AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ

ಕಳೆದ ಕೆಲವು ವರ್ಷಗಳಿಂದ, ಮಕ್ಕಳು ಅತಿಯಾಗಿ ಸಂಸ್ಕರಿಸಿದ ಆಹಾರವನ್ನು ಸೇವನೆ ಮಾಡುತ್ತಿದ್ದಾರೆ. ಈ ಪ್ರವೃತ್ತಿ ಗಮನಾರ್ಹವಾಗಿ ಹೆಚ್ಚಾಗಿರುವುದು ಆರೋಗ್ಯ ತಜ್ಞರನ್ನೇ ಬೆಚ್ಚಿಬಿಳಿಸಿದೆ. ಆದರೆ ಈ ರೀತಿಯ ಆಹಾರ ಆರೋಗ್ಯಕ್ಕೆ ಸಾಕಷ್ಟು ಅಪಾಯಕಾರಿಯಾಗಿದ್ದು ಆಸ್ತಮಾದ ಅಪಾಯವನ್ನು ಹೆಚ್ಚಿಸುತ್ತದೆ ಎಂಬುದು ಸಂಶೋಧನೆಯಿಂದ ಬಹಿರಂಗಗೊಂಡಿದೆ. ಇನ್ನಾದರೂ ಈ ವಿಚಾರದ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಆರೋಗ್ಯ ಕಾಪಾಡುವುದು ಉತ್ತಮ.

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ
Ultra Processed FoodImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 14, 2026 | 6:58 PM

Share

ಇತ್ತೀಚಿನ ದಿನಗಳಲ್ಲಿ ಮಕ್ಕಳ ಆಹಾರ ಪದ್ಧತಿಯಲ್ಲಿ ಅಲ್ಟ್ರಾ ಪ್ರೊಸೆಸ್ಡ್ ಫುಡ್ (Ultra Processed Food) ಬಳಕೆ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರಲ್ಲಿ ಆತಂಕ ಮೂಡಿಸಿದೆ. ಚಿಪ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್, ಬರ್ಗರ್, ಪಿಜ್ಜಾ ಮತ್ತು ಸಿಹಿಯಾಗಿರುವ ಪ್ರೊಸೆಸ್ಡ್ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುವ ಮಕ್ಕಳಲ್ಲಿ ಅಸ್ತಮಾ (Asthma) ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಸಂಶೋಧನೆ ತಿಳಿಸಿದೆ. ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ, ಇದಕ್ಕೂ ಅಸ್ತಮಾಗೆ ಇರುವ ಸಂಬಂಧವೇನು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ?

ಸಂಶೋಧಕರ ಪ್ರಕಾರ, ಅಲ್ಟ್ರಾ ಪ್ರೊಸೆಸ್ಡ್ ಫುಡ್ ಕೇವಲ ಹೊಟ್ಟೆಯ ಆರೋಗ್ಯವನ್ನು ಹಾಳು ಮಾಡುವುದಷ್ಟೇ ಅಲ್ಲ, ಬದಲಾಗಿ ದೇಹದ ‘ಗಟ್ ಮೈಕ್ರೋಬಯೋಮ್’ ಮೇಲೂ ದುಷ್ಪರಿಣಾಮ ಬೀರುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಕುಂದುತ್ತದೆ ಮತ್ತು ದೇಹದಲ್ಲಿ ಆಕ್ಸಿಡೇಟಿವ್ ಸ್ಟ್ರೆಸ್ ಹೆಚ್ಚಾಗುತ್ತದೆ. ಇದರ ಪರಿಣಾಮ ಶ್ವಾಸಕೋಶಗಳ ಮೇಲೂ ಬಿದ್ದು ಅಸ್ತಮಾ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಇಂತಹ ಆಹಾರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಗಳು, ಪ್ರಿಸರ್ವೇಟಿವ್ಸ್, ಕೃತಕ ಫ್ಲೇವರ್‌ಗಳು ಮತ್ತು ನಾನಾ ರೀತಿಯ ಪದಾರ್ಥಗಳನ್ನು ಬಳಸಲಾಗುತ್ತದೆ. ಇವು ಮಕ್ಕಳ ದೇಹದ ಬೆಳವಣಿಗೆಗೆ ಹಾನಿಕಾರಕವಾಗಬಹುದು. ಜೊತೆಗೆ ಹೊಟ್ಟೆ ಸಂಬಂಧಿತ ಸಮಸ್ಯೆಗಳು, ಜೀರ್ಣಕ್ರಿಯೆ ತೊಂದರೆ ಹಾಗೂ ದೀರ್ಘಾವಧಿಯಲ್ಲಿ ಕ್ಯಾನ್ಸರ್ ಅಪಾಯವೂ ಹೆಚ್ಚಾಗಬಹುದು ಎಂದು ಅಧ್ಯಯನದಿಂದ ತಿಳಿದುಬಂದಿದೆ.

ಇದನ್ನೂ ಓದಿ: ಅಸ್ತಮಾ ರೋಗಿಗಳೇ ಹವಾಮಾನ ಬದಲಾವಣೆಯಿಂದ ಸಮಸ್ಯೆಗಳಾಗುತ್ತಿದ್ಯಾ? ಹಾಗಿದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಿ

ಮಕ್ಕಳ ಆಹಾರದಲ್ಲಿ ಯಾವ ಬದಲಾವಣೆ ಅಗತ್ಯ?

ಆರೋಗ್ಯ ತಜ್ಞರ ಪ್ರಕಾರ ಮಕ್ಕಳಿಗೆ ತಾಜಾ ಹಣ್ಣು, ತರಕಾರಿ, ಮನೆಯಲ್ಲೇ ತಯಾರಿಸಿದ ಆಹಾರ, ಬೇಳೆ, ಹಾಲು ಮತ್ತು ಪ್ರೋಟೀನ್‌ಯುಕ್ತ ಆಹಾರ ನೀಡುವುದು ಉತ್ತಮ. ಜೊತೆಗೆ ಸಂಪೂರ್ಣ ಧಾನ್ಯಗಳನ್ನು ಬಳಸಿ ತಯಾರಿಸಿದ ಆಹಾರ ಹಾಗೂ ಕಡಿಮೆ ಸಕ್ಕರೆ ಇರುವ ಪದಾರ್ಥಗಳನ್ನು ಸೇವಿಸಲು ಉತ್ತೇಜಿಸಬೇಕು. ಪ್ಯಾಕೆಟ್ ಆಹಾರ ಮತ್ತು ಜಂಕ್ ಫುಡ್ ಬಳಕೆಯನ್ನು ಕಡಿಮೆ ಮಾಡುವುದು ಮಕ್ಕಳ ಆರೋಗ್ಯ ಕಾಪಾಡಲು ಅಗತ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ