AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರ್ಣಕ್ರಿಯೆ, ಮಲಬದ್ಧತೆಯ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಅಂದ್ರೆ ಈ ಒಂದು ಸಲಹೆಯನ್ನು ಪಾಲಿಸಿ

Ginger water: ಶುಂಠಿ ನೀರನ್ನು ಕುಡಿಯುವುದರಿಂದ ಹಲವು ರೀತಿಯ ಪ್ರಯೋಜನಗಳಿವೆ ಎಂಬುದು ತಿಳಿದ ವಿಚಾರ. ಆದರೆ ಇದನ್ನು ಸಮಯ ಸಿಕ್ಕಾಗ ಕುಡಿಯುವುದಕ್ಕಿಂತ ಒಂದು ನಿರ್ದಿಷ್ಟ ಸಮಯದಲ್ಲಿ ಸೇವನೆ ಮಾಡುವುದರಿಂದ ದುಪ್ಪಟ್ಟು ಪ್ರಯೋಜನಗಳನ್ನು ಪಡೆಯಬಹುದು. ಮಾತ್ರವಲ್ಲ ಜೀರ್ಣಕ್ರಿಯೆಯಂತಹ ಸಮಸ್ಯೆಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಬಹುದು. ಹಾಗಾದ್ರೆ ಈ ರೀತಿ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಶುಂಠಿ ನೀರನ್ನು ಹೇಗೆ, ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೀರ್ಣಕ್ರಿಯೆ, ಮಲಬದ್ಧತೆಯ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಅಂದ್ರೆ ಈ ಒಂದು ಸಲಹೆಯನ್ನು ಪಾಲಿಸಿ
Ginger Water
ಪ್ರೀತಿ ಭಟ್​, ಗುಣವಂತೆ
|

Updated on: Oct 08, 2025 | 7:26 PM

Share

ಇತ್ತೀಚಿಗೆ ಎಲ್ಲರಲ್ಲಿಯೂ ಹೆಚ್ಚಾಗಿ ಜೀರ್ಣಕ್ರಿಯೆಗೆ (Digestion) ಸಂಬಂಧಿಸಿದ ಸಮಸ್ಯೆಗಳು ಕಂಡುಬರುತ್ತಿರುವುದನ್ನು ಗಮನಿಸಿರಬಹುದು. ಇದಕ್ಕೆ ಹಲವಾರು ಕಾರಣಗಳಿರಬಹುದು ಆದರೆ ಮುಖ್ಯವಾದ ಕಾರಣ ನಾವು ಪ್ರತಿನಿತ್ಯ ಸೇವನೆ ಮಾಡುವ ಆಹಾರವೇ ಆಗಿರುತ್ತದೆ. ಒಬ್ಬ ಮನುಷ್ಯನಿಗೆ ಜೀರ್ಣಕ್ರಿಯೆ ಸರಿಯಾಗಿ ಆಗದಿದ್ದರೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ ಮಾತ್ರವಲ್ಲ ಇದು ನಿಮ್ಮ ದೇಹ ಮತ್ತು ಮನಸ್ಸು ಎರಡನ್ನೂ ಹಾಳು ಮಾಡುತ್ತದೆ. ಹಾಗಾಗಿ ಈ ರೀತಿ ಸಮಸ್ಯೆ ಕಂಡು ಬಂದಾಗ ಅದಕ್ಕೆ ತಾತ್ಕಾಲಿಕವಾಗಿ ಸಿಗುವಂತಹ ಪರಿಹಾರವಲ್ಲ ಬದಲಾಗಿ ಶಾಶ್ವತವಾಗಿ ಮುಕ್ತಿ ನೀಡುವ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇವುಗಳಲ್ಲಿ ಶುಂಠಿ ನೀರು ಅಥವಾ ಕಷಾಯ ಸೇವನೆಯೂ ಒಂದು. ಆದರೆ ಇದನ್ನು ಕುಡಿಯುವ ಸಮಯ ಮುಖ್ಯವಾಗುತ್ತದೆ. ಹಾಗಾದ್ರೆ ಈ ರೀತಿ ಜೀರ್ಣಕ್ರಿಯೆ, ಮಲಬದ್ಧತೆಯಂತಹ ಸಮಸ್ಯೆಗಳಿಂದ ಪರಿಹಾರ ಕಂಡುಕೊಳ್ಳಲು ಶುಂಠಿ ನೀರನ್ನು ಹೇಗೆ, ಯಾವ ಸಮಯದಲ್ಲಿ ಸೇವನೆ ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ

ಶುಂಠಿಯು ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾದ ಮನೆಮದ್ದು ಎಂಬುದು ತಿಳಿದ ವಿಚಾರ. ಇದು ನೀವು ಸೇವನೆ ಮಾಡಿದಂತಹ ಆಹಾರವನ್ನು ತ್ವರಿತವಾಗಿ ಜೀರ್ಣಿಸಿಕೊಳ್ಳಲು, ಹೊಟ್ಟೆ ಉಬ್ಬುವುದನ್ನು ತಡೆಯಲು ಮತ್ತು ಕರುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದು ಅನೇಕ ವೈಜ್ಞಾನಿಕ ಅಧ್ಯಯನಗಳಿಂದ ಸಾಬೀತಾಗಿದೆ. ಆದರೆ ಶುಂಠಿ ನೀರನ್ನು ಕುಡಿಯುವ ಮೊದಲು ಇದನ್ನು ಯಾವ ಸಮಯದಲ್ಲಿ ಕುಡಿಯಬೇಕು? ಇದರ ಗರಿಷ್ಠ ಪ್ರಯೋಜನ ಹೇಗೆ ಸಿಗುತ್ತದೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ.

ಇದನ್ನೂ ಓದಿ: ಬೆಳಿಗ್ಗೆ ಎದ್ದ ತಕ್ಷಣ ಬಿಸಿ ಚಹಾ ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿಯನ್ನು ಮಿಸ್ ಮಾಡ್ದೆ ಓದಿ

ಊಟಕ್ಕೆ ಮೊದಲು (20-30 ನಿಮಿಷಗಳ ಮೊದಲು): ಶುಂಠಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಹೊಟ್ಟೆಯಲ್ಲಿ ಪಿತ್ತರಸ ಮತ್ತು ಕಿಣ್ವಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಆಹಾರ ಸರಿಯಾಗಿ ಜೀರ್ಣವಾಗಲು ಅನುವು ಮಾಡಿಕೊಡುತ್ತದೆ. ಹಾಗಾಗಿ ಊಟ ಮಾಡುವುದಕ್ಕಿಂತ ಮೊದಲೇ ಇದನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು.

ಅಗತ್ಯಕ್ಕಿಂತ ಹೆಚ್ಚು ಊಟ ಮಾಡಿದ ನಂತರ (30-60 ನಿಮಿಷಗಳ ನಂತರ): ನೀವು ಹೊಟ್ಟೆ ಬಿರಿಯುವಷ್ಟು ಆಹಾರ ಸೇವನೆ ಮಾಡಿದಾಗ ಈ ಶುಂಠಿ ನೀರನ್ನು ಕುಡಿಯಲೇ ಬೇಕು. ಇದು ಅಜೀರ್ಣವನ್ನು ನಿವಾರಿಸುತ್ತದೆ. ಒಂದು ಅಧ್ಯಯನದ ಪ್ರಕಾರ, ಶುಂಠಿ ಹೊಟ್ಟೆಯನ್ನು ಖಾಲಿ ಮಾಡುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ಹೊಟ್ಟೆಯನ್ನು ಹಗುರವಾಗಿರಿಸಲು ಸಹಾಯ ಮಾಡುತ್ತದೆ ಎಂಬುದು ತಿಳಿದು ಬಂದಿದೆ.

ಬೆಳಗಿನ ಉಪಾಹಾರದ ನಂತರ ಮತ್ತು ಮಧ್ಯಾಹ್ನ ಊಟಕ್ಕಿಂತ ಮೊದಲು: ಬೆಳಿಗ್ಗೆ 10 ರಿಂದ 11 ಗಂಟೆಯ ನಡುವೆ ಶುಂಠಿ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ, ವಾಕರಿಕೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ. ಇದು ದೇಹವನ್ನು ಉಲ್ಲಾಸಗೊಳಿಸುತ್ತದೆ ಮತ್ತು ಏಕಾಗ್ರತೆಗೆ ಸಹಾಯ ಮಾಡುತ್ತದೆ. ಮಲಗುವ ಮುನ್ನ ಸ್ವಲ್ಪ ಪ್ರಮಾಣದ ಶುಂಠಿ ನೀರನ್ನು ಕುಡಿಯುವುದರಿಂದ ದೇಹವು ಶಾಂತವಾಗುತ್ತದೆ ಮತ್ತು ರಾತ್ರಿಯಿಡೀ ನಿರ್ವಿಶೀಕರಣ ಹೆಚ್ಚಾಗುತ್ತದೆ. ಆದರೆ, ನಿಮಗೆ ಆಮ್ಲೀಯತೆ ಸಮಸ್ಯೆ ಇದ್ದರೆ, ರಾತ್ರಿಯಲ್ಲಿ ಶುಂಠಿ ನೀರನ್ನು ಕುಡಿಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ