AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?

ಹಾಲಿನಲ್ಲಿ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳಿರುತ್ತವೆ. ಇದು ಮೆದುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Health Tips: ಅರಿಶಿಣ ಹಾಲು ಸೇವಿಸಿದರೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿದಿದೆಯೇ?
ಸಾಂದರ್ಭಿಕ
TV9 Web
| Edited By: |

Updated on: Sep 18, 2021 | 8:25 AM

Share

ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ನಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಉತ್ತಮ ವಿಟಮಿನ್ ಇರುವ ಆಹಾರ ಸೇವಿಸುವುದರಿಂದ ನೀವು ಆರೋಗ್ಯವಾಗಿರಲು ಸಹಾಯಕವಾಗಿದೆ. ಹೆಚ್ಚಿನ ಜನರಿಗೆ ಪ್ರತಿನಿತ್ಯ ಹಾಲು ಕುಡಿಯುವ ಅಭ್ಯಾಸ ಇರುತ್ತದೆ. ಇದರ ರುಚಿಗಾಗಿ ಸ್ವಲ್ಪ ಅರಿಶಿಣ ಪುಡಿ ಸೇರಿಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಹಾಲಿನಲ್ಲಿ ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳಿರುತ್ತವೆ. ಇದು ಮೆದುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಇದರ ಜತೆಗೆ ಅರಿಶಿಣ ಸೇರಿಸಿ ಕುಡಿಯುವ ಅಭ್ಯಾಸ ಇನ್ನೂ ಒಳ್ಳೆಯದು.

ಕೆಮ್ಮು ಮತ್ತು ನೆಗಡಿಯಂಥಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಅರಿಶಿಣ ಹಾಲು ಸಹಾಯಕ. ಅರಿಶಿಣ ಹಾಲು ಹೆಚ್ಚು ಆರೋಗ್ಯಕರ ಗುಣಗಳನ್ನು ಹೊಂದಿದೆ. ದೇಹದ ಆಯಾಸ ಜತೆಗೆ ಒತ್ತಡವನ್ನು ನಿವಾರಣೆ ಮಾಡಲು ಇದು ಸಹಾಯಕವಾಗಿದೆ. ಹಾಗಾಗಿ ವಾರಕ್ಕೊಮ್ಮೆಯಾದರೂ ಒಂದು ಗ್ಲಾಸ್ ಅರಿಶಿಣ ಹಾಲು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಿ.

ಅರಿಶಿಣ ಹಾಲಿನ ಸೇವನೆಯ ಪ್ರಯೋಜನಗಳು *ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ *ಕಾಮಾಲೆ ಉರಿಯೂತ ಸಮಸ್ಯೆಗೆ ಪರಿಹಾರ ಸಿಗುತ್ತದೆ *ಕಫ, ನೆಗಡಿ, ಜ್ವರದಂಥಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು *ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ಸೆಳೆತ, ನೋವನ್ನು ಕಡಿಮೆ ಮಾಡುತ್ತದೆ *ಅರಿಶಿಣದಲ್ಲಿರುವ ಕರ್ಕ್ಯುಮಿನ್ ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ *ಅರಿಶಿಣ ಹಾಲಿನಲ್ಲಿರುವ ಪೋಷಕಾಂಶಗಳು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ

ಇದನ್ನೂ ಓದಿ:

Recipe of the day: ಖಾರ ನಿಪ್ಪಟ್ಟು ಮಾಡುವ ಸರಳ ವಿಧಾನ ತಿಳಿದುಕೊಳ್ಳಿ

Health Tips: ಗರ್ಭಿಣಿಯರು ಆರೋಗ್ಯ ಸುಧಾರಣೆಗೆ ಸೇವಿಸಬೇಕಾದ ಪೋಷಕಾಂಶಗಳು

(Turmeric milk benefits of turmeric powder milk health benefits)

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ