AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು?

ವಿಟಮಿನ್ ಬಿ 12 ದೇಹ ಮತ್ತು ಮೆದುಳಿಗೆ ಅತ್ಯಗತ್ಯ ಪೋಷಕಾಂಶವಾಗಿದೆ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಹೌದು, ಅಧ್ಯಯನವು ವಿಟಮಿನ್ ಬಿ 12 ಕಡಿಮೆ ಅಥವಾ ಅಧಿಕವಾಗಿದ್ದರೂ ಅದು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಹೇಳುತ್ತದೆ.

ವಿಟಮಿನ್ ಬಿ12 ಹೆಚ್ಚು ಅಥವಾ ಕಡಿಮೆಯಾದರೂ ಕ್ಯಾನ್ಸರ್ ಬರುತ್ತದೆಯೇ? ಹೊಸ ಅಧ್ಯಯನ ಹೇಳುವುದೇನು?
Vitamin B12 Intake And Cancer RiskImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 15, 2026 | 5:58 PM

Share

ದೇಹವನ್ನು ಆರೋಗ್ಯವಾಗಿಡಲು ವಿಟಮಿನ್ ಬಿ12 ಅತ್ಯಂತ ಮುಖ್ಯ. ಆದರೆ ಇತ್ತೀಚಿನ ಒಂದು ಅಧ್ಯಯನವು ವಿಟಮಿನ್ ಬಿ12 (Vitamin B12) ಮಟ್ಟದಲ್ಲಿ ಸರಿಯಾದ ಸಮತೋಲನ ಇಲ್ಲದಿದ್ದರೆ ಕ್ಯಾನ್ಸರ್ ಕಣಗಳ ಬೆಳವಣಿಗೆಯಾಗಬಹುದು, ಇವೆರಡಕ್ಕೂ ಸಂಬಂಧ ಇರಬಹುದು ಎಂಬ ಆತಂಕಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಈ ವಿಚಾರ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಅಧ್ಯಯನದ ಪ್ರಕಾರ, ವಿಟಮಿನ್ ಬಿ12ಗೆ ಸಂಬಂಧಿಸಿದ ಕೆಲವು ಜೀವ ರಾಸಾಯನಿಕ ಪ್ರಕ್ರಿಯೆಗಳು ಕ್ಯಾನ್ಸರ್ ಕಣಗಳು ಬದುಕಿ ಉಳಿಯಲು ಸಹಾಯ ಮಾಡಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. ಸಾಮಾನ್ಯವಾಗಿ ದೇಹದಲ್ಲಿ ಹಾನಿಗೊಳಗಾದ ಅಥವಾ ವಯಸ್ಸಾದ ಕೋಶಗಳನ್ನು ದೇಹವೇ ನಾಶಪಡಿಸುವ ಪ್ರಕ್ರಿಯೆಯನ್ನು “ಫೆರೋಪ್ಟೋಸಿಸ್” ಎಂದು ಕರೆಯಲಾಗುತ್ತದೆ. ಆದರೆ ಕ್ಯಾನ್ಸರ್ ಕಣಗಳು ಈ ಸಹಜ ಮರಣ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವಲ್ಲಿ ವಿಟಮಿನ್ ಬಿ12 ಸಂಬಂಧಿತ ಕ್ರಿಯೆಗಳು ಸಹಕಾರಿಯಾಗಬಹುದು ಎಂಬುದು ಅಧ್ಯಯನದ ಅಭಿಪ್ರಾಯ.

ಫೆರೋಪ್ಟೋಸಿಸ್ ಎಂದರೇನು?

ಸಾಮಾನ್ಯವಾಗಿ, ಫೆರೋಪ್ಟೋಸಿಸ್ ಎನ್ನುವುದು ದೇಹದ ರಕ್ಷಣಾತ್ಮಕ ವ್ಯವಸ್ಥೆಯ ಒಂದು ಭಾಗ. ಇದು ಹಾನಿಕಾರಕ ಕೋಶಗಳನ್ನು ತೆಗೆದುಹಾಕಿ ಆರೋಗ್ಯ ಕಾಪಾಡುತ್ತದೆ. ಆದರೆ ಕ್ಯಾನ್ಸರ್ ಕೋಶಗಳು ಈ ಪ್ರಕ್ರಿಯೆಯಿಂದ ತಪ್ಪಿಸಿಕೊಂಡರೆ ಅವು ದೇಹದಲ್ಲಿ ವೇಗವಾಗಿ ವೃದ್ಧಿಯಾಗುವ ಸಾಧ್ಯತೆ ಇರುತ್ತದೆ.

ತಜ್ಞರ ಪ್ರಕಾರ, ಮೊಟ್ಟೆ, ಹಾಲು, ಹಾಲು ಉತ್ಪನ್ನಗಳು, ಮಾಂಸ, ಪಪ್ಪು ಧಾನ್ಯಗಳು ಹಾಗೂ ಹಸಿರು ತರಕಾರಿಗಳಲ್ಲಿ ದೊರೆಯುವ ಬಿ12 ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದೆ. ಇದು ಶಕ್ತಿ ಉತ್ಪಾದನೆ, ನರಗಳ ಆರೋಗ್ಯಕ್ಕೆ ಬಹಳ ಮುಖ್ಯ. ಆದರೆ ವೈದ್ಯರ ಸಲಹೆ ಇಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಬಿ12 ಸಪ್ಲಿಮೆಂಟ್‌ಗಳನ್ನು ಸೇವಿಸುವುದು ಅಪಾಯಕಾರಿಯಾಗಬಹುದು. ಜೊತೆಗೆ ದೀರ್ಘಕಾಲ ಹೈ- ಡೋಸ್ ಸಪ್ಲಿಮೆಂಟ್‌ಗಳನ್ನು ಬಳಸುವುದರಿಂದ ಕೆಲವು ಸಂದರ್ಭಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ವಿಟಮಿನ್ ಬಿ12 ದೇಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು ಸಹಜ ಆಹಾರದಿಂದ ದೊರೆಯುವ B12 ಸುರಕ್ಷಿತ. ಆದರೆ ವೈದ್ಯರ ಸಲಹೆ ಇಲ್ಲದೆ ಸಪ್ಲಿಮೆಂಟ್ ಸೇವನೆ ಬೇಡ. ಅಧ್ಯಯನ ಇನ್ನೂ ಆರಂಭಿಕ ಹಂತದಲ್ಲಿದೆ, ಆದ್ದರಿಂದ ಅನಗತ್ಯ ಭಯ ಪಡುವ ಅಗತ್ಯವಿಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ವಿಶ್ವ ವಿಖ್ಯಾತ ಜೋಗ್ ಫಾಲ್ಸ್ ಗೆ ರಾಜಕಳೆ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
ಸಿಪಿ ಯೋಗೇಶ್ವರ್ ಪುತ್ರನ ಸಿನಿಮಾಕ್ಕೆ ಕ್ಲ್ಯಾಪ್ ಮಾಡಿದ ಸಿಎಂ ಡಿಕೆಶಿ
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ