Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಸಿರಾಟದ ತೊಂದರೆಯಿಂದ ಬೊಜ್ಜಿನ ಸಮಸ್ಯೆಯವರೆಗೆ; ತುಳಸಿಯಲ್ಲಿದೆ ಹಲವು ಪರಿಹಾರ

ತುಳಸಿಯು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ತುಳಸಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಅಜೀರ್ಣ, ಗ್ಯಾಸ್ಟ್ರಿಕ್ ಮುಂತಾದ ಸಮಸ್ಯೆ ನಿವಾರಿಸಲು ಸಹಾಯ ಮಾಡುತ್ತದೆ.

ಉಸಿರಾಟದ ತೊಂದರೆಯಿಂದ ಬೊಜ್ಜಿನ ಸಮಸ್ಯೆಯವರೆಗೆ; ತುಳಸಿಯಲ್ಲಿದೆ ಹಲವು ಪರಿಹಾರ
ತುಳಸಿ
Follow us
ಸುಷ್ಮಾ ಚಕ್ರೆ
|

Updated on: Dec 26, 2023 | 3:55 PM

ತುಳಸಿಯನ್ನು ಹಲವು ಶತಮಾನಗಳಿಂದ ಮನೆಮದ್ದಾಗಿ ಉಪಯೋಗಿಸಲಾಗುತ್ತಿದೆ. ಕೆಮ್ಮುಗಳನ್ನು ನಿವಾರಿಸುವುದರಿಂದ ಹಿಡಿದು ನರಗಳನ್ನು ಶಾಂತಗೊಳಿಸುವವರೆಗೆ ತುಳಸಿಯ ಪ್ರಯೋಜನಗಳು ಅಡುಗೆಮನೆಯ ಆಚೆಗೂ ವಿಸ್ತರಿಸುತ್ತವೆ. ದಿನನಿತ್ಯ ತುಳಸಿ ಎಲೆಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಪ್ರಯೋಜನಗಳಿವೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಉರಿಯೂತ ನಿವಾರಕ:

ದೀರ್ಘಕಾಲದ ಉರಿಯೂತವು ಸಂಧಿವಾತ ಮತ್ತು ಸ್ವಯಂ ನಿರೋಧಕ ಕಾಯಿಲೆಗಳು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ತುಳಸಿಯ ಉರಿಯೂತದ ಗುಣಲಕ್ಷಣಗಳು ಉರಿಯೂತವನ್ನು ತಗ್ಗಿಸಲು ಸಹಾಯ ಮಾಡುತ್ತದೆ. ಈ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ತುಳಸಿ ಪರಿಹಾರವನ್ನು ನೀಡುತ್ತದೆ. ತುಳಸಿಯನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಕೀಲು ಮತ್ತು ಅಂಗಾಂಶಗಳ ಆರೋಗ್ಯವನ್ನು ಕೂಡ ಹೆಚ್ಚಿಸಬಹುದು.

ಕೊಲೆಸ್ಟ್ರಾಲ್ ನಿರ್ವಹಣೆ:

ತುಳಸಿಯು ಕೊಲೆಸ್ಟ್ರಾಲ್ ಮಟ್ಟವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ. ತುಳಸಿಯ ನಿಯಮಿತ ಸೇವನೆಯು ಒಟ್ಟು ಕೊಲೆಸ್ಟ್ರಾಲ್ ಮತ್ತು ಎಲ್‌ಡಿಎಲ್ (ಕಡಿಮೆ-ಸಾಂದ್ರತೆಯ ಲಿಪೊಪ್ರೋಟೀನ್) ಕೊಲೆಸ್ಟ್ರಾಲ್ ಎರಡರಲ್ಲೂ ಇಳಿಕೆಗೆ ಕಾರಣವಾಗುತ್ತದೆ ಎಂದು ಅಧ್ಯಯನಗಳು ಸೂಚಿಸಿವೆ. ತುಳಸಿ ಹೃದಯರಕ್ತನಾಳದ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ಹೃದಯ ಸಂಬಂಧಿ ತೊಡಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: ವಾಯು ಮಾಲಿನ್ಯದಿಂದ ಕ್ಯಾನ್ಸರ್, ಹೃದಯಾಘಾತ ಹೆಚ್ಚಳ; ಏನಿದು ಶಾಕಿಂಗ್ ವಿಷಯ?

ಒತ್ತಡ ಕಡಿತ ಮತ್ತು ಮಾನಸಿಕ ಯೋಗಕ್ಷೇಮ:

ತುಳಸಿಯಿಂದ ಆಗುವ ದೈಹಿಕ ಆರೋಗ್ಯ ಪ್ರಯೋಜನಗಳ ಹೊರತಾಗಿ ತುಳಸಿ ಮಾನಸಿಕ ಯೋಗಕ್ಷೇಮದ ಮೇಲೆ ಕೂಡ ಪಾಸಿಟಿವ್ ಪರಿಣಾಮ ಬೀರುತ್ತದೆ. ಇದು ಅಡಾಪ್ಟೋಜೆನಿಕ್ ಮತ್ತು ಆ್ಯಂಟಿಆಂಗ್ಲಜಿ ಗುಣಲಕ್ಷಣಗಳನ್ನು ಹೊಂದಿದೆ. ತುಳಸಿಯನ್ನು ನಿಮ್ಮ ದಿನಚರಿಯಲ್ಲಿ ಸೇರಿಸುವುದರಿಂದ ಒತ್ತಡವನ್ನು ನಿರ್ವಹಿಸಲು ಮತ್ತು ಮಾನಸಿಕ ಆರೋಗ್ಯ ಕಾಪಾಡಲು ಸಹಾಯಕವಾಗಿದೆ.

ಉಸಿರಾಟದ ಆರೋಗ್ಯವನ್ನು ಹೆಚ್ಚಿಸುತ್ತದೆ:

ತುಳಸಿಯನ್ನು ಸಾಂಪ್ರದಾಯಿಕವಾಗಿ ಉಸಿರಾಟದ ಸಮಸ್ಯೆಗಳನ್ನು ನಿವಾರಿಸಲು ಬಳಸಲಾಗುತ್ತದೆ. ಇದರ ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಕೆಮ್ಮು, ಶೀತ ಮತ್ತು ಬ್ರಾಂಕೈಟಿಸ್‌ನಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಪರಿಣಾಮಕಾರಿಯಾಗಿದೆ.

ಇದನ್ನೂ ಓದಿ: ನಿಮ್ಮ ವೇಗದ ಜೀವನಶೈಲಿಯಿಂದ ಹೃದಯದ ಮೇಲೆ ಒತ್ತಡ ಉಂಟಾಗುತ್ತಿರುವ ಲಕ್ಷಣಗಳಿವು

ಜೀರ್ಣಕ್ರಿಯೆಗೆ ಸಹಕಾರಿ:

ಜೀರ್ಣಕಾರಿ ಕಿಣ್ವಗಳ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ತುಳಸಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಅಜೀರ್ಣ, ಗ್ಯಾಸ್ಟ್ರಿಕ್ ಮುಂತಾದ ಸಮಸ್ಯೆ ನಿವಾರಿಸಲು ಸಹಾಯ ಮಾಡುತ್ತದೆ. ಊಟದ ನಂತರ ತುಳಸಿ ಎಲೆಗಳು ಅಥವಾ ತುಳಸಿ ಚಹಾವನ್ನು ಸೇವಿಸುವುದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ