ನಿಂಬೆಹಣ್ಣಿಗಿಂತ ಒಣಗಿದ ನಿಂಬೆ ಒಳ್ಳೆಯದು! ಎಸೆಯುವ ಮುನ್ನ ಯೋಚಿಸಿ

ಒಣಗಿದ ನಿಂಬೆಹಣ್ಣಿನಲ್ಲಿ ಅನೇಕ ರೀತಿಯ ಪೋಷಕಾಂಶಗಳಿರುವುದರಿಂದ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ನಿಂಬೆಹಣ್ಣುಗಳು ದೇಹಕ್ಕೆ ಅಗತ್ಯವಿರುವ ಜೀವಸತ್ವಗಳು, ಖನಿಜಗಳು, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತವೆ. ಜೊತೆಗೆ ಈ ಪೋಷಕಾಂಶಗಳು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಕೂಡ ತಡೆಗಟ್ಟಲು ಮತ್ತು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ನಿಂಬೆಹಣ್ಣಿಗಿಂತ ಒಣಗಿದ ನಿಂಬೆ ಒಳ್ಳೆಯದು! ಎಸೆಯುವ ಮುನ್ನ ಯೋಚಿಸಿ
ಸಾಂದರ್ಭಿಕ ಚಿತ್ರ
Image Credit source: Getty Images

Updated on: May 08, 2025 | 3:00 PM

ನಿಂಬೆಹಣ್ಣು (Lemons) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಒಣಗಿದ ನಿಂಬೆ (Dried Lemons) ತಾಜಾ ನಿಂಬೆಗಿಂತ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಒಣಗಿದ ನಿಂಬೆಹಣ್ಣುಗಳು ವಿಟಮಿನ್ ಸಿ (vitamin C), ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಫೈಬರ್, ವಿಟಮಿನ್ ಬಿ 12 ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ. ಈ ಪೋಷಕಾಂಶಗಳು ದೇಹದ ಆರೋಗ್ಯವನ್ನು ಕಾಪಾಡುತ್ತದೆ. ಅದಕ್ಕಾಗಿಯೇ ಮನೆಯಲ್ಲಿ ನಿಂಬೆಹಣ್ಣುಗಳನ್ನು ಉಪಯೋಗಿಸಿ ಅದನ್ನು ಎಸೆಯುತ್ತಿದ್ದರೆ ಇಂದೇ ಬಿಟ್ಟು ಬಿಡಿ. ಏಕೆಂದರೆ ಒಣಗಿದ ನಿಂಬೆ ಹೆಚ್ಚು ಹೆಚ್ಚು ಆರೋಗ್ಯ (Health) ಪ್ರಯೋಜನಗಳನ್ನು ನೀಡುತ್ತದೆ. ಹಾಗದರೆ ಇದು ಯಾವ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ.

  • ಒಣ ನಿಂಬೆಯಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಜೀರ್ಣ ಮತ್ತು ಕರುಳಿನ ಅಸ್ವಸ್ಥತೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಜೊತೆಗೆ ಮಲಬದ್ಧತೆ ಅಥವಾ ಇತರ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಒಣ ನಿಂಬೆಯಲ್ಲಿರುವ ವಿಟಮಿನ್ ಸಿ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ವೈರಸ್ ಗಳು ಮತ್ತು ಬ್ಯಾಕ್ಟೀರಿಯಾಗಳಂತಹ ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತದೆ ಮತ್ತು ಪರಿಸರದಲ್ಲಿನ ಬದಲಾವಣೆಗಳನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಸಹ ಒದಗಿಸುತ್ತದೆ. ನಿಯಮಿತವಾಗಿ ಸಣ್ಣ ಪ್ರಮಾಣದ ಒಣ ನಿಂಬೆಹಣ್ಣುಗಳನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ.
  • ಒಣಗಿದ ನಿಂಬೆಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚಾಗಿರುತ್ತವೆ. ಈ ಅಂಶಗಳು ನಮ್ಮ ಚರ್ಮಕ್ಕೆ ಒಳ್ಳೆಯದು. ಹಾಗಾಗಿ ಇದನ್ನು ನಿಯಮಿತವಾಗಿ ಬಳಸುವುದರಿಂದ ಚರ್ಮ ಸ್ವಚ್ಛ ಮತ್ತು ಹೊಳೆಯುವಂತಾಗುತ್ತದೆ ಜೊತೆಗೆ ಚರ್ಮದ ಮೇಲಿನ ಕಲೆಗಳು ಮಾಯವಾಗುತ್ತದೆ.
  • ಒಣಗಿದ ನಿಂಬೆಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇವುಗಳಲ್ಲಿರುವ ಪೊಟ್ಯಾಸಿಯಮ್ ಅಂಶ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.
  • ಒಣಗಿದ ನಿಂಬೆಯಲ್ಲಿರುವ ಫೈಬರ್ ಅಂಶ ದೇಹಕ್ಕೆ ಶಕ್ತಿ ನೀಡುವುದಲ್ಲದೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ, ಇದರಿಂದಾಗಿ ಹಸಿವು ಕಡಿಮೆಯಾಗುತ್ತದೆ. ಅತಿಯಾಗಿ ತಿನ್ನುವ ಅಭ್ಯಾಸ ಕಡಿಮೆಯಾಗುತ್ತದೆ.
  • ಒಣಗಿದ ನಿಂಬೆ ಹಣ್ಣುಗಳು ನೈಸರ್ಗಿಕ ನಿರ್ವಿಷಕವಾಗಿ ಕಾರ್ಯನಿರ್ವಹಿಸುತ್ತವೆ. ದೇಹದಿಂದ ವಿಷವನ್ನು ಹೊರಹಾಕುವ ಮೂಲಕ ದೇಹವನ್ನು ಶುದ್ಧೀಕರಿಸುವ ಪ್ರಕ್ರಿಯೆಗೆ ಸಹಾಯ ಮಾಡುತ್ತವೆ. ಜೊತೆಗೆ ಯಕೃತ್ತಿನ ಆರೋಗ್ಯಕ್ಕೆ ಅಗತ್ಯವಾದ ಜೀವಸತ್ವ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ರಾಸಾಯನಿಕಗಳನ್ನು ಒದಗಿಸುತ್ತವೆ.

ಯಾವ ರೀತಿ ಸೇವನೆ ಮಾಡಬೇಕು?

ಒಣಗಿದ ನಿಂಬೆಯನ್ನು ನೇರವಾಗಿ ಸೇವನೆ ಮಾಡಬಹುದು ಅಥವಾ ಚಾಟ್ ಗಳಲ್ಲಿ ಸೇವನೆ ಮಾಡಬಹುದು ಅಥವಾ ಇನ್ನಿತರ ಭಕ್ಷ್ಯಗಳಲ್ಲಿ ಸೇರಿಸಿಕೊಳ್ಳುವ ಮೂಲಕ ಸೇವನೆ ಮಾಡಬಹುದು. ಇದನ್ನು ನೀವು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ, ನಿಮ್ಮ ಆರೋಗ್ಯವನ್ನು ಮತ್ತಷ್ಟು ಬಲಪಡಿಸಿಕೊಳ್ಳಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಇದನ್ನೂ ಓದಿ
ಮಾಂಸಾಹಾರ ಸೇವನೆ ಮಾಡಲು ಸಾಧ್ಯವಾಗದಿದ್ದರೆ ಈ ಹಣ್ಣನ್ನು ತಿನ್ನಿ
ಒಂದು ಗ್ಲಾಸ್​​​ ಬಿಸಿ ನೀರು ನಿಮ್ಮ ಜೀವನವನ್ನೇ ಬದಲಾವಣೆ ಮಾಡುತ್ತೆ
ಬೆಳಿಗ್ಗೆ ಅಥವಾ ರಾತ್ರಿ ಯಾವ ಸಮಯದಲ್ಲಿ ಸ್ನಾನ ಮಾಡುವುದು ಉತ್ತಮ
ಯಾವುದೇ ರೀತಿಯ ಕ್ಯಾನ್ಸರ್‌ ಬರಬಾರದು ಎಂದರೆ ಈ ಹಣ್ಣನ್ನು ತಿಂದು ನೋಡಿ

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ