AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುತ್ತಿದ್ದೀರಾ? ಬೆಳಿಗ್ಗೆ ಎದ್ದು ತಪ್ಪದೆ ಈ ಕೆಲಸ ಮಾಡಿ

ಅಂಜೂರದ ಬಗ್ಗೆ ಅದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದಿರಬಹುದು. ಇದು ನಮ್ಮ ದೇಹಕ್ಕೆ ಅಗತ್ಯವಿರುವಂತಹ ಎಲ್ಲಾ ರೀತಿಯ ಪೋಷಕಾಂಶಗಳನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತದೆ. ಬಾದಾಮಿ ಮತ್ತು ವಾಲ್ನಟ್ ಗಳಂತೆ ಇದರಲ್ಲಿಯೂ ಪ್ರಯೋಜನಕಾರಿ ಗುಣಗಳಿವೆ. ಆಯುರ್ವೇದ ಮತ್ತು ಪೌಷ್ಟಿಕಾಂಶ ತಜ್ಞರು ಹೇಳುವ ಪ್ರಕಾರ, ಇವುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಿರ್ದಿಷ್ಟ ಪ್ರಯೋಜನಗಳು ಸಿಗುತ್ತದೆ. ಹಾಗಾದರೆ ಇದರಿಂದ ನಮ್ಮ ಆರೋಗ್ಯಕ್ಕಿರುವ ಪ್ರಯೋಜನಗಳೇನು? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುತ್ತಿದ್ದೀರಾ? ಬೆಳಿಗ್ಗೆ ಎದ್ದು ತಪ್ಪದೆ ಈ ಕೆಲಸ ಮಾಡಿ
Unlock The Power Of Soaked Figs
ಪ್ರೀತಿ ಭಟ್​, ಗುಣವಂತೆ
|

Updated on: Sep 02, 2025 | 9:37 AM

Share

ಬಾದಾಮಿ ಮತ್ತು ವಾಲ್ನಟ್ ನಂತಹ ಒಣ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಈ ಆರೋಗ್ಯಕರ ಒಣ ಹಣ್ಣುಗಳ ಪಟ್ಟಿಯಲ್ಲಿ ಅಂಜೂರವನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ಕೆಲವರು ಮರೆತು ಬಿಡುತ್ತಾರೆ. ಆದರೆ ಈ ಅಂಜೂರ (figs) ನಮ್ಮ ದೇಹಕ್ಕೆ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಮಾತ್ರವಲ್ಲ ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ. ಇವುಗಳಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಅಂಜೂರವನ್ನು ನೀವು ಯಾವುದೇ ರೀತಿಯಲ್ಲಿಯೂ ಸೇವನೆ ಮಾಡಬಹುದು. ಆದರೆ ಆಯುರ್ವೇದ ಮತ್ತು ಪೌಷ್ಟಿಕಾಂಶ ತಜ್ಞರು ಹೇಳುವ ಪ್ರಕಾರ, ಇವುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಿರ್ದಿಷ್ಟ ಪ್ರಯೋಜನಗಳು ಸಿಗುತ್ತದೆ. ಒಣದ್ರಾಕ್ಷಿಯಂತೆಯೇ, ಇದರ ಸೇವನೆ ಕೂಡ, ಕೆಲವೇ ದಿನಗಳಲ್ಲಿ ನಿಮ್ಮ ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆಯನ್ನು ನೀವು ಗಮನಿಸುವಂತೆ ಮಾಡುತ್ತದೆ. ಹಾಗಾದರೆ ಇದರಿಂದ ನಮ್ಮ ಆರೋಗ್ಯಕ್ಕಿರುವ ಪ್ರಯೋಜನಗಳೇನು? ಯಾಕೆ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ

ಅಂಜೂರವು ಪೊಟ್ಯಾಸಿಯಮ್‌ನಿಂದ ಸಮೃದ್ಧವಾಗಿದ್ದು ಇವುಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಂಜೂರದ ಹಣ್ಣು ಕ್ಲೋರೊಜೆನಿಕ್ ಆಮ್ಲವನ್ನು ಸಹ ಹೊಂದಿರುತ್ತದೆ, ಇದು ಕೂಡ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಎಂಬುದು ಹಲವಾರು ಅಧ್ಯಯನಗಳಿಂದ ಸಾಬೀತಾಗಿದೆ. ಹೆಚ್ಚುವರಿಯಾಗಿ, ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ ಟೈಪ್ -2 ಮಧುಮೇಹ, ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಕೂಡ ಸಹಾಯ ಮಾಡುತ್ತದೆ.

ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಕಾರಿ

ಅಂಜೂರವು ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ಮಾತ್ರವಲ್ಲ ಕರುಳಿನ ಆರೋಗ್ಯ ಕಾಪಾಡಿಕೊಳ್ಳುವುದಕ್ಕೂ ಅಂಜೂರ ಸೇವನೆ ಮಾಡುವುದಕ್ಕೆ ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ಮಲಬದ್ಧತೆಯಿಂದ ಬಳಲುತ್ತಿರುವ ರೋಗಿಗಳು ನೆನೆಸಿದ ಅಂಜೂರವನ್ನು ತಿನ್ನುವುದರಿಂದ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ.

ತೂಕವನ್ನು ಕಡಿಮೆ ಮಾಡುತ್ತದೆ

ಇತ್ತೀಚಿನ ದಿನಗಳಲ್ಲಿ, ಅನೇಕರು ತೂಕ ಹೆಚ್ಚಾಗುವುದರ ಬಗ್ಗೆ ಹೆಚ್ಚು ಚಿಂತೆ ಮಾಡುತ್ತಾರೆ. ಅವರ ತೂಕ ಇಳಿಸಿಕೊಳ್ಳಲು ಜಿಮ್‌ಗೆ ಹೋಗುವುದರಿಂದ ಹಿಡಿದು ಆಹಾರ ಕ್ರಮವನ್ನು ಅನುಸರಿಸುವ ವರೆಗೆ ವಿವಿಧ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ. ಆದರೆ ಇವುಗಳ ಬದಲು ಖಾಲಿ ಹೊಟ್ಟೆಯಲ್ಲಿ ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದರಿಂದ ಈ ಸಮಸ್ಯೆಗೆ ಸುಲಭವಾಗಿ ಪರಿಹಾರ ಪಡೆಯಬಹುದು.

ಮೂಳೆಗಳನ್ನು ಬಲಪಡಿಸುತ್ತದೆ

ಅಂಜೂರವು ಕ್ಯಾಲ್ಸಿಯಂ ಅಂಶಗಳಿಂದ ಸಮೃದ್ಧವಾಗಿದ್ದು, ಅಂಜೂರದ ಹಣ್ಣುಗಳ ಸೇವನೆಯು ಮೂಳೆಗಳನ್ನು ಆರೋಗ್ಯಕರವಾಗಿ ಮತ್ತು ಬಲವಾಗಿಡಲು ಸಹಾಯ ಮಾಡುತ್ತದೆ. ಮೂಳೆಗಳನ್ನು ಬಲಪಡಿಸಲು ಹಾಲು ಎಷ್ಟು ಪ್ರಯೋಜನಕಾರಿಯೋ ಅಷ್ಟೇ ಅಂಜೂರವು ಪ್ರಯೋಜನಕಾರಿಯಾಗಿದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆನೆಸಿದ ಅಂಜೂರವನ್ನು ತಿನ್ನುವುದರಿಂದ ಮೂಳೆಗಳು ಬಲಗೊಳ್ಳುತ್ತವೆ.

ಇದನ್ನೂ ಓದಿ: ಈ ಒಣಹಣ್ಣನ್ನು ನೆನೆಸಿಟ್ಟು ತಿಂದರೆ ತೂಕ ಇಳಿಯೋದು ಗ್ಯಾರಂಟಿ

ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ

ಅಂಜೂರ ಹಣ್ಣುಗಳಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್ ಇರುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಇದರಲ್ಲಿರುವ ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಬರುವ ಅಪಾಯ ಕೂಡ ಕಡಿಮೆಯಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!