AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಹೆಚ್ಚಾಗುವುದಕ್ಕೆ ಕಾರಣವೇನು? ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ

ಗರ್ಭಾವಸ್ಥೆ ಎನ್ನುವಂತದ್ದು ಒಂದು ಸುಂದರವಾದ ಭಾವನೆ, ಆದರೆ ಮಹಿಳೆಯರಿಗೆ ಇದು ಸವಾಲಿನ ದಿನಗಳು ಆಗಿರುತ್ತವೆ ಎಂಬುದನ್ನು ಮರೆಯಬಾರದು. ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ಹಲವು ಬದಲಾವಣೆಗಳಾಗುತ್ತವೆ, ಅವುಗಳಲ್ಲಿ ಒಂದು ಯುಟಿಐ, ಅಂದರೆ ಮೂತ್ರದ ಸೋಂಕು. ಹಾಗಾದರೆ ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಮೂತ್ರದ ಸೋಂಕಿನ ಅಪಾಯ ಏಕೆ ಹೆಚ್ಚಾಗುತ್ತದೆ ಎಂಬುದನ್ನು ಮತ್ತು ಅದನ್ನು ತಡೆಗಟ್ಟಲು ಯಾವ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಹೆಚ್ಚಾಗುವುದಕ್ಕೆ ಕಾರಣವೇನು? ಇದನ್ನು ತಡೆಗಟ್ಟಲು ಏನು ಮಾಡಬೇಕು ತಿಳಿದುಕೊಳ್ಳಿ
Uti During PregnancyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 27, 2026 | 9:03 PM

Share

ಗರ್ಭಾವಸ್ಥೆ ಮಹಿಳೆಯ ಜೀವನದ ಅತ್ಯಂತ ವಿಶೇಷ ಹಂತವಾಗಿದ್ದರೂ, ಈ ಸಮಯದಲ್ಲಿ ದೇಹದಲ್ಲಿ ಹಲವು ಬದಲಾವಣೆಗಳು ಸಂಭವಿಸುತ್ತವೆ. ಅವುಗಳಲ್ಲಿ ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್ (UTI) ಕೂಡ ಒಂದು. ತಜ್ಞರ ಪ್ರಕಾರ, ಗರ್ಭಿಣಿಯರಲ್ಲಿ ಯೂರಿನ್ ಇನ್ಫೆಕ್ಷನ್ ಕಾಣಿಸಿಕೊಳ್ಳುವುದು ಸಾಮಾನ್ಯವಾದರೂ ಅದನ್ನು ನಿರ್ಲಕ್ಷಿಸುವುದು ಅಪಾಯಕಾರಿಯಾಗಿದೆ. ಸರ್ ಗಂಗಾರಾಮ್ ಆಸ್ಪತ್ರೆಯ ತಜ್ಞೆ ಡಾ. ಆಭಾ ಮಜುಂದಾರ್ ಅವರು ಹೇಳುವ ಪ್ರಕಾರ, ಗರ್ಭಧಾರಣೆಯ ಸಮಯದಲ್ಲಿ ದೇಹದಲ್ಲಿ ಪ್ರೊಜೆಸ್ಟೆರೋನ್ ಹಾರ್ಮೋನ್ ಪ್ರಮಾಣ ಹೆಚ್ಚಾಗುತ್ತದೆ. ಇದು ಗರ್ಭಾಶಯದ ಜೊತೆಗೆ ಯೂರಿನರಿ ಸಿಸ್ಟಂನನ್ನೂ ಸಡಿಲಗೊಳಿಸುತ್ತದೆ. ಪರಿಣಾಮವಾಗಿ ಮೂತ್ರವು ಮೂತ್ರಾಶಯದಲ್ಲಿ ಹೆಚ್ಚು ಸಮಯ ಉಳಿಯಬಹುದು ಮತ್ತು ಸಂಪೂರ್ಣವಾಗಿ ಹೊರಬರದೇ ಇರುವ ಸಾಧ್ಯತೆ ಇರುತ್ತದೆ.

ಇದರ ಜೊತೆಗೆ ಗರ್ಭಾಶಯದ ಗಾತ್ರ ಹೆಚ್ಚಾದಂತೆ ಯೂರಿನರಿ ಮಾರ್ಗದ ಮೇಲೆ ಒತ್ತಡ ಹೆಚ್ಚಾಗಿ ಮೂತ್ರದ ಹರಿವು ನಿಧಾನಗೊಳ್ಳುತ್ತದೆ. ಗರ್ಭಿಣಿಯರ ಮೂತ್ರದಲ್ಲಿ ಸಕ್ಕರೆ ಮತ್ತು ಅಮಿನೋ ಆಮ್ಲಗಳ ಪ್ರಮಾಣವೂ ಸ್ವಲ್ಪ ಹೆಚ್ಚಾಗುವುದರಿಂದ ಬ್ಯಾಕ್ಟೀರಿಯಾ ಬೆಳೆಯಲು ಅನುಕೂಲವಾಗುತ್ತದೆ. ಇದರಿಂದ ಯೂರಿನ್ ಇನ್ಫೆಕ್ಷನ್ ಅಪಾಯ ಹೆಚ್ಚುತ್ತದೆ.

ಯೂರಿನ್ ಇನ್ಫೆಕ್ಷನ್ ಲಕ್ಷಣಗಳು:

  • ಮೂತ್ರ ವಿಸರ್ಜನೆ ವೇಳೆ ಉರಿ ಅಥವಾ ನೋವು
  • ಪದೇಪದೇ ಮೂತ್ರ ಬರುವುದು
  • ಹೊಟ್ಟೆ ಕೆಳಭಾಗ ಮತ್ತು ಬೆನ್ನು ನೋವು
  • ಗಾಢ ಹಳದಿ ಬಣ್ಣದ ಮೂತ್ರ
  • ದುರ್ವಾಸನೆ
  • ಕೆಲವೊಮ್ಮೆ ಜ್ವರ ಅಥವಾ ನಡುಕ

ಇದನ್ನೂ ಓದಿ: ಯೂರಿನ್ ಇನ್ಫೆಕ್ಷನ್ ಯಾವಾಗ ಅಪಾಯಕಾರಿಯಾಗಬಹುದು ಗೊತ್ತಾ? ಈ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಗರ್ಭಿಣಿಯರು ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

  • ಹೆಚ್ಚು ನೀರು ಕುಡಿಯಬೇಕು
  • ಕಲ್ಲಂಗಡಿ, ಖರ್ಬೂಜಾ ಮೊದಲಾದ ನೀರಿನಾಂಶ ಹೆಚ್ಚಿರುವ ಹಣ್ಣುಗಳನ್ನು ಸೇವಿಸಬೇಕು
  • ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು
  • ಸಕ್ಕರೆ ಮತ್ತು ಸಿಹಿ ಪದಾರ್ಥಗಳ ಸೇವನೆ ಕಡಿಮೆ ಮಾಡಬೇಕು
  • ಮೂತ್ರವನ್ನು ಹೆಚ್ಚು ಸಮಯ ತಡೆಹಿಡಿಯಬಾರದು
  • ಪ್ರತಿನಿತ್ಯ ಹತ್ತಿಯ ಬಟ್ಟೆ ಧರಿಸುವುದು ಉತ್ತಮ

ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಯೂರಿನ್ ಇನ್ಫೆಕ್ಷನ್ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್