AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ಈ ಎಲೆ ತಿನ್ನಿ ಹೃದಯದ ಆರೋಗ್ಯವೂ ಚೆನ್ನಾಗಿರುತ್ತೆ, ನಿಮ್ಮ ತ್ವಚೆಯೂ ಕಾಂತಿಯುತವಾಗುತ್ತೆ

ಕರಿಬೇವು ನಮ್ಮ ಆಹಾರಗಳಿಗೆ ಮತ್ತಷ್ಟು ರುಚಿ ನೀಡುವುದಲ್ಲದೆ, ನಮ್ಮ ಆರೋಗ್ಯಕ್ಕೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಅವುಗಳಲ್ಲಿರುವ ವಿವಿಧ ರೀತಿಯ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತ್ರವಲ್ಲ ಈ ಎಲೆಗಳು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಕೂಡ ಒದಗಿಸುತ್ತದೆ. ಹಾಗಾದರೆ ಕರಿಬೇವಿನ ಎಲೆಗಳ ಸೇವನೆಯಿಂದ ಯಾವ ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ? ಯಾವ ಸಮಸ್ಯೆ ಇರುವವರಿಗೆ ಇದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಪ್ರತಿನಿತ್ಯ ಈ ಎಲೆ ತಿನ್ನಿ ಹೃದಯದ ಆರೋಗ್ಯವೂ ಚೆನ್ನಾಗಿರುತ್ತೆ, ನಿಮ್ಮ ತ್ವಚೆಯೂ ಕಾಂತಿಯುತವಾಗುತ್ತೆ
Curry Leaves
ಪ್ರೀತಿ ಭಟ್​, ಗುಣವಂತೆ
|

Updated on: Jul 19, 2025 | 8:25 PM

Share

ಕರಿಬೇವಿನ ಎಲೆಗಳು (Curry leaves) ನೀವು ಮಾಡುವಂತಹ ಅಡುಗೆಗೆ ರುಚಿ ಮತ್ತು ಪರಿಮಳವನ್ನು ನೀಡುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದಕ್ಕಾಗಿಯೇ ಈ ಎಲೆಗಳನ್ನು ಹಲವಾರು ರೀತಿಯ ಭಕ್ಷ್ಯಗಳಲ್ಲಿ ಬಳಕೆ ಮಾಡಲಾಗುತ್ತದೆ. ಆದರೆ ನಿಮಗೆ ತಿಳಿದಿರಲಿ ಇದು ಕೇವಲ ಆಹಾರದ ರುಚಿ ದುಪ್ಪಟ್ಟು ಮಾಡುವುದು ಮಾತ್ರವಲ್ಲ ಇದರ ಸೇವನೆಯಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಕೂಡ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿರುವ ಆರೋಗ್ಯಕರ ಗುಣಗಳು ಹಲವಾರು ರೀತಿಯ ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಕರಿಬೇವಿನ ಎಲೆ ಅಥವಾ ಒಗ್ಗರಣೆ ಸೊಪ್ಪು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು ವಿಟಮಿನ್ ಎ, ಬಿ, ಸಿ, ಇ, ಕೆ ಹಾಗೂ ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮತ್ತು ನಾರಿನಾಂಶವನ್ನು ಒಳಗೊಂಡಿದೆ. ಹಾಗಾಗಿ ಈ ಎಲೆಗಳು ನಮ್ಮ ದೇಹಕ್ಕೆ ಸಂಪೂರ್ಣ ಪೋಷಣೆಯನ್ನು ಒದಗಿಸುತ್ತವೆ. ಹಾಗಾದರೆ ಕರಿಬೇವಿನ ಎಲೆಗಳ ಸೇವನೆಯಿಂದ ಯಾವ ರೀತಿಯ ಆರೋಗ್ಯ (Health) ಪ್ರಯೋಜನಗಳು ಸಿಗುತ್ತದೆ? ಯಾವ ಸಮಸ್ಯೆ ಇರುವವರಿಗೆ ಇದು ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಕರಿಬೇವಿನ ಎಲೆಯ ಪ್ರಯೋಜನ:

ಹೃದಯದ ಆರೋಗ್ಯ

ಕರಿಬೇವಿನ ಎಲೆಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಒಳ್ಳೆಯದು

ಈ ಎಲೆಗಳಲ್ಲಿರುವ ಫೈಬರ್ ಅಂಶವು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದಕ್ಕೆ ಸಹಾಯ ಮಾಡುತ್ತದೆ. ಜೊತೆಗೆ ಕರುಳಿನ ಆರೋಗ್ಯವನ್ನು ರಕ್ಷಿಸುವುದಲ್ಲದೆ, ಕಚ್ಚಾ ಆಹಾರದ ಜೀರ್ಣಕ್ರಿಯೆಗೂ ಬೆಂಬಲಿಸುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹಕ್ಕೆ ರಕ್ಷಣೆ ನೀಡುತ್ತದೆ ಮತ್ತು ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.

ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು

ವಿಟಮಿನ್ ಎ ಯಿಂದ ಸಮೃದ್ಧವಾಗಿರುವ ಕರಿಬೇವಿನ ಎಲೆಗಳು ಕಣ್ಣುಗಳಿಗೆ ಪ್ರಯೋಜನಕಾರಿ. ಅವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೃಷ್ಟಿ ಸುಧಾರಿಸುತ್ತದೆ.

ರಕ್ತಹೀನತೆ ಸಮಸ್ಯೆಗೆ ಮುಕ್ತಿ ನೀಡುತ್ತದೆ

ಈ ಎಲೆಗಳು ಕಬ್ಬಿಣ ಮತ್ತು ಫೋಲಿಕ್ ಆಮ್ಲವನ್ನು ಹೊಂದಿರುತ್ತವೆ, ಇದು ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ನೀಡುತ್ತದೆ.

ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ

ಕರಿಬೇವು ಉರಿಯೂತದ ಗುಣಗಳನ್ನು ಹೊಂದಿದ್ದು ಅದು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಉಸಿರಾಟದ ಸಮಸ್ಯೆಗಳು ಕಡಿಮೆ ಮಾಡುತ್ತದೆ. ಇದರಿಂದ ಶ್ವಾಸಕೋಶದ ಆರೋಗ್ಯ ಚೆನ್ನಾಗಿರುತ್ತದೆ.

ತೂಕ ಇಳಿಕೆಗೆ ಸಹಕಾರಿ

ಕರಿಬೇವು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ತೂಕ ಇಳಿಸಿಕೊಳ್ಳಲು ಬಯಸುವವರ ಆಹಾರದಲ್ಲಿ ಇದನ್ನು ಸೇವನೆ ಮಾಡಬೇಕು.

ಕೂದಲಿನ ಆರೋಗ್ಯಕ್ಕೆ ಉತ್ತಮ

ಕರಿಬೇವು ಬೀಟಾ- ಕ್ಯಾರೋಟಿನ್, ಪ್ರೋಟೀನ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಈ ಎಲೆಗಳು ಕೂದಲನ್ನು ಬಲವಾಗಿ ಮತ್ತು ಆರೋಗ್ಯಕರವಾಗಿಡುತ್ತವೆ.

ಇದನ್ನೂ ಓದಿ: ತೂಕ ಕಡಿಮೆ ಮಾಡಿಕೊಂಡು ಜೀರೋ ಫಿಗರ್ ಆಗ್ಬೇಕಾ? ಹಾಗಿದ್ರೆ ಪ್ರತಿನಿತ್ಯ ಈ ಗಿಡದ ಎರಡು ಎಲೆ ತಿನ್ನಿ

ಚರ್ಮಕ್ಕೆ ಹೊಳಪನ್ನು ನೀಡುತ್ತದೆ

ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮಕ್ಕೆ ಹೊಸ ಹೊಳಪನ್ನು ನೀಡುತ್ತದೆ. ಅವು ಸುಕ್ಕುಗಳು ಮತ್ತು ಮೊಡವೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ