Travelling Tips: ಪ್ರಯಾಣದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಯನ್ನು ಅನುಸರಿಸಿ

ಪ್ರಯಾಣ ಮಾಡಲು ಇಷ್ಟವಿದ್ದರೂ ಮುಂದೆ ಬರುವ ಆರೋಗ್ಯ ಸಮಸ್ಯೆಗಳನ್ನು ನೆನೆದು ಬೇಸರವಾಗಿ, ಪ್ರವಾಸಕ್ಕೆ ಹೋಗುವುದನ್ನೇ ಕಡಿಮೆ ಮಾಡುತ್ತೇವೆ. ಆದರೆ ಈ ರೀತಿ ಸಮಸ್ಯೆಗಳನ್ನು ತಪ್ಪಿಸಲು ಕೆಲವು ಸಲಹೆಗಳನ್ನು ಅನುಸರಿಸುವುದು ಅವಶ್ಯಕ. ಇದರಿಂದ ಆರೋಗ್ಯ ಹದಗೆಡುವುದನ್ನು ತಪ್ಪಿಸಬಹುದು. ಹಾಗಾದರೆ ಏನು ಮಾಡಬೇಕು? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Travelling Tips: ಪ್ರಯಾಣದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಯನ್ನು ಅನುಸರಿಸಿ
Maintain Health After Travelling
Edited By:

Updated on: Jan 12, 2025 | 8:52 AM

ಸಾಮಾನ್ಯವಾಗಿ ಕೆಲವರಿಗೆ ದೀರ್ಘಕಾಲದ ಪ್ರಯಾಣ ಮಾಡಿ ಬಂದ ನಂತರದಲ್ಲಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅದರಲ್ಲಿ ಹೆಚ್ಚಿನವರಿಗೆ ಜೀರ್ಣಕಾರಿ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಪ್ರಯಾಣ ಮಾಡುವಾಗ ನೀವು ಒಂದೇ ಸ್ಥಳದಲ್ಲಿ ದೀರ್ಘಕಾಲ ಕುಳಿತುಕೊಳ್ಳಬೇಕು. ಇದು ಹೊಟ್ಟೆಯ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಈ ಕಾರಣದಿಂದಾಗಿ, ಹೊಟ್ಟೆಯುಬ್ಬರ, ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳು ಕಂಡುಬರಲು ಆರಂಭವಾಗುತ್ತದೆ. ಪ್ರಯಾಣ ಮಾಡಲು ಇಷ್ಟವಿದ್ದರೂ ಮುಂದೆ ಬರುವ ಆರೋಗ್ಯ ಸಮಸ್ಯೆಗಳನ್ನು ನೆನೆದು ಬೇಸರವಾಗಿ, ಪ್ರವಾಸಕ್ಕೆ ಹೋಗುವುದನ್ನೇ ಕಡಿಮೆ ಮಾಡುತ್ತೇವೆ. ಆದರೆ ಈ ರೀತಿ ಸಮಸ್ಯೆಗಳನ್ನು ತಪ್ಪಿಸಲು ಕೆಲವು ಸಲಹೆಗಳನ್ನು ಅನುಸರಿಸುವುದು ಅವಶ್ಯಕ. ಇದರಿಂದ ಆರೋಗ್ಯ ಹದಗೆಡುವುದನ್ನು ತಪ್ಪಿಸಬಹುದು. ಹಾಗಾದರೆ ಏನು ಮಾಡಬೇಕು? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪ್ರಯಾಣ ಮಾಡುವಾಗ ತಿನ್ನುವ ಮತ್ತು ಕುಡಿಯುವ ಅಭ್ಯಾಸ ಸರಿಯಾಗಿ ಇಲ್ಲದಿದ್ದರೆ, ಅದು ಕರುಳಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಕೆಲವು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಲಘು ಆಹಾರವನ್ನು ಮಾತ್ರ ಸೇವಿಸಿ:

ಪ್ರಯಾಣ ಮಾಡುವಾಗ ಮಸಾಲೆಯಿಂದ ಕೂಡಿರುವ ಆಹಾರ ಅಥವಾ ಇನ್ನಿತರ ಕರಿದ ಪದಾರ್ಥಗಳ ಸೇವನೆ ಮಾಡುತ್ತೇವೆ. ಇದು ಹೊಟ್ಟೆ ಭಾರವಾಗುವಂತೆ ಮಾಡುತ್ತದೆ. ಅದಲ್ಲದೆ ಪ್ರಯಾಣದ ಸಂದರ್ಭಗಳಲ್ಲಿ ನಿರಂತರವಾಗಿ ಕುಳಿತುಕೊಂಡಿರುವುದರಿಂದ ಆಹಾರ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರಯಾಣದ ನಂತರವೂ ಲಘು ಆಹಾರವನ್ನು ಸೇವಿಸಿ. ಇದು ಕರುಳಿನ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ.

ಸಾಕಷ್ಟು ನೀರು ಕುಡಿಯಿರಿ:

ಕರುಳಿನ ಆರೋಗ್ಯವನ್ನು ಉತ್ತಮವಾಗಿಡಲು, ಸಾಧ್ಯವಾದಷ್ಟು ನೀರು ಕುಡಿಯಲು ಪ್ರಯತ್ನಿಸಿ. ಸಾಮಾನ್ಯವಾಗಿ ಪ್ರಯಾಣದ ಸಮಯದಲ್ಲಿ ಜನರು ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುತ್ತಾರೆ. ಇದು ಹೊಟ್ಟೆಯುಬ್ಬರ ಮತ್ತು ಆಮ್ಲೀಯತೆಗೆ ಕಾರಣವಾಗುತ್ತದೆ. ಹಾಗಾಗಿ ನೀರಿನ ಜೊತೆಗೆ ದ್ರವ ರೂಪದ ಆಹಾರವನ್ನು ಸೇವನೆ ಮಾಡಿ.

ಇದನ್ನೂ ಓದಿ: ಪಪ್ಪಾಯಿ, ಬಾಳೆಹಣ್ಣನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

ನಡಿಗೆ ಅತ್ಯಗತ್ಯ:

ಪ್ರವಾಸದಿಂದ ಹಿಂದಿರುಗಿದ ನಂತರ ನಿಮ್ಮ ದೈನಂದಿನ ದಿನಚರಿಯಲ್ಲಿ ವ್ಯಾಯಾಮ ಅಥವಾ ನಡಿಗೆಯನ್ನು ಸೇರಿಸಿಕೊಳ್ಳಿ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಹಾಗಾಗಿ ಊಟವಾದ ನಂತರ ಸ್ವಲ್ಪ ನಡೆಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳು ಕೂಡ ಬರುವುದಿಲ್ಲ. ದಿನನಿತ್ಯ ನೀವು 15 ರಿಂದ 20 ನಿಮಿಷಗಳ ಕಾಲ ನಡೆಯುವುದು ದೇಹಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us