AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin B12 Foods: ಈ ತರಕಾರಿಗಳನ್ನು ಸೇವನೆ ಮಾಡಿದರೆ ದೇಹದಲ್ಲಿ ವಿಟಮಿನ್ ಬಿ 12 ಹೆಚ್ಚಾಗುತ್ತೆ

ವಿಟಮಿನ್ ಬಿ 12 ಕೊರತೆಯು ದೇಹದಲ್ಲಿ ಇತರ ಜೀವಸತ್ವಗಳು ಮತ್ತು ಕಬ್ಬಿಣದ ಕೊರತೆಗೆ ಕಾರಣವಾಗಬಹುದು. ಒಂದು ವೇಳೆ ಈ ಪ್ರಮುಖ ಪೋಷಕಾಂಶಗಳಲ್ಲಿ ಕೊರತೆ ಎದುರಾದರೆ ದೇಹದ ನರಮಂಡಲಕ್ಕೆ ಸಂಬಂಧಿಸಿದ ತೊಂದರೆಗಳು ಎದುರಾಗಬಹುದು ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ. ಜೊತೆಗೆ ಇದು ರಕ್ತಹೀನತೆ, ನರಕ್ಕೆ ಸಂಬಂಧಿಸಿದ ಸಮಸ್ಯೆ ಮತ್ತು ಮೂಳೆ ಹಾಗೂ ಸ್ನಾಯುಗಳ ದೌರ್ಬಲ್ಯಕ್ಕೆ ಕಾರಣವಾಗಬಹುದು. ಇದನ್ನು ತಡೆಯಲು ಚಳಿಗಾಲದಲ್ಲಿ ಲಭ್ಯವಿರುವ ಕೆಲವು ತರಕಾರಿಗಳನ್ನು ಸೇವನೆ ಮಾಡುವುದರಿಂದ ಈ ಕೊರತೆಯನ್ನು ನಿವಾರಿಸಬಹುದು.

Vitamin B12 Foods: ಈ ತರಕಾರಿಗಳನ್ನು ಸೇವನೆ ಮಾಡಿದರೆ ದೇಹದಲ್ಲಿ ವಿಟಮಿನ್ ಬಿ 12 ಹೆಚ್ಚಾಗುತ್ತೆ
Vitamin B12 Foods For Vegetarians
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 14, 2025 | 3:09 PM

Share

ಆರೋಗ್ಯವೇ ಭಾಗ್ಯ ಎಂಬ ಮಾತು ಅಕ್ಷರಶಃ ನಿಜ. ಆದರೆ ಆರೋಗ್ಯ ಕಾಪಾಡಿಕೊಳ್ಳಲು ಸತತ ಪ್ರಯತ್ನ ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ನಮ್ಮ ಈಗೀನ ಜೀವನಶೈಲಿಯಲ್ಲಿ ದೇಹವನ್ನು ರೋಗಗಳಿಂದ ರಕ್ಷಿಸಿಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಹಾಗಾಗಿ ನಮ್ಮ ದಿನನಿತ್ಯದ ಆಹಾರ ಪದ್ದತಿಯಲ್ಲಿ ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳನ್ನು ನೀಡಬೇಕಾಗುತ್ತದೆ. ಜೊತೆಗೆ ಅದರಲ್ಲಿ ಹೇರಳವಾದ ಜೀವಸತ್ವಗಳು, ಖನಿಜಗಳು ಮತ್ತು ಕ್ಯಾಲ್ಸಿಯಂ ಅನ್ನು ಒಳಗೊಂಡಿರಬೇಕು. ನಿಮಗೆ ತಿಳಿದಿರಬಹುದು, ಜೀವಸತ್ವಗಳು ಅತ್ಯಂತ ಪ್ರಮುಖ ಪೋಷಕಾಂಶಗಳಾಗಿವೆ, ಅವುಗಳ ಕೊರತೆಯು ಅನೇಕ ರೀತಿಯ ರೋಗಗಳಿಗೆ ಕಾರಣವಾಗಬಹುದು. ಅದರಲ್ಲಿಯೂ, ಇತರ ಜೀವಸತ್ವಗಳಿಗೆ ಹೋಲಿಸಿದರೆ ವಿಟಮಿನ್ ಬಿ 12 ಅತ್ಯಂತ ಪ್ರಮುಖ ಅಂಶವೆಂದು ಪರಿಗಣಿಸಲಾಗಿದೆ. ಹಾಗಾದರೆ ಈ ವಿಟಮಿನ್ ಕೊರತೆಯಾದರೆ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ? ಅದನ್ನು ತಡೆಯಲು ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಟಮಿನ್ ಬಿ 12 ಪೋಷಕಾಂಶವನ್ನು ‘ಕೋಬಾಲಾಮೈನ್’ ಎಂದೂ ಕೂಡ ಕರೆಯಲಾಗುತ್ತದೆ. ಸಾಮಾನ್ಯವಾಗಿ ವಿಟಮಿನ್ ಬಿ 12 ಕೊರತೆಯು ದೇಹದಲ್ಲಿ ಇತರ ಜೀವಸತ್ವಗಳು ಮತ್ತು ಕಬ್ಬಿಣದ ಕೊರತೆಗೆ ಕಾರಣವಾಗಬಹುದು. ಒಂದು ವೇಳೆ ಈ ಪ್ರಮುಖ ಪೋಷಕಾಂಶಗಳಲ್ಲಿ ಕೊರತೆ ಎದುರಾದರೆ ದೇಹದ ನರಮಂಡಲಕ್ಕೆ ಸಂಬಂಧಿಸಿದ ತೊಂದರೆಗಳು ಎದುರಾಗಬಹುದು ಎಂದು ತಜ್ಞರು ಎಚ್ಚರಿಕೆಯನ್ನು ನೀಡುತ್ತಾರೆ. ಜೊತೆಗೆ ಇದು ರಕ್ತಹೀನತೆ, ನರಕ್ಕೆ ಸಂಬಂಧಿಸಿದ ಸಮಸ್ಯೆ ಮತ್ತು ಮೂಳೆ ಹಾಗೂ ಸ್ನಾಯುಗಳ ದೌರ್ಬಲ್ಯಕ್ಕೆ ಕಾರಣವಾಗಬಹುದು. ಇದನ್ನು ತಡೆಯಲು ಚಳಿಗಾಲದಲ್ಲಿ ಲಭ್ಯವಿರುವ ಕೆಲವು ತರಕಾರಿಗಳನ್ನು ಸೇವನೆ ಮಾಡುವುದರಿಂದ ಈ ಕೊರತೆಯನ್ನು ನಿವಾರಿಸಬಹುದು.

ಇದನ್ನೂ ಓದಿ: ರೀಲ್ಸ್​ಗೆ ಅಡಿಕ್ಟ್​ ಆಗಿದ್ದೀರಾ? ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು

ಪಾಲಕ್:

ಸಾಮಾನ್ಯವಾಗಿ ಚಳಿಗಾಲದಲ್ಲಿ ಕಂಡು ಬರುವ ಸಾಮಾನ್ಯ ತರಕಾರಿಗಳಲ್ಲಿ ಪಾಲಕ್ ಕೂಡ ಒಂದು. ಈ ತರಕಾರಿಗಳಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಇದಲ್ಲದೆ, ಪಾಲಕ್ ದೇಹದಲ್ಲಿ ವಿಟಮಿನ್ ಬಿ -12 ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಜೊತೆಗೆ ಪಾಲಕ್ ಸೊಪ್ಪು ರಕ್ತವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ ನೀವು ಪಾಲಕ್ ಸೂಪ್ ಅಥವಾ ಬೇರೆ ಬೇರೆ ರೀತಿಯ, ನಿಮಗಿಷ್ಟವಾಗುವ ಆಹಾರಗಳಲ್ಲಿ ಸೇರಿಸಿಕೊಳ್ಳಬಹುದು.

ಕುಂಬಳಕಾಯಿ:

ಇದರಲ್ಲಿ ವಿಟಮಿನ್ ಬಿ 12 ನಲ್ಲಿ ಹೇರಳವಾಗಿ ಕಂಡುಬರುತ್ತದೆ, ಇದು ಫೈಬರ್ ಮತ್ತು ಪೊಟ್ಯಾಸಿಯಮ್ ನಿಂದ ಸಮೃದ್ಧವಾಗಿದೆ. ಈ ವಿಟಮಿನ್ ಕೊರತೆಯನ್ನು ನೀಗಿಸಲು ನೀವು ಇದನ್ನು ನಿಯಮಿತವಾಗಿ ಆಹಾರದಲ್ಲಿ ಸೇರಿಸಬಹುದು. ಜೊತೆಗೆ ಇದರಿಂದ ವಿಶೇಷ ರೀತಿಯ ಅಡುಗೆಗಳನ್ನು ಮಾಡಬಹುದು. ಇದೆಲ್ಲದರೊಂದಿಗೆ ಅನೇಕ ರೀತಿಯ ಆಹಾರಗಳಲ್ಲಿ ವಿಟಮಿನ್ ಬಿ 12 ಅಂಶವಿದ್ದು, ಹಾಲು, ಮೊಸರು ಮತ್ತು ಚೀಸ್ ನಲ್ಲಿ ಇವು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!