AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಕಡಿಮೆ ಮಾಡಿಕೊಂಡು ಜೀರೋ ಫಿಗರ್ ಆಗ್ಬೇಕಾ? ಹಾಗಿದ್ರೆ ಪ್ರತಿನಿತ್ಯ ಈ ಗಿಡದ ಎರಡು ಎಲೆ ತಿನ್ನಿ

ನಮ್ಮ ಸುತ್ತಲಿರುವ ಎಷ್ಟೋ ಸಸ್ಯಗಳು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ, ಅವುಗಳ ಬಳಕೆಯ ಬಗ್ಗೆ ನಮಗೆ ಸರಿಯಾಗಿ ತಿಳಿದಿರಬೇಕಾಗುತ್ತದೆ. ಇಂತಹ ಔಷಧೀಯ ಗಿಡಗಳಲ್ಲಿ ಅಜ್ವೈನ್ ಅಥವಾ ದೊಡ್ಡಪತ್ರೆ ಎಲೆ ಅಗ್ರಸ್ಥಾನದಲ್ಲಿರುತ್ತದೆ. ಏಕೆಂದರೆ ಈ ಎಲೆಯಲ್ಲಿ ಆರೋಗ್ಯ ಪ್ರಯೋಜನಗಳು ಅಧಿಕವಾಗಿದೆ. ಜೊತೆಗೆ ದೇಹಕ್ಕೆ ಬಹಳ ಪ್ರಯೋಜನಕಾರಿಯಾದ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ಪ್ರೋಟೀನ್ಗಳು ಮತ್ತು ಇತರ ಖನಿಜಗಳನ್ನು ಹೊಂದಿದೆ. ಹಾಗಾದರೆ ಇದರಿಂದ ಯಾವ ರೀತಿಯ ಉಪಯೋಗಗಳಿವೆ? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ತೂಕ ಕಡಿಮೆ ಮಾಡಿಕೊಂಡು ಜೀರೋ ಫಿಗರ್ ಆಗ್ಬೇಕಾ? ಹಾಗಿದ್ರೆ ಪ್ರತಿನಿತ್ಯ ಈ ಗಿಡದ ಎರಡು ಎಲೆ ತಿನ್ನಿ
Ajwain Leaves
ಪ್ರೀತಿ ಭಟ್​, ಗುಣವಂತೆ
|

Updated on: Jul 18, 2025 | 6:15 PM

Share

ಪ್ರಕೃತಿಯಲ್ಲಿ ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಅನೇಕ ಔಷಧೀಯ ಸಸ್ಯಗಳು (Medicinal plant) ಮತ್ತು ಗಿಡಮೂಲಿಕೆಗಳಿವೆ. ಆದರೆ, ನಾವು ಅದರ ಬಗ್ಗೆ ಹೆಚ್ಚಿನ ಗಮನ ಹರಿಸದೆ ಅವುಗಳನ್ನು ನಿರ್ಲಕ್ಷಿಸುತ್ತೇವೆ. ಇಂತಹ ಔಷಧ ಗುಣಗಳಿರುವ ಸಸ್ಯಗಳಲ್ಲಿ ದೊಡ್ಡಪತ್ರೆಯೂ (Ajwain Leaves) ಒಂದು. ಇದನ್ನು ಸಾಂಬಾರ್ ಸೊಪ್ಪು, ಸಂಬಾರ ಬಳ್ಳಿ, ಸಾಂಬ್ರಾಣಿ ಎಲೆ, ಕರ್ಪೂರವಳ್ಳಿ ಹೀಗೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಇದರ ಎಲೆಯಲ್ಲಿ ಲೆಕ್ಕವಿಲ್ಲದಷ್ಟು ಆರೋಗ್ಯ (Health) ಪ್ರಯೋಜನಗಳಿವೆ. ಜೊತೆಗೆ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ಪ್ರೋಟೀನ್ಗಳು ಮತ್ತು ದೇಹಕ್ಕೆ ಬಹಳ ಪ್ರಯೋಜನಕಾರಿಯಾದ ಇತರ ಖನಿಜಗಳನ್ನು ಹೊಂದಿರುತ್ತದೆ. ಈ ಎಲೆಗಳು ಶೀತ ಮತ್ತು ಕೆಮ್ಮಿನಂತಹ ಕಾಲೋಚಿತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಹಾಗಾಗಿಯೇ ಪ್ರತಿಯೊಬ್ಬರೂ ಕೂಡ ಇದನ್ನು ಮನೆಯಲ್ಲಿ ಬೆಳೆಸುವುದು ಬಹಳ ಒಳ್ಳೆಯದು. ಈ ಎಲೆಗಳಲ್ಲಿ ಅನೇಕ ರೀತಿಯ ಪ್ರಯೋಜನಗಳಿವೆ ಅದಕ್ಕಾಗಿಯೇ ಇವುಗಳನ್ನು ಆಯುರ್ವೇದ ಔಷಧಗಳಲ್ಲಿ ಬಳಸಲಾಗುತ್ತದೆ. ಹಾಗಾದರೆ ಇದರಿಂದ ಯಾವ ರೀತಿಯ ಉಪಯೋಗಗಳಿವೆ? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಅಜ್ವೈನ್ ಅಥವಾ ದೊಡ್ಡಪತ್ರೆ ಎಲೆಗಳಿಂದ ಸಿಗುವ ಪ್ರಯೋಜನ:

  • ದೊಡ್ಡಪತ್ರೆ ಎಲೆ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಬೊಜ್ಜು ಕರಗುತ್ತದೆ.
  • ಅಜ್ವೈನ್ ಎಲೆಗಳ ನಿಯಮಿತ ಸೇವನೆಯಿಂದ ನಮ್ಮ ಕಣ್ಣುಗಳ ಆರೋಗ್ಯ ಚೆನ್ನಾಗಿರುತ್ತದೆ.
  • ಈ ಎಲೆಯನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರವಲ್ಲ ಕೀಲು ನೋವು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಪ್ರತಿದಿನ ಎರಡು ದೊಡ್ಡಪತ್ರೆ ಎಲೆಗಳನ್ನು ಅಗಿದು ತಿನ್ನುವುದರಿಂದ ದೇಹದಲ್ಲಿನ ಚಯಾಪಚಯ ಶಕ್ತಿ ಹೆಚ್ಚಾಗುತ್ತದೆ.
  • ಸಾಂಬಾರ್ ಸೊಪ್ಪಿನ ಎಲೆಗಳನ್ನು ಜೇನುತುಪ್ಪ ಮತ್ತು ವಿನೆಗರ್ ನೊಂದಿಗೆ ಬೆರೆಸಿ ನಿಯಮಿತವಾಗಿ ಸೇವಿಸುವುದರಿಂದ ದೇಹದಿಂದ ವಿಷ ಹೊರ ಹೋಗುತ್ತದೆ.
  • ಈ ಎಲೆಗಳ ಸೇವನೆಯು ಮೂತ್ರಪಿಂಡದ ಕಲ್ಲಿನ ಸಮಸ್ಯೆಗಳನ್ನು ಸಹ ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಅವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ, ಇದು ದೇಹದಲ್ಲಿನ ಸ್ವತಂತ್ರ ರಾಡಿಕಲ್ಗಳನ್ನು ಸಮತೋಲನಗೊಳಿಸುತ್ತದೆ.
  • ಕಬ್ಬಿಣಾಂಶದ ಕೊರತೆ ಇರುವವರು ದೊಡ್ಡಪತ್ರೆ ಎಲೆಗಳನ್ನು ಸೇವಿಸಬಹುದು. ಇದು ರಕ್ತಹೀನತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ದೊಡ್ಡಪತ್ರೆ ಎಲೆಗಳು ಮಹಿಳೆಯರು ಅನುಭವಿಸುವ ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಆದರೆ ಅತಿಯಾಗಿ ಸೇವನೆ ಮಾಡಬಾರದು.
  • ದೊಡ್ಡಪತ್ರೆ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿವೆ. ಅವು ಬಾಯಿಯ ಆರೋಗ್ಯವನ್ನು ಸುಧಾರಿಸುತ್ತವೆ. ಈ ಎಲೆಗಳನ್ನು ಅಗಿಯುವುದರಿಂದ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಕಡಿಮೆಯಾಗುತ್ತವೆ. ತಜ್ಞರು ಹೇಳುವಂತೆ ಅವು ಕುಳಿಗಳು, ಬಾಯಿಯ ದುರ್ವಾಸನೆ ಮತ್ತು ಇತರ ಬಾಯಿಯ ಸೋಂಕುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  • ದೊಡ್ಡಪತ್ರೆ ಎಲೆಗಳು ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು, ಪ್ರೋಟೀನ್ಗಳು ಮತ್ತು ಇತರ ಖನಿಜಗಳನ್ನು ಒಳಗೊಂಡಿರುತ್ತವೆ, ಇದು ದೇಹಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಶೀತ ಮತ್ತು ಕೆಮ್ಮಿನಂತಹ ಕಾಲೋಚಿತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು