ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
Edited By:

Updated on: Feb 05, 2025 | 12:27 PM

ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಈ ಸೋಂಕು ಸಾಮಾನ್ಯವಾಗಿ ಮಹಿಳೆಯರಲ್ಲಿ, ಸ್ವಲ್ಪ ಮಟ್ಟಿಗೆ ಪುರುಷರಲ್ಲಿಯೂ ಕಂಡುಬರುತ್ತವೆ. ಆದರೆ ಈಗ ಬಾಲಕಿಯರಲ್ಲಿಯೂ ಇಂತಹ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು ಆರೋಗ್ಯ ತಜ್ಞರು ಇದನ್ನು ನಿರ್ಲಕ್ಷಿಸಬಾರದು ಎಂದಿದ್ದಾರೆ. ಸಾಮಾನ್ಯವಾಗಿ ಈ ಸಮಸ್ಯೆ ಸೋಂಕಿನಿಂದಾಗಿ ಹರಡುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಇದು ಇತರ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಮೂತ್ರನಾಳದ ಸೋಂಕಿನ ಸಮಸ್ಯೆ ಏಕೆ ಹೆಚ್ಚುತ್ತಿದೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ.

ಮೂತ್ರ ಸೋಂಕಿನ ಪ್ರಕರಣಗಳ ಹೆಚ್ಚಳಕ್ಕೆ ಮುಖ್ಯ ಕಾರಣಗಳು ಇಲ್ಲಿವೆ:

1. ನೀರಿನ ಕೊರತೆ: ಶಾಲೆಗೆ ಹೋಗುವ ಮಕ್ಕಳು ಸಾಮಾನ್ಯವಾಗಿ ಶಾಲೆಯಲ್ಲಿ ಹೆಚ್ಚು ನೀರು ಕುಡಿಯುವುದಿಲ್ಲ ಈ ಕಾರಣದಿಂದಾಗಿ, ರೋಗ ಹೆಚ್ಚುತ್ತಿದೆ.

2. ದೀರ್ಘಕಾಲದ ವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು: ಶಾಲೆಗೆ ಹೋಗುವ ಮಕ್ಕಳು ದೀರ್ಘಕಾಲದ ವರೆಗೆ ಮೂತ್ರ ಹಿಡಿದಿಟ್ಟುಕೊಳ್ಳುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಮಕ್ಕಳು ಈ ರೀತಿ ಮಾಡುವುದರಿಂದ ಮೂತ್ರಕೋಶದಲ್ಲಿ ಬ್ಯಾಕ್ಟೀರಿಯಾ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.

3. ಕೊಳಕು ಶೌಚಾಲಯಗಳ ಬಳಕೆ: ಸಾಮಾನ್ಯವಾಗಿ ಶಾಲೆಗಳಲ್ಲಿ ಹಲವಾರು ಮಕ್ಕಳು ಒಂದೇ ಶೌಚಾಲಯಗಳನ್ನು ಬಳಕೆ ಮಾಡುವುದರಿಂದ ಕೆಲವೊಮ್ಮೆ ಅದು ಸ್ವಚ್ಛವಾಗಿರುವುದಿಲ್ಲ. ಹಾಗಾಗಿ ಆ ಕೊಳಕು ಆಸನಗಳನ್ನು ಬಳಸುವುದರಿಂದಲೂ ಮೂತ್ರದ ಸೋಂಕಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ನಿಮ್ಮ ಹೃದಯ ಆರೋಗ್ಯವಾಗಿರಬೇಕು ಎಂದರೆ ಈ ಸಲಹೆಗಳನ್ನು ಅನುಸರಿಸಿ

ಸೋಂಕಿನ ಲಕ್ಷಣಗಳು:

* ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ಉರಿಯೂತ.

* ಆಗಾಗ ಮೂತ್ರ ವಿಸರ್ಜನೆ ಮಾಡುವುದು.

* ಮೂತ್ರದಲ್ಲಿ ರಕ್ತ ಕಂಡುಬರುವುದು.

* ಜ್ವರ ಮತ್ತು ಆಯಾಸ.

* ಹೊಟ್ಟೆಯಲ್ಲಿ ನೋವು.

ಇದನ್ನು ತಡೆಯಲು ಏನು ಮಾಡಬೇಕು?

ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಉತ್ತಮ ಅಭ್ಯಾಸಗಳನ್ನು ಕಲಿಸಬೇಕು ಎಂದು ವೈದ್ಯರು ಹೇಳುತ್ತಾರೆ. ಅವರು ದಿನಕ್ಕೆ ಸರಿಯಾದ ಪ್ರಮಾಣದ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಪ್ರತಿನಿತ್ಯ ಈ ಬಗ್ಗೆ ವಿಚಾರಿಸಬೇಕು. ಶೌಚಾಲಯವನ್ನು ಹೇಗೆ ಬಳಸಬೇಕೆಂದು ಅವರಿಗೆ ಕಲಿಸಬೇಕು. ಸೂಕ್ಷ್ಮ ಪ್ರದೇಶಗಳ ಸ್ವಚ್ಛತೆಯ ಬಗ್ಗೆಯೂ ಅವರಿಗೆ ವಿವರವಾಗಿ ತಿಳಿ ಹೇಳಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Wed, 5 February 25

Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us