AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು

Health Tips in Kannada: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು
Garlic peel
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 12, 2021 | 3:48 PM

Health Benefits Of Garlic: ಅಡುಗೆ ರುಚಿಯನ್ನು ಹೆಚ್ಚಿಸುವ ಬೆಳ್ಳುಳ್ಳಿಯಿಂದ ಹಲವು ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಇದಾಗ್ಯೂ ಬೆಳ್ಳುಳ್ಳಿ ಸಿಪ್ಪೆಯಿಂದ ಮತ್ತಷ್ಟು ಆರೋಗ್ಯಕಾರಿ ಲಾಭಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತಿದೆಯಾ? ಹೌದು, ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುವ ಬೆಳ್ಳುಳ್ಳಿ ಸಿಪ್ಪೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ವೈರಲ್ ಮತ್ತು ಶಿಲೀಂಧ್ರ ವಿರೋಧಿ ಗುಣಗಳಿವೆ. ಹಾಗೆಯೇ ಬೆಳ್ಳುಳ್ಳಿಯಂತೆ ಇದರ ಸಿಪ್ಪೆಯೂ ಆರೋಗ್ಯ ಮತ್ತು ಸೌಂದರ್ಯವನ್ನು ಅಂದಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಿದ್ರೆ ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುವ ಪ್ರಯೋಜನಗಳೇನು ನೋಡೋಣ.

ಪಾದಗಳ ಊತವನ್ನು ಕಡಿಮೆ ಮಾಡುತ್ತದೆ: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು. ಆ ಬಳಿಕ ನೀರು ಉಗುರು ಬೆಚ್ಚಗಾದ ನಂತರ, ನಿಮ್ಮ ಪಾದಗಳನ್ನು ಈ ನೀರಿನಲ್ಲಿ ಮುಳುಗಿಸಿ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಇದರಿಂದ ಪಾದಗಳ ಊತ ಕಡಿಮೆಯಾಗುತ್ತದೆ.

ಶೀತಕ್ಕೂ ಪರಿಹಾರ: ಶೀತ ಮತ್ತು ನೆಗಡಿ ಸಮಸ್ಯೆಯಿಂದ ಪಾರಾಗಲು ಬೆಳ್ಳುಳ್ಳಿ ಸಿಪ್ಪೆಯ ಮೊರೆ ಹೋಗಬಹುದು. ಇದಕ್ಕಾಗಿ ನೀವು ನೀರಿನ ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ. ಆ ಬಳಿಕ ಆ ನೀರನ್ನು ಸೇವಿಸುವುದರಿಂದ ಶೀಘ್ರ ನಿಮ್ಮ ಶೀತ ಮತ್ತು ನೆಗಡಿ ನಿವಾರಣೆಯಾಗುತ್ತದೆ.

ಚರ್ಮದ ತುರಿಕೆಗೆ ಮನೆಮದ್ದು: ಚರ್ಮದ ಮೇಲಿನ ತುರಿಕೆಯ ಸಮಸ್ಯೆಯನ್ನು ಕಡಿಮೆ ಮಾಡಲು ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ, ಬೆಳ್ಳುಳ್ಳಿ ಸಿಪ್ಪೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಈ ನೀರನ್ನು ತುರಿಕೆ ಇರುವ ಜಾಗಕ್ಕೆ ಹಚ್ಚಿದರೆ ಸಾಕು.

ಕೂದಲ ಹಾರೈಕೆ: ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ ತಣ್ಣಗಾಗಿಸಿದ ನೀರಿನಿಂದ ಕೂದಲನ್ನು ತೊಳೆಯುವುದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಅಲ್ಲದೆ ಕೂದಲು ಉದುರುವಿಕೆ, ಕೂದಲ ಬೇರು ಸಡಿಲಗೊಳ್ಳುವಿಕೆ ಕಡಿಮೆಯಾಗುತ್ತದೆ.

ನೈಸರ್ಗಿಕ ಗೊಬ್ಬರ: ಬೆಳ್ಳುಳ್ಳಿ ಸಿಪ್ಪೆಯನ್ನು ಸಸ್ಯಗಳಿಗೆ ನೈಸರ್ಗಿಕ ಗೊಬ್ಬರವಾಗಿ ಕೂಡ ಬಳಸಬಹುದು. ಇದರಲ್ಲಿರುವ ಪೋಷಕಾಂಶಗಳು ಮಣ್ಣನ್ನು ಉತ್ಕೃಷ್ಟಗೊಳಿತ್ತವೆ. ಇದು ಸಸ್ಯಗಳನ್ನು ಆರೋಗ್ಯವಾಗಿಡುವಲ್ಲಿ ವಿಶೇಷ ಪಾತ್ರವನ್ನು ನಿಭಾಯಿಸುತ್ತದೆ.

ಆಹಾರದ ರುಚಿ ಹೆಚ್ಚಿಸಲು ಬಳಸಿ: ಕೆಲ ಆಹಾರಗಳಲ್ಲಿ ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸುವುದರಿಂದ ರುಚಿ ಕೂಡ ಹೆಚ್ಚಾಗುತ್ತದೆ. ಅದರ ಜೊತೆಗೆ ಆಹಾರದ ಪೌಷ್ಟಿಕಾಂಶ ವರ್ಧಿಸಹುದು. ಮುಖ್ಯವಾಗಿ ನೀವು ಬೆಳ್ಳುಳ್ಳಿ ಸಿಪ್ಪೆಗಳನ್ನು ಸೂಪ್‌ಗಳು, ಸ್ಟಾಕ್‌ಗಳು ಮತ್ತು ತರಕಾರಿ ಪದಾರ್ಥಗಳಲ್ಲಿ ಬಳಸಿದರೆ ಆಹಾರ ರುಚಿ ಹೆಚ್ಚಾಗುತ್ತದೆ.

ಇದನ್ನೂ ಓದಿ: India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

ಇದನ್ನೂ ಓದಿ: India vs England: 2ನೇ ಟೆಸ್ಟ್ ವೇಳೆ ಮಳೆಯಾಗಲಿದೆಯಾ? ಇಲ್ಲಿದೆ 5 ದಿನಗಳ ಸಂಪೂರ್ಣ ಹವಾಮಾನ ವರದಿ

ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ

(Unknown Health Benefits Of Garlic Peels)

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ