AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ವೇಗದಲ್ಲಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಾ? ಈ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ!

ಅತಿ ವೇಗದಲ್ಲಿ ದೇಹದ ತೂಕ ಇಳಿಸಿಕೊಳ್ಳಲು ಮುಂದಾದಾಗ ಕೆಲವು ಆರೋಗ್ಯ ತೊಂದರೆಗಳೂ ಸಹ ಎದುರಾಗಬಹುದು. ಹಾಗಾಗಿ ಒಂದೇ ಬಾರಿಗೆ ತೂಕ ಇಳಿಸಿಕೊಳ್ಳಬೇಕು ಎನ್ನುವ ಆತುರದಲ್ಲಿ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ತಂದುಕೊಳ್ಳಬೇಡಿ.

ಅತಿ ವೇಗದಲ್ಲಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಾ? ಈ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ!
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on: Oct 06, 2021 | 9:03 AM

Share

ತೂಕ ಕಡಿಮೆ ಮಾಡಿಕೊಳ್ಳುವಲ್ಲಿ ಜನರು ಹೆಚ್ಚಿನ ಗಮನವಹಿಸುತ್ತಾರೆ. ದೇಹದಲ್ಲಿನ ಹೆಚ್ಚಿನ ಕ್ಯಾಲೋರಿ ಕರಗಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಆದರೆ ಅತಿ ವೇಗದಲ್ಲಿ ದೇಹದ ತೂಕ ಇಳಿಸಿಕೊಳ್ಳಲು ಮುಂದಾದಾಗ ಕೆಲವು ಆರೋಗ್ಯ ತೊಂದರೆಗಳೂ ಸಹ ಎದುರಾಗಬಹುದು. ಹಾಗಾಗಿ ಒಂದೇ ಬಾರಿಗೆ ತೂಕ ಇಳಿಸಿಕೊಳ್ಳಬೇಕು ಎನ್ನುವ ಆತುರದಲ್ಲಿ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ತಂದುಕೊಳ್ಳಬೇಡಿ. ಇದು ಚಯಾಪಚಯಕ್ಕೆ ಒಳ್ಳೆಯದಲ್ಲ. ಜತೆಗೆ ಪೌಷ್ಟಿಕಾಂಶದ ಕೊರತೆಯನ್ನು ಉಂಟು ಮಾಡುತ್ತದೆ. ವೇಗದಲ್ಲಿ ತೂಕ ಇಳಿಸಿಕೊಳ್ಳುವ ಪ್ರಕ್ರಿಯೆ ತಕ್ಷಣದಲ್ಲಿ ಪರಿಣಾಮ ಕಂಡರೂ ಸಹ ಭವಿಷ್ಯದಲ್ಲಿ ಅದು ಆರೋಗ್ಯ ತೊಂದರೆಗಳನ್ನು ಉಂಟು ಮಾಡುತ್ತದೆ.

ಹಸಿವು ಹೆಚ್ಚಾಗುತ್ತದೆ ಕಡಿಮೆ ಸಮಯದಲ್ಲಿ ತೂಕ ಇಳಿಸಿಕೊಳ್ಳಲು ಬಯಸಿದಾಗ ಕೆಲವು ಬಾರಿ ನೀವು ಅಗತ್ಯಕ್ಕಿಂತ ಹೆಚ್ಚಿನದನ್ನು ಸೇವಿಸುತ್ತೀರಿ. ಏಕೆಂದರೆ ಹಸಿವಾಗುವುದರಿಂದ ಹೊಟ್ಟೆ ತುಂಬಿಸಿಕೊಳ್ಳಲು ಆಹಾರ ಸೇವಿಸುತ್ತೀರಿ. ಆಗ ದೀರ್ಘ ಅವಧಿಯ ಆರೋಗ್ಯ ತೊಂದರೆಗಳನ್ನು ನೀವು ಎದುರಿಸಬಹುದಾದ ಸಾಧ್ಯತೆಗಳು ಹೆಚ್ಚಿರುತ್ತದೆ.

ಪೌಷ್ಠಿಕಾಂಶದ ಕೊರತೆ ನೀವು ತೂಕವನ್ನು ಇಳಿಸಿಕೊಳ್ಳುವ ದೃಷ್ಟಿಯಿಂದ ಒಂದೇ ಬಾರಿಗೆ ಆಹಾರ ಸೇವನೆಯನ್ನು ಕಡಿಮೆ ಮಾಡುತ್ತೀರಿ, ಇಲ್ಲವೇ ಕೆಲವರಂತೂ ಒಂದು ಹೊತ್ತಿನ ಆಹಾರವನ್ನೇ ತ್ಯಜಿಸುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಅಗತ್ಯವಿರುವ ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳು ದೇಹಕ್ಕೆ ಸಿಗುವುದಿಲ್ಲ. ಇದರಿಂದ ಪೋಷಕಾಂಶದ ಕೊರತೆ, ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು ಮತ್ತು ತೀವ್ರವಾದ ಆಯಾಸದಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಮನಸ್ಥಿತಿ ಹದಗೆಡುವುದು ಕೆಲವು ಬಾರಿ ಸಮಸ್ಯೆಗಳು ನಿಮ್ಮನ್ನು ಒತ್ತಡಕ್ಕೆ ಸಿಲುಕಿಸಬಹುದು. ಇದರಿಂದ ಮನಸ್ಥಿತಿ ಬದಲಾವಣೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಇದರಿಂದ ನಿಮ್ಮ ಆಲೋಚನೆಗಳು ಸಂಪೂರ್ಣವಾಗಿ ಬದಲಾಗುತ್ತವೆ. ಮನಸ್ಥಿತಿ ಹದಗೆಡಲು ಕಾರಣವಾಗುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಇದನ್ನೂ ಓದಿ:

Health Tips: ಈ 5 ರೋಗ ಲಕ್ಷಣಗಳು ಶ್ವಾಸಕೋಶ ಕಾಯಿಲೆಯ ಎಚ್ಚರದ ಗಂಟೆ, ಎಂದಿಗೂ ನಿರ್ಲಕ್ಷಿಸಬೇಡಿ

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?