AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turmeric Side Effects: ಅರಿಶಿನವನ್ನು ಹೆಚ್ಚು ಬಳಸುತ್ತೀರಾ?; ಅದರ ತೊಂದರೆಗಳ ಬಗ್ಗೆಯೂ ನಿಮಗೆ ತಿಳಿದಿರಲಿ

ಅರಿಶಿನ ಮತ್ತು ಕರ್ಕ್ಯುಮಿನ್ ಸಾಮಾನ್ಯವಾಗಿ ಸುರಕ್ಷಿತವಾಗಿದ್ದರೂ, ಅದರ ಅಡ್ಡಪರಿಣಾಮಗಳ ಬಗ್ಗೆಯೂ ತಿಳಿದಿರುವುದು ಬಹಳ ಮುಖ್ಯ. ವಿಶೇಷವಾಗಿ ಹೆಚ್ಚು ಪ್ರಮಾಣದಲ್ಲಿ ಅರಿಶಿನವನ್ನು ಸೇವಿಸಿದಾಗ ಅದರಿಂದ ತೊಂದರೆಗಳು ಉಂಟಾಗುತ್ತವೆ. ಆ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿ ಇಲ್ಲಿದೆ.

Turmeric Side Effects: ಅರಿಶಿನವನ್ನು ಹೆಚ್ಚು ಬಳಸುತ್ತೀರಾ?; ಅದರ ತೊಂದರೆಗಳ ಬಗ್ಗೆಯೂ ನಿಮಗೆ ತಿಳಿದಿರಲಿ
ಅರಿಶಿನImage Credit source: iStock
ಸುಷ್ಮಾ ಚಕ್ರೆ
|

Updated on: Nov 16, 2023 | 5:08 PM

Share

ಅರಿಶಿನ ಪ್ರತಿಯೊಬ್ಬರ ಮನೆಯಲ್ಲೂ ಬಳಸುವ ಪದಾರ್ಥ. ಅಡುಗೆಗೆ ಬಳಸುವ ಈ ಪದಾರ್ಥ ದೇವರಮನೆಯಲ್ಲೂ ಸ್ಥಾನ ಪಡೆಯುತ್ತದೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅರಿಶಿನದ ಪ್ರಮುಖ ಘಟಕಾಂಶವಾದ ಕರ್ಕ್ಯುಮಿನ್ ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಎದುರಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದೆ. ಆದರೆ, ಅರಿಶಿನವನ್ನು ಅಗತ್ಯಕ್ಕಿಂತ ಹೆಚ್ಚು ಸೇವಿಸಿದರೂ ಅದರಿಂದ ಅಡ್ಡಪರಿಣಾಮಗಳು ಉಂಟಾಗುತ್ತವೆ. ದಿನಕ್ಕೆ 500ರಿಂದ 2000 ಮಿಲಿಗ್ರಾಂ ಅರಿಶಿನವನ್ನು ಸೇವಿಸುವುದು ಉತ್ತಮ. ಅದಕ್ಕಿಂತಲೂ ಹೆಚ್ಚು ಸೇವಿಸುವುದು ಒಳ್ಳೆಯದಲ್ಲ.

ಅರಿಶಿನ ಮತ್ತು ಕರ್ಕ್ಯುಮಿನ್ ಸಾಮಾನ್ಯವಾಗಿ ಸುರಕ್ಷಿತವಾಗಿದ್ದರೂ, ಅದರ ಅಡ್ಡಪರಿಣಾಮಗಳ ಬಗ್ಗೆಯೂ ತಿಳಿದಿರುವುದು ಬಹಳ ಮುಖ್ಯ. ವಿಶೇಷವಾಗಿ ಹೆಚ್ಚು ಪ್ರಮಾಣದಲ್ಲಿ ಅರಿಶಿನವನ್ನು ಸೇವಿಸಿದಾಗ ಅದರಿಂದ ತೊಂದರೆಗಳು ಉಂಟಾಗುತ್ತವೆ. ಆ ಅಡ್ಡಪರಿಣಾಮಗಳೆಂದರೆ,

1. ಹೊಟ್ಟೆನೋವು:

ಹೆಚ್ಚಿನ ಪ್ರಮಾಣದ ಅರಿಶಿನ ಅಥವಾ ಕರ್ಕ್ಯುಮಿನ್ ಸೇವಿಸುವುದರಿಂದ ಜಠರಗರುಳಿನ ಅಸ್ವಸ್ಥತೆ ಉಂಟಾಗಬಹುದು. ಇದರಿಂದ ಹೊಟ್ಟೆ ನೋವು, ಆಸಿಡ್ ರಿಫ್ಲಕ್ಸ್ ಮತ್ತು ಅತಿಸಾರ ಉಂಟಾಗುವ ಸಾಧ್ಯತೆ ಇರುತ್ತದೆ.

2. ತಲೆನೋವು ಮತ್ತು ತಲೆತಿರುಗುವಿಕೆ:

ಕೆಲವು ವ್ಯಕ್ತಿಗಳು 450 ಮಿಗ್ರಾಂ ಅಥವಾ ಹೆಚ್ಚಿನ ಪ್ರಮಾಣದಲ್ಲಿ ಕರ್ಕ್ಯುಮಿನ್ ಅನ್ನು ಸೇವಿಸಿದಾಗ ತಲೆನೋವು ಮತ್ತು ತಲೆತಿರುಗುವಿಕೆಯನ್ನು ಅನುಭವಿಸಬಹುದು.

ಇದನ್ನೂ ಓದಿ: ಕೊಬ್ಬು ಕರಗಿಸುವುದರಿಂದ ಜೀರ್ಣಕ್ರಿಯೆವರೆಗೆ; ಅಡುಗೆಮನೆಯಲ್ಲಿರುವ ಹುಣಸೆಹಣ್ಣಿನ ಚಮತ್ಕಾರಗಳಿವು

3. ಹೊಟ್ಟೆಯ ಸಮಸ್ಯೆಗಳು:

ಅರಿಶಿನವು ಆಸಿಡ್ ರಿಫ್ಲಕ್ಸ್ ಮತ್ತು ಪಿತ್ತಗಲ್ಲುಗಳಂತಹ ಹೊಟ್ಟೆಯ ಸಮಸ್ಯೆಗಳನ್ನು ಉಲ್ಬಣಗೊಳಿಸಬಹುದು.

4. ಗರ್ಭಧಾರಣೆ ಮತ್ತು ಸ್ತನ್ಯಪಾನ:

ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರು ಅರಿಶಿನದ ಅಂಶವಿರುವ ಪದಾರ್ಥಗಳ ಸೇವನೆಯನ್ನು ತಪ್ಪಿಸಬೇಕು. ಏಕೆಂದರೆ ಅವು ಗರ್ಭಾಶಯದ ಸಂಕೋಚನವನ್ನು ಉತ್ತೇಜಿಸಬಹುದು.

ಕೆಲವು ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳು ಅಥವಾ ನಿರ್ದಿಷ್ಟ ಔಷಧಿಗಳನ್ನು ತೆಗೆದುಕೊಳ್ಳುವವರು ಅರಿಶಿನ ಸೇವಿಸುವಾಗ ಎಚ್ಚರಿಕೆಯಿಂದ ಇರಬೇಕು. ಇವುಗಳಿಂದ ರಕ್ತಸ್ರಾವದ ಅಸ್ವಸ್ಥತೆಗಳು, ಜಠರಗರುಳಿನ ಸಮಸ್ಯೆಗಳು ಅಥವಾ ಮೂತ್ರಪಿಂಡದ ಕಲ್ಲುಗಳ ಸಮಸ್ಯೆ ಉಂಟಾಗಬಹುದು.

ಇದನ್ನೂ ಓದಿ: ಅಜೀರ್ಣದ ಸಮಸ್ಯೆಗೆ ಅರಿಶಿನ ಮದ್ದು; ಈ ನೈಸರ್ಗಿಕ ಔಷಧಿ ಬಗ್ಗೆ ನಿಮಗೆಷ್ಟು ಗೊತ್ತು?

ಅರಿಶಿನದಲ್ಲಿ ಕಂಡುಬರುವ ನೈಸರ್ಗಿಕ ಸಂಯುಕ್ತವನ್ನು ಹೊಟ್ಟೆಯ ಆಮ್ಲವನ್ನು ನಿಗ್ರಹಿಸಲು ಬಳಸಲಾಗುತ್ತದೆ. ಅಜೀರ್ಣದ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಲು ಅರಿಶಿನವನ್ನು ಬಳಸಲಾಗುತ್ತದೆ ಎಂದು ಬಿಎಂಜೆ ಎವಿಡೆನ್ಸ್-ಬೇಸ್ಡ್ ಮೆಡಿಸಿನ್ ಜರ್ನಲ್​ನಲ್ಲಿ ಪ್ರಕಟವಾದ ಅಧ್ಯಯನವು ತಿಳಿಸಿದೆ. ಕರ್ಕುಮಾ ಲಾಂಗಾ ಸಸ್ಯದ ಮೂಲದಿಂದ ಬಂದಿರುವ ಅರಿಶಿನವು ಕರ್ಕ್ಯುಮಿನ್ ಎಂಬ ನೈಸರ್ಗಿಕವಾಗಿ ಸಕ್ರಿಯವಾಗಿರುವ ಸಂಯುಕ್ತವನ್ನು ಹೊಂದಿದೆ. ಇದು ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಆಗ್ನೇಯ ಏಷ್ಯಾ ಭಾಗದಲ್ಲಿ ಅಜೀರ್ಣದ ಚಿಕಿತ್ಸೆ ಸೇರಿದಂತೆ ಔಷಧೀಯ ಪರಿಹಾರವಾಗಿ ಅರಿಶಿನ ಹಲವು ಶತಮಾನಗಳಿಂದ ಬಳಸಲ್ಪಟ್ಟಿದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ ಎನ್ನಲಾಗಿದೆ.

ಅರಿಶಿನದಲ್ಲಿ ಫೈಬರ್, ವಿಟಮಿನ್ ಸಿ, ವಿಟಮಿನ್ ಇ ಮತ್ತು ವಿಟಮಿನ್ ಕೆ, ಪೊಟ್ಯಾಸಿಯಂ, ಪ್ರೋಟೀನ್, ಕ್ಯಾಲ್ಸಿಯಂನಂತಹ ಪೋಷಕಾಂಶಗಳು ಕಂಡುಬರುತ್ತವೆ. ಗಾಯಗಾಳಾಗಿದ್ದರೆ ಆ ಜಾಗಕ್ಕೆ ಅರಿಶಿನವನ್ನು ಹಚ್ಚುವುದರಿಂದ ರಕ್ತ ಸೋರುವಿಕೆಯನ್ನು ನಿಯಂತ್ರಿಸಬಹುದು. ಅರಿಶಿನ ಆ್ಯಂಟಿಸೆಪ್ಟಿಕ್ ಆಗಿರುವುದರಿಂದ ದಿನನಿತ್ಯ ಅಡುಗೆಯಲ್ಲಿ ಬಳಸುವುದರಿಂದ ದೇಹದ ಆರೋಗ್ಯವನ್ನು ಕಾಪಾಡುತ್ತದೆ. ನಂಜು, ಅಲರ್ಜಿ ಮತ್ತಿತರ ಸಮಸ್ಯೆಯಾಗದಂತೆ ತಡೆಯುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ