Train Journey: ರೈಲಿನಲ್ಲಿ ಪ್ರಯಾಣ ಮಾಡುವಾಗ ಈ ಆಹಾರಗಳನ್ನು ಕೊಂಡೊಯ್ಯಲು ಮರೆಯಬೇಡಿ

 ದೀರ್ಘ ಪ್ರಯಾಣ ಮಾಡುವುದು ಸುಲಭವಲ್ಲ. ಏಕೆಂದರೆ ಅಷ್ಟು ದಿನಗಳ ಕಾಲ ನಮ್ಮ ಆಹಾರದಿಂದ ಹಿಡಿದು, ಕುಡಿಯುವ ನೀರಿನ ವರೆಗೆ ಎಲ್ಲವನ್ನೂ ಹೊರಗಿನಿಂದ ತೆಗೆದುಕೊಳ್ಳಬೇಕಾಗುತ್ತದೆ. ಇದು ನಮ್ಮ ಆರೋಗ್ಯದ ಮೇಲೆ ನಾನಾ ರೀತಿಯ ಪರಿಣಾಮಗಳನ್ನು ಬೀರಬಹುದು. ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಪ್ರಯಾಣ ಆರಂಭಿಸುವ ಮೊದಲು ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ನಿಮ್ಮ ಪ್ರವಾಸವು ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುವುದರ ಜೊತೆಗೆ ಆಹ್ಲಾದಕರವಾಗಿರುತ್ತದೆ. ಹಾಗಾದರೆ ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬೇಕು? ಇಲ್ಲಿದೆ ಮಾಹಿತಿ.

Train Journey: ರೈಲಿನಲ್ಲಿ ಪ್ರಯಾಣ ಮಾಡುವಾಗ ಈ ಆಹಾರಗಳನ್ನು ಕೊಂಡೊಯ್ಯಲು ಮರೆಯಬೇಡಿ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 19, 2024 | 3:34 PM

ಕೆಲವರಿಗೆ ಪ್ರವಾಸ ಎಂದರೆ ಬಲು ಪ್ರೀತಿ. ಹಾಗಾಗಿ ಎಷ್ಟು ದೂರದ ಪ್ರಯಾಣವಿರಲಿ ಅದನ್ನು ಆನಂದಿಸುತ್ತಾರೆ. ಆದರೆ ದೀರ್ಘ ಪ್ರಯಾಣ ಮಾಡುವುದು ಸುಲಭವಲ್ಲ. ಏಕೆಂದರೆ ಅಷ್ಟು ದಿನಗಳ ಕಾಲ ನಮ್ಮ ಆಹಾರದಿಂದ ಹಿಡಿದು, ಕುಡಿಯುವ ನೀರಿನ ವರೆಗೆ ಎಲ್ಲವನ್ನೂ ಹೊರಗಿನಿಂದ ತೆಗೆದುಕೊಳ್ಳಬೇಕಾಗುತ್ತದೆ. ಇದು ನಮ್ಮ ಆರೋಗ್ಯದ ಮೇಲೆ ನಾನಾ ರೀತಿಯ ಪರಿಣಾಮಗಳನ್ನು ಬೀರಬಹುದು. ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಪ್ರಯಾಣ ಆರಂಭಿಸುವ ಮೊದಲು ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ನಿಮ್ಮ ಪ್ರವಾಸವು ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುವುದರ ಜೊತೆಗೆ ಆಹ್ಲಾದಕರವಾಗಿರುತ್ತದೆ. ಹಾಗಾದರೆ ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬೇಕು? ಇಲ್ಲಿದೆ ಮಾಹಿತಿ.

ದೀರ್ಘಕಾಲ ಸಂಗ್ರಹಿಸಬಹುದಾದ ಆಹಾರ;

ಪ್ರಯಾಣದ ಮೊದಲು ದೀರ್ಘಕಾಲ ಸಂಗ್ರಹಿಸಬಹುದಾದ ಆಹಾರವನ್ನು ಪ್ಯಾಕ್ ಮಾಡಿಕೊಳ್ಳಿ. ನೀವು ರೈಲಿನಲ್ಲಿ ಅಥವಾ ವಿಮಾನದಲ್ಲಿ ಹೋಗುವಾಗ ನಿಮಗೆ ಬೇಕಾದ ಆಹಾರವನ್ನು ನಿಮ್ಮೊಂದಿಗೆ ಕೊಂಡೊಯ್ಯಬಹುದು. ಹಸಿವಾದಾಗ ಅದನ್ನು ತಿನ್ನಬಹುದು. ಇವುಗಳಲ್ಲಿ ಚಪಾತಿ ಮತ್ತು ಜೋಳದ ರೊಟ್ಟಿ ತುಂಬಾ ಒಳ್ಳೆಯ ಆಯ್ಕೆ. ಇವೆರಡನ್ನೂ 2- 3 ದಿನಗಳ ವರೆಗೆ ಹಾಳಾಗದಂತೆ ಇಟ್ಟುಕೊಳ್ಳಬಹುದು. ಇನ್ನು ಜೋಳದ ಖಡಕ್ ರೊಟ್ಟಿ ಒಂದು ವಾರದ ವರೆಗೆ ಸೇವನೆ ಮಾಡಬಹುದು. ಹಾಗಾಗಿ ಇದು ಬೇಗ ಹಾಳಾಗುತ್ತದೆ ಎಂದು ಭಯಪಡುವ ಅಗತ್ಯವಿಲ್ಲ. ಸಾಮಾನ್ಯವಾಗಿ ಪಲ್ಯ ಅಥವಾ ಚಟ್ನಿಯನ್ನು ತೆಗೆದುಕೊಂಡು ಹೋದರೆ ಅದು ನಿಮ್ಮ ದೀರ್ಘ ಪ್ರಯಾಣದಲ್ಲಿ ಹೆಚ್ಚು ಸಮಯ ಬರಲಾರದು. ಹಾಗಾಗಿ ನೀರು ಹಾಕದೆಯೇ ಚಟ್ನಿ ಅಥವಾ ಉಪ್ಪಿನಕಾಯಿಯನ್ನು ಮಾಡಿ ಅದನ್ನು ಒಯ್ಯಬಹುದು.

ಉಪಹಾರದ ಜೊತೆಗೆ ಇತರೆ ತಿಂಡಿಗಳನ್ನು ಸಹ ತೆಗೆದುಕೊಂಡು ಹೋಗಬಹುದು. ಮನೆಯಲ್ಲಿ ಕರಿದ ತಿಂಡಿಗಳನ್ನು ಪ್ರಯಾಣದ ಸಮಯದಲ್ಲಿ ಸೇವನೆ ಮಾಡಬಹುದು. ಆದರೆ ಅತಿಯಾಗಿ ತಿನ್ನಬಾರದು. ಪ್ರಯಾಣದ ಸಮಯದಲ್ಲಿ ಒಳ್ಳೆಯದಲ್ಲ. ಆದ್ದರಿಂದ ಆರೋಗ್ಯಕರ ಮತ್ತು ರುಚಿಕರವಾದ ಆಹಾರವನ್ನು ಆಯ್ಕೆ ಮಾಡುವುದರ ಜೊತೆಗೆ ಅದನ್ನು ಮಿತವಾಗಿ ತಿನ್ನಬೇಕು ಎನ್ನುವುದನ್ನು ಮರೆಯದಿರಿ. ಕರಿದ ಆಹಾರಗಳನ್ನು ಇಷ್ಟ ಪಡುವವರು ಆಲೂಗಡ್ಡೆ ಬದಲು ಬಾಳೆಕಾಯಿ ಚಿಪ್ಸ್ ಅನ್ನು ತೆಗೆದುಕೊಂಡು ಹೋಗಬಹುದು. ಏಕೆಂದರೆ ಇವು ಹೆಚ್ಚು ಕಾಲ ತಾಜಾವಾಗಿರುತ್ತವೆ. ಆದರೆ ಇದನ್ನು ನೀವು ಮನೆಯಲ್ಲಿಯೇ ತಯಾರಿಸಿ ತೆಗೆದುಕೊಂಡು ಹೋಗುವುದು ಒಳ್ಳೆಯದು.

ಇದನ್ನೂ ಓದಿ: ಪುರುಷರ ವೀರ್ಯದ ಗುಣಮಟ್ಟ ಹೆಚ್ಚಿಸುತ್ತೆ ಈ ಆಹಾರಗಳು

ಡ್ರೈ ಫ್ರೂಟ್ಸ್ ಸೇವನೆ ಮಾಡಿ

ಮಖಾನಾ, ವಾಲ್ನಟ್, ಬಾದಾಮಿ, ದ್ರಾಕ್ಷಿ, ಗೋಡಂಬಿಯಂತಹ ವಿವಿಧ ಬಗೆಯ ಒಣ ಹಣ್ಣುಗಳನ್ನು ಮತ್ತು ಸೀಡ್ಸ್ ಗಳನ್ನು ತುಪ್ಪದಲ್ಲಿ ಲಘುವಾಗಿ ಹುರಿದು ಸ್ವಲ್ಪ ಉಪ್ಪು ಮತ್ತು ಮೆಣಸು ಸೇರಿಸಿದರೆ ತಿನ್ನುವುದಕ್ಕೆ ತುಂಬಾ ರುಚಿಕರವಾಗಿರುತ್ತದೆ ಅಥವಾ ನೀವು ಇವುಗಳನ್ನು ಹಾಗೆಯೇ ಸೇವನೆ ಮಾಡಬಹುದು. ಇವು ಆರೋಗ್ಯಕರ ಆಹಾರವಾಗಿದ್ದು, ಹೊರಗಡೆ ಬೇಡದ ಆಹಾರಗಳನ್ನು ಸೇವನೆ ಮಾಡುವುದರ ಬದಲು ಈ ರೀತಿ ಡ್ರೈ ಫ್ರೂಟ್ಸ್ ಸೇವನೆ ಮಾಡುವುದರ ಮೂಲಕ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಒಳ್ಳೆಯದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ