Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಳಸಿ ಎಲೆಗಳನ್ನು ಈ ರೀತಿ ಸೇವನೆ ಮಾಡಿದರೆ ಯಾವ ರೋಗವೂ ಬರುವುದಿಲ್ಲ

ತುಳಸಿ ಎಲೆಗಳನ್ನು ಪ್ರತಿದಿನ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ತುಳಸಿಯನ್ನು ಸೇವನೆ ಮಾಡುವುದು ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಚಳಿಗಾಲದಲ್ಲಿ ಪ್ರತಿದಿನ ನಾಲ್ಕು ತುಳಸಿ ಎಲೆಗಳನ್ನು ಜಗಿದು ತಿನ್ನುವುದರಿಂದ ಆರೋಗ್ಯಕ್ಕೆ ಒಂದು ರೀತಿಯ ವರದಾನವಿದ್ದಂತೆ. ಹಾಗಾದರೆ ಈ ಎಲೆಗಳನ್ನು ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗೆಗಿನ ವಿವರ ಇಲ್ಲಿದೆ.

ತುಳಸಿ ಎಲೆಗಳನ್ನು ಈ ರೀತಿ ಸೇವನೆ ಮಾಡಿದರೆ ಯಾವ ರೋಗವೂ ಬರುವುದಿಲ್ಲ
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 13, 2025 | 6:49 PM

ಇತ್ತೀಚಿನ ದಿನಗಳಲ್ಲಿ ನಮ್ಮ ಅನಾರೋಗ್ಯಕರ ಜೀವನಶೈಲಿಯಿಂದಾಗಿ ಸಾಕಷ್ಟು ರೀತಿಯ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿದೆ. ಎಲ್ಲಕ್ಕಿಂತಲೂ ಆರೋಗ್ಯವೇ ಮುಖ್ಯವಾದ್ದರಿಂದ, ನಮ್ಮ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಲು ಆರೋಗ್ಯ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಈಗಿನಿಂದಲೇ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ. ಆದರೆ ನಾವು ದೇಹವನ್ನು ರೋಗಗಳಿಂದ ದೂರವಿಟ್ಟುಕೊಳ್ಳಲು ವೈದ್ಯರ ಮೊರೆ ಹೋಗುವುದರ ಜೊತೆಗೆ ಹಿತ್ತಲಲ್ಲಿರುವ ಗಿಡಗಳಿಂದ ಮದ್ದು ಮಾಡಬೇಕು. ಏಕೆಂದರೆ ಔಷಧೀಯ ಗುಣವಿರುವ ಗಿಡಗಳು ನಮ್ಮನ್ನು ಆರೋಗ್ಯವಾಗಿಡುತ್ತದೆ. ಅವುಗಳಲ್ಲಿ ತುಳಸಿ ಅಗ್ರಸ್ಥಾನದಲ್ಲಿರುತ್ತದೆ. ಏಕೆಂದರೆ ತುಳಸಿಯಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ. ಹಾಗಾಗಿಯೇ ಹಿಂದೂ ಧರ್ಮದಲ್ಲಿ ತುಳಸಿಗೆ ವಿಶೇಷ ಸ್ಥಾನವಿದೆ. ಜೊತೆಗೆ ತುಳಸಿ ಸಸ್ಯವನ್ನು ಆಯುರ್ವೇದದಲ್ಲಿ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಜೊತೆಗೆ ತುಳಸಿ ಎಲೆಗಳು ಎಲ್ಲಾ ಋತುಗಳಲ್ಲಿಯೂ ಆರೋಗ್ಯಕ್ಕೆ ಒಳ್ಳೆಯದು. ಹಾಗಾದರೆ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇದರ ಸೇವನೆ ಹೇಗೆ ಮಾಡಬೇಕು? ಯಾವ ರೋಗಗಳಿಗೆ ಒಳ್ಳೆಯದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಮಾನ್ಯವಾಗಿ ಚಳಿಗಾಲದ ತಂಪಾದ ವಾತಾವರಣ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲಿಯೂ ಈ ಋತುವಿನಲ್ಲಿ ಶೀತ, ಕೆಮ್ಮು, ರೋಗನಿರೋಧಕ ಶಕ್ತಿಯಂತಹ ಸಮಸ್ಯೆಗಳನ್ನು ಎದುರಿಸುವುದು ಸಾಮಾನ್ಯವಾಗಿರುತ್ತದೆ. ಇಂತಹ ಸಂದರ್ಭಗಳಲ್ಲಿ, ತುಳಸಿ ಎಲೆಗಳನ್ನು ದಿನನಿತ್ಯ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಆರೋಗ್ಯಕ್ಕೂ ವರದಾನ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ತುಳಸಿ ಎಲೆಗಳನ್ನು ಪ್ರತಿದಿನ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರ ಜೊತೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಒದಗಿಸುತ್ತದೆ. ತುಳಸಿಯನ್ನು ಸೇವನೆ ಮಾಡುವುದು ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಚಳಿಗಾಲದಲ್ಲಿ ಪ್ರತಿದಿನ ನಾಲ್ಕು ತುಳಸಿ ಎಲೆಗಳನ್ನು ಜಗಿದು ತಿನ್ನುವುದರಿಂದ ಆರೋಗ್ಯಕ್ಕೆ ಒಂದು ರೀತಿಯ ವರದಾನವಿದ್ದಂತೆ. ಹಾಗಾದರೆ ಈ ಎಲೆಗಳನ್ನು ಸೇವನೆ ಮಾಡುವುದರಿಂದ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗೆಗಿನ ವಿವರ ಇಲ್ಲಿದೆ.

  • ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ: ತುಳಸಿ ಎಲೆಗಳಲ್ಲಿ ವಿಟಮಿನ್ ಸಿ ಮತ್ತು ಸತುವಿನ ಅಂಶ ಸಮೃದ್ಧವಾಗಿದೆ. ಆದ್ದರಿಂದ ತುಳಸಿ ಎಲೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಚಳಿಗಾಲದಲ್ಲಿ ಕಂಡು ಬರುವ ಶೀತ ಮತ್ತು ಗಂಟಲು ನೋವಿನಂತಹ ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ.
  • ಶೀತ – ಕೆಮ್ಮಿನಿಂದ ಪರಿಹಾರ: ಪ್ರತಿನಿತ್ಯ ತುಳಸಿ ಎಲೆಗಳನ್ನು ಸೇವನೆ ಮಾಡುವುದರಿಂದ ಕಫ ಕಡಿಮೆಯಾಗುತ್ತದೆ. ಅದಲ್ಲದೆ ಇದರಲ್ಲಿರುವ ಉರಿಯೂತ ನಿವಾರಕ ಗುಣಗಳು ಗಂಟಲು ನೋವು ಮತ್ತು ಕೆಮ್ಮನ್ನು ಗುಣಪಡಿಸಲು ಪರಿಣಾಮಕಾರಿಯಾಗಿವೆ.
  • ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ: ತುಳಸಿ ಎಲೆಗಳು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಅನೇಕರಿಗೆ ಆಹಾರ ಸರಿಯಾಗಿ ಜೀರ್ಣವಾಗದೆಯೇ ಬಳಲುತ್ತಿರುತ್ತಾರೆ. ಅಂತವರು ತುಳಸಿ ಎಲೆಗಳನ್ನು ಪ್ರತಿನಿತ್ಯ ಸೇವನೆ ಮಾಡುವುದು ಬಹಳ ಉಪಯುಕ್ತವಾಗಿದೆ.
  • ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ: ತುಳಸಿಯನ್ನು ನೈಸರ್ಗಿಕವಾಗಿ ಖಿನ್ನತೆಯನ್ನು ಶಮನ ಮಾಡುವ ಗುಣವಿರುವ ಸಸ್ಯ ಎಂದು ಹೇಳಲಾಗುತ್ತದೆ. ಇದು ಚಳಿಗಾಲದಲ್ಲಿ ಕಂಡುಬರುವಂತಹ ಕಾಲೋಚಿತ ಅಸ್ವಸ್ಥತೆ ಅಥವಾ ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹೃದಯದ ಆರೋಗ್ಯಕ್ಕೆ ಒಳ್ಳೆಯದು: ತುಳಸಿಯಲ್ಲಿ ಉತ್ಕರ್ಷಣ ನಿರೋಧಕ ಗುಣಗಳಿವೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಜೊತೆಗೆ ಹೃದಯಾಘಾತದ ಸಮಸ್ಯೆಗಳನ್ನು ತಡೆಯುತ್ತದೆ.
  • ಚರ್ಮ – ಕೂದಲಿಗೆ ಒಳ್ಳೆಯದು: ತುಳಸಿಯನ್ನು ಪ್ರತಿದಿನ ಸೇವಿಸುವುದರಿಂದ ಚರ್ಮವು ಆರೋಗ್ಯಕರವಾಗಿ ಕಾಂತಿ ಹೆಚ್ಚಾಗುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮದ ಕಾಯಿಲೆಗಳನ್ನು ತಡೆಯುತ್ತವೆ.

ತುಳಸಿ ಎಲೆಗಳನ್ನು ಸೇವನೆ ಮಾಡುವುದು ಹೇಗೆ?

ಪ್ರತಿದಿನ ಬೆಳಿಗ್ಗೆ, ಖಾಲಿ ಹೊಟ್ಟೆಯಲ್ಲಿ ನಾಲ್ಕು ತಾಜಾ ತುಳಸಿ ಎಲೆಗಳನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಕುದಿಸಿ ಚಹಾ ಅಥವಾ ಕಷಾಯದ ರೀತಿಯಲ್ಲಿ ಕುಡಿಯಿರಿ. ಜೊತೆಗೆ ತುಳಸಿಯನ್ನು ಜೇನುತುಪ್ಪದ ಜೊತೆ ಸೇರಿಸಿ ಸೇವನೆ ಮಾಡಿದರೆ, ಅದರ ಪ್ರಯೋಜನಗಳು ಹೆಚ್ಚಾಗುತ್ತವೆ. ಇದರ ಜೊತೆಗೆ ತುಳಸಿ ಎಲೆಗಳನ್ನು ನೇರವಾಗಿ ಜಗಿದು ತಿನ್ನಬಹುದು.

(ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ. ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ವೈದ್ಯರನ್ನು ಸಂಪರ್ಕಿಸಿ.)

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ