತುಳಸಿ ಗಿಡ ಧಾರ್ಮಿಕವಾಗಿ ಮಾತ್ರವಲ್ಲದೆ ನಮ್ಮ ದೇಹಕ್ಕೆ ಹಲವಾರು ರೀತಿಯಲ್ಲಿ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಅದಕ್ಕಾಗಿಯೇ ಇವುಗಳನ್ನು ಆಯುರ್ವೇದದಲ್ಲಿ ಯಥೇಚ್ಛವಾಗಿ ಬಳಕೆ ಮಾಡಲಾಗುತ್ತದೆ. ಇವುಗಳ ಸೇವನೆ ಮಾಡುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಪದೇ ಪದೇ ಬರುವ ಕೆಮ್ಮು, ಕಫ ಕಡಿಮೆಯಾಗುತ್ತದೆ ಜೊತೆಗೆ ಜೀರ್ಣಶಕ್ತಿ ಹೆಚ್ಚಾಗುತ್ತದೆ.

ಇದನ್ನೂ ಓದಿ
Image
ತಮಿಳುನಾಡಿನಲ್ಲಿದೆ ಸಕ್ಕರೆ ಕಾಯಿಲೆ ವಾಸಿಮಾಡುವ ದೇವಸ್ಥಾನ!
Image
Eggs in Summer: ಯಾವ ಕಾರಣಕ್ಕೂ ಬೇಸಿಗೆಯಲ್ಲಿ ಮೊಟ್ಟೆ ಸೇವಿಸಬೇಡಿ?
Image
ಬೀದಿ ಬದಿ ತಿಂಡಿ ತಿನ್ನುವ ಮುನ್ನ ಈ ಸ್ಟೋರಿಯನ್ನು ಒಮ್ಮೆ ನೋಡಿ!
Image
ಕೆಂಪು ಅಥವಾ ಹಸಿರು ಸೇಬು ಆರೋಗ್ಯಕ್ಕೆ ಯಾವುದು ಒಳ್ಳೆಯದು?

ಕರಿಬೇವು:

ಯಥೇಚ್ಛವಾಗಿ ಒಗ್ಗರಣೆ ಬಳಕೆ ಮಾಡುವ ಈ ಎಲೆಗಳನ್ನು ಸಾಮಾನ್ಯವಾಗಿ ಎಲ್ಲಾ ರೀತಿಯ ಅಡಿಗೆಯಲ್ಲಿಯೂ ಬಳಕೆ ಮಾಡಲಾಗುತ್ತದೆ. ಕರಿಬೇವಿನ ಎಲೆಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ, ರಂಜಕ, ಸತು, ಫೈಬರ್, ಜೊತೆಗೆ ವಿಟಮಿನ್ ಸಿ, ಬಿ ಮತ್ತು ಇ ಸಮೃದ್ಧವಾಗಿವೆ. ಇವುಗಳನ್ನು ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹಲವಾರು ರೀತಿಯ ಪ್ರಯೋಜನಗಳಿವೆ. ಇದು ಮಧುಮೇಹಿಗಳಿಗೆ ಸೂಕ್ತವಾದ ಆಹಾರವಾಗಿದೆ. ಇದು ನರ ಸಂಬಂಧಿತ ಕಾಯಿಲೆಗಳು ಮತ್ತು ಕ್ಯಾನ್ಸರ್ ಗಳನ್ನು ತಡೆಗಟ್ಟುತ್ತದೆ ಎಂದು ಹೇಳಲಾಗುತ್ತದೆ. ಇದರಲ್ಲಿ ಸಾಕಷ್ಟು ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿವೆ. ಹಾಗಾಗಿ ಈ ಗಿಡವನ್ನು ಪ್ರತಿಯೊಬ್ಬರೂ ಕೂಡ ತಮ್ಮ ತಮ್ಮ ಮನೆಗಳಲ್ಲಿ ಬೆಳೆಸಬೇಕು.

ನಿಂಬೆ ಹುಲ್ಲು:

ಈ ಪರಿಮಳಯುಕ್ತ ನಿಂಬೆ ಹುಲ್ಲಿನ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವುದಿಲ್ಲ. ಇವುಗಳನ್ನು ಚಹಾ, ಸೂಪ್ ಗಳಲ್ಲಿ ಬಳಸಲಾಗುತ್ತದೆ. ಅದಲ್ಲದೆ ಇವುಗಳಲ್ಲಿ ಔಷಧೀಯ ಗುಣಗಳಿರುವುದರಿಂದ ಇದನ್ನು ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಅದಲ್ಲದೆ ಇದು ಬ್ಯಾಕ್ಟೀರಿಯಾ ವಿರೋಧಿ ಮತ್ತು ಶಿಲೀಂಧ್ರನಾಶಕ ಪರಿಣಾಮಗಳನ್ನು ಹೊಂದಿರುವುದರಿಂದ ಇವುಗಳ ಸೇವನೆಯಿಂದ ಸೋಂಕು ಮತ್ತು ಬ್ಯಾಕ್ಟೀರಿಯಾಗಳಿಂದ ನಮ್ಮನ್ನು ರಕ್ಷಿಸುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗ ಮತ್ತು ಕಾಯಿಲೆಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಒದಗಿಸುತ್ತವೆ.

ಇದನ್ನೂ ಓದಿ: ಈ ದೇವಸ್ಥಾನದಲ್ಲಿ ಸಕ್ಕರೆ ಕಾಯಿಲೆ 5 ನಿಮಿಷದಲ್ಲಿ ವಾಸಿಯಾಗುತ್ತೆ! ಕಣ್ಣ ಮುಂದೆ ನಡೆಯುತ್ತೆ ಪವಾಡ

ಅಮೃತ ಬಳ್ಳಿ:

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾದ ಅಮೃತ ಬಳ್ಳಿ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ಇವುಗಳನ್ನು ಔಷಧಿಗಳ ತಯಾರಿಕೆಯಲ್ಲಿಯೂ ಬಳಸಲಾಗುತ್ತದೆ. ಪ್ರತಿದಿನ ಎರಡು ಅಮೃತ ಬಳ್ಳಿ ಎಲೆಗಳನ್ನು ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ವಿವಿಧ ರೋಗಗಳು ಬರುವುದನ್ನು ತಡೆಯುತ್ತದೆ. ಮಧುಮೇಹ ಸಮಸ್ಯೆಗಳಿರುವವರು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಈ ಎಲೆ ಅಥವಾ ಇದರಿಂದ ಮಾಡಿದ ಪುಡಿಯನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಈ ರೀತಿ ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಿಕೊಳ್ಳಲು ಮನೆಯಲ್ಲಿ ಈ ಗಿಡಗಳನ್ನು ಬೆಳೆಸಿಕೊಳ್ಳಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ