AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾವಿನ ಹಣ್ಣುತಿಂದು ಗೊರಟೆ ಬಿಸಾಡುವ ಮುನ್ನ ಅದರ ಪ್ರಯೋಜನ ತಿಳಿದುಕೊಳ್ಳಿ

ಮಾವಿನ ಹಣ್ಣು ತಿಂದ ಬಳಿಕ ಅದರೊಳಗಿನ ಬೀಜ ಅಥವಾ ಗೊರಟೆಯನ್ನು ಸಾಮಾನ್ಯವಾಗಿ ಎಸೆಯುತ್ತಾರೆ. ಆದರೆ ಆರೋಗ್ಯ ತಜ್ಞರು ಈ ರೀತಿ ಮಾಡಬೇಡಿ ಎನ್ನುತ್ತಾರೆ. ಏಕೆಂದರೆ ಈ ಸಣ್ಣ ಬೀಜದಲ್ಲಿಯೇ ಹಲವಾರು ರೀತಿಯ ಪೋಷಕಾಂಶಗಳು ಮತ್ತು ಔಷಧೀಯ ಗುಣಗಳು ಅಡಕವಾಗಿದೆ. ಇದು ನಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ. ವಿಶೇಷವಾಗಿ, ಇದು ಮಧುಮೇಹ, ಜೀರ್ಣಕ್ರಿಯೆ ಮತ್ತು ಮೂಳೆ ಬಲಕ್ಕೆ ಸಹಾಯ ಮಾಡುತ್ತದೆ. ಹಾಗಾದರೆ ಗೊರಟೆಯಿಂದ ಸಿಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಮಾವಿನ ಹಣ್ಣುತಿಂದು ಗೊರಟೆ ಬಿಸಾಡುವ ಮುನ್ನ ಅದರ ಪ್ರಯೋಜನ ತಿಳಿದುಕೊಳ್ಳಿ
ಮಾವಿನ ಹಣ್ಣಿನೊಳಗಿರುವ ಗೊರಟೆಯ ಪ್ರಯೋಜನ
ಪ್ರೀತಿ ಭಟ್​, ಗುಣವಂತೆ
|

Updated on: Jun 03, 2025 | 3:00 PM

Share

ಹಣ್ಣುಗಳ ರಾಜ ಮಾವಿನಹಣ್ಣು (Mango). ಇದನ್ನು ತಿನ್ನುವುದಕ್ಕೆ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಮಕ್ಕಳಿಂದ ವಯಸ್ಕರ ವರೆಗೆ ಎಲ್ಲರಿಗೂ ಇಷ್ಟವಾಗುವ ಹಣ್ಣುಗಳಲ್ಲಿ ಇದಕ್ಕೆ ಅಗ್ರಸ್ಥಾನವಿದೆ. ಮಾವಿನ ಹಣ್ಣುಗಳು ರುಚಿ ನೀಡುವುದು ಮಾತ್ರವಲ್ಲ ಇದರ ಸೇವನೆಯಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು (Health benefits) ಪಡೆದುಕೊಳ್ಳಬಹುದು. ಆದರೆ ನಿಮಗೆ ಗೊತ್ತಿರಲಿ, ಮಾವಿನ ಹಣ್ಣು ಮಾತ್ರ ನಾವು ಬಿಸಾಡುವ ಅದರ ಬೀಜ ಅಥವಾ ಗೊರಟೆಯೂ (mango seed benefits) ಸಹ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿವೆ. ಅದಕ್ಕಾಗಿಯೇ ಆಯುರ್ವೇದ ತಜ್ಞರು ಮಾವಿನ ಕಾಯಿ ಅಥವಾ ಹಣ್ಣಿನ ಬೀಜಗಳನ್ನು ಆರೋಗ್ಯಕ್ಕೆ ಪರಿಣಾಮಕಾರಿ ಗಿಡಮೂಲಿಕೆ ಎಂದು ಪರಿಗಣಿಸುತ್ತಾರೆ. ಹಾಗಾದರೆ ಈ ಬೀಜಗಳು ಯಾವ ರೀತಿ ಉಪಯೋಗಕ್ಕೆ ಬರುತ್ತದೆ? ಹೇಗೆ ಬಳಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಮಾವಿನ ಹಣ್ಣಿನೊಳಗಿರುವ ಗೊರಟೆ ಅಥವಾ ಅದರ ಬೀಜವನ್ನು ಸಾಮಾನ್ಯವಾಗಿ ನಾವು ಎಸೆಯುತ್ತೇವೆ. ಆದರೆ ಇದರಿಂದ ತಯಾರಾಗುವ ಪುಡಿಯಲ್ಲಿ ಅದೆಷ್ಟೋ ಕಾಯಿಲೆಗಳನ್ನು ವಾಸಿ ಮಾಡುವ ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಅದಕ್ಕಾಗಿಯೇ ಇವುಗಳನ್ನು ಕಸದ ಬುಟ್ಟಿಗೆ ಬಿಸಾಡುವ ಮೊದಲು ಅವುಗಳ ಉಪಯೋಗವನ್ನು ತಿಳಿದುಕೊಳ್ಳಬೇಕಾಗುತ್ತದೆ. ಹಾಗಾದರೆ ಇದರಿಂದ ಸಿಗುವ ಪ್ರಯೋಜನಗಳೇನು? ಯಾವ ರೀತಿಯ ಆರೋಗ್ಯ ಸಮಸ್ಯೆಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

ಗೊರಟೆ ಪುಡಿಯ ಆರೋಗ್ಯ ಪ್ರಯೋಜನ;

  • ಮಾವಿನ ಹಣ್ಣಿನೊಳಗಿರುವ ಗೊರಟೆಯನ್ನು ಒಣಗಿಸಿ ಪುಡಿ ತಯಾರಿಸಲಾಗುತ್ತದೆ. ಈ ಪುಡಿಯ ಸೇವನೆಯಿಂದ ಹೃದಯರಕ್ತನಾಳದ ಕಾಯಿಲೆಗಳು ಮತ್ತು ಅಧಿಕ ರಕ್ತದೊತ್ತಡದ ಅಪಾಯ ಕಡಿಮೆಯಾಗುತ್ತದೆ.
  • ನಿಯಮಿತವಾಗಿ ಮಾವಿನ ಪುಡಿಯನ್ನು ತಿನ್ನುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹದಿಂದ ಬಳಲುತ್ತಿರುವವರಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ.
  • ಮಾವಿನ ಪುಡಿಯಲ್ಲಿರುವ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಅವು ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕುಗಳ ವಿರುದ್ಧ ರಕ್ಷಣೆ ನೀಡುತ್ತವೆ.
  • ಮಾವಿನ ಪುಡಿಯಲ್ಲಿರುವ ಸಕ್ರಿಯ ಸಂಯುಕ್ತಗಳು ಯಕೃತ್ತನ್ನು ಶುದ್ಧೀಕರಿಸುತ್ತವೆ ಮತ್ತು ಅದರ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತವೆ. ಪರಿಣಾಮವಾಗಿ, ಯಕೃತ್ತು ಬಲವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ತ್ಯಾಜ್ಯವನ್ನು ಸುಲಭವಾಗಿ ಹೊರಹಾಕುತ್ತದೆ.
  • ಮಾವಿನ ಪುಡಿಯಲ್ಲಿ ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್‌ನಂತಹ ಪ್ರಮುಖ ಖನಿಜಗಳಿವೆ. ಇವು ಮೂಳೆಗಳ ಆರೋಗ್ಯಕ್ಕೆ ಅತ್ಯಗತ್ಯ. ಈ ಖನಿಜಗಳು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತವೆ.
  • ಈ ಪುಡಿ ಮಕ್ಕಳ ಬೆಳವಣಿಗೆಗೆ ಹಾಗೂ ವಯಸ್ಕರಿಗೆ ತುಂಬಾ ಉಪಯುಕ್ತವಾಗಿದೆ. ಈ ಪುಡಿಯು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ ಎಂದು ಸಂಶೋಧನೆಯಿಂದಲೂ ತಿಳಿದು ಬಂದಿದೆ.
  • ಗೊರಟೆ ಪುಡಿ ಕೀಲು ನೋವು ಇರುವವರಿಗೆ ಪ್ರಯೋಜನಕಾರಿಯಾಗಿದೆ. ಹಾಗಾಗಿ ಇವುಗಳ ನಿಯಮಿತ ಸೇವನೆ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.
  • ಮಾವಿನ ಪುಡಿಯ ಸೇವನೆ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಈ ಪುಡಿಯಲ್ಲಿರುವ ನಾರಿನ ಅಂಶವು ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಅನಿಲದಂತಹ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಮಾವಿನ ಪುಡಿಯಿಂದ ಹೊರತೆಗೆಯಲಾದ ಎಣ್ಣೆ ಚರ್ಮಕ್ಕೆ ನೈಸರ್ಗಿಕ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಒಣ ಚರ್ಮವನ್ನು ಮೃದುಗೊಳಿಸುತ್ತದೆ. ಜೇನುತುಪ್ಪ ಅಥವಾ ಹಾಲಿನೊಂದಿಗೆ ಬೆರೆಸಿ ಫೇಸ್ ಪ್ಯಾಕ್ ಆಗಿ ಹಚ್ಚುವುದರಿಂದ ಚರ್ಮ ಕಾಂತಿಯುತವಾಗುತ್ತದೆ.

ಇದನ್ನೂ ಓದಿ: ನೀವು ಮಾವು ಪ್ರಿಯರೇ? ಹಾಗದರೆ ಈ ರೆಸಿಪಿ ಟ್ರೈ ಮಾಡಿ, ಒಂದು ವರ್ಷ ಇಟ್ಟರು ಏನು ಆಗಲ್ಲ!

ಇದನ್ನೂ ಓದಿ
Image
ಈ ಸಮಯದಲ್ಲಿ ಕಚ್ಚುವ ಸೊಳ್ಳೆಗಳಿಂದ ಡೆಂಘಿ ಬರಬಹುದು!
Image
ಆರೋಗ್ಯಕ್ಕೆ ಒಳ್ಳೆಯದು ಎಂದು ಈ ಬೀಜಗಳನ್ನು ಅತಿಯಾಗಿ ಸೇವಿಸಬೇಡಿ
Image
ಕೂದಲು ಉದುರುವುದನ್ನು ತಡೆಯಲು ರಾತ್ರಿ ಸಮಯದಲ್ಲಿ ಈ ರೀತಿ ಮಾಡಿ
Image
ದೇಹದ ಸರ್ವರೋಗಕ್ಕೂ ಹುಣಸೆ ಎಲೆ ಬ್ರಹ್ಮಸ್ತ್ರ

ಗೊರಟೆ ಪುಡಿ ಮಾಡುವುದು ಹೇಗೆ?

ಮಾವಿನ ಬೀಜಗಳನ್ನು ಸರಿಯಾಗಿ ಬಿಸಿಲಿನಲ್ಲಿ ಒಣಗಿಸಬೇಕು. ನಂತರ, ಅವುಗಳನ್ನು ಮಿಕ್ಸರ್‌ ಗೆ ಹಾಕಿ ಪುಡಿ ಮಾಡಿ ಇಟ್ಟುಕೊಳ್ಳಬಹುದು. ಬಳಿಕ ಈ ಪುಡಿಯನ್ನು ಚಹಾದೊಂದಿಗೆ ಬೆರೆಸಿ ಪ್ರತಿದಿನ ಸೇವಿಸಬಹುದು. ಅಥವಾ ಇದನ್ನು ಸ್ಮೂಥಿ ಮತ್ತು ಜ್ಯೂಸ್‌ಗಳಿಗೆ ಸೇರಿಸಬಹುದು. ಇದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಜೊತೆಗೆ ದೀರ್ಘಕಾಲೀನ ಪ್ರಯೋಜನಗಳನ್ನು ಕೂಡ ನೀಡುತ್ತದೆ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ