AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ

ಇತ್ತೀಚಿನ ದಿನಗಳಲ್ಲಿ, ಮೂಳೆಗಳು ದುರ್ಬಲಗೊಳ್ಳುವ ಸಮಸ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ವಿಟಮಿನ್ ಡಿ ಕೊರತೆ. ಆದರೆ ಇದಕ್ಕೆ ಕಾರಣ ವಿಟಮಿನ್ ಡಿ ಮಾತ್ರವಲ್ಲ, ಇದರ ಜೊತೆಗೆ, ದೇಹದಲ್ಲಿ ಕ್ಯಾಲ್ಸಿಯಂ ಮಟ್ಟ ಕೂಡ ಸಾಕಷ್ಟು ಪ್ರಮಾಣದಲ್ಲಿ ಇರಬೇಕಾಗುತ್ತದೆ. ಕ್ಯಾಲ್ಸಿಯಂ ಪರೀಕ್ಷಿಸದೆಯೇ ಕೇವಲ ವಿಟಮಿನ್ ಡಿ ಮಟ್ಟವನ್ನು ಮಾತ್ರ ಪರಿಗಣಿಸಿ ಅದಕ್ಕೆ ಔಷಧಿಗಳನ್ನು ಸೇವನೆ ಮಾಡುವುದರಿಂದ ಹೆಚ್ಚಿನ ಪ್ರಯೋಜನವಾಗುವುದಿಲ್ಲ. ಹಾಗಾಗಿ ಇವೆರಡರ ಬಗ್ಗೆ ತಿಳಿದುಕೂಂಡು ಅವೆರಡು ದೇಹಕ್ಕೆ ಎಷ್ಟು ಮುಖ್ಯ, ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

30ರಲ್ಲಿ ಮೂಳೆಗಳು 50 ವರ್ಷದವರಂತಾಗಬಹುದು; ವಿಟಮಿನ್ ಡಿ, ಕ್ಯಾಲ್ಸಿಯಂ ಒಟ್ಟಿಗೆ ಸಿಗದಿದ್ದರೆ ಏನಾಗುತ್ತೆ ನೋಡಿ
Causes Of Weak BonesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 17, 2026 | 7:35 PM

Share

ಇತ್ತೀಚಿನ ವರ್ಷಗಳಲ್ಲಿ 30 ರಿಂದ 40 ವರ್ಷ ವಯಸ್ಸಿನಲ್ಲಿಯೇ ಮೂಳೆಗಳು ದುರ್ಬಲಗೊಳ್ಳುತ್ತಿದ್ದು, ಬೆನ್ನು, ಭುಜ ಮತ್ತು ಮೊಣಕಾಲುಗಳಲ್ಲಿ ನೋವಿಗೆ ಕಾರಣವಾಗುತ್ತಿದೆ. ಈ ರೀತಿ ಮೂಳೆ ನೋವಿಗೆ ಪ್ರಮುಖ ಕಾರಣವೆಂದರೆ ವಿಟಮಿನ್ ಡಿ (Vitamin D) ಕೊರತೆ. ಇದನ್ನು ನೀಗಿಸಲು, ಕೆಲವರು ವಿಟಮಿನ್ ಡಿ ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ ಇನ್ನು ಕೆಲವರು ಇಂಜೆಕ್ಷನ್‌ಗಳ ಮೊರೆ ಹೋಗುತ್ತಾರೆ. ಇಷ್ಟಾದರೂ ಕೆಲವರಿಗೆ ಮೂಳೆ ನೋವು ವಾಸಿಯಾಗುವುದಿಲ್ಲ. ಸಾಕಷ್ಟು ಪ್ರಮಾಣದಲ್ಲಿ ಸೂರ್ಯನ ಬೆಳಕು ಸಿಗದಿರುವುದು ಈ ಸಮಸ್ಯೆಗೆ ಕಾರಣವಾಗಿದೆ. ಆದರೆ ಇದಕ್ಕೆ ವಿಟಮಿನ್ ಡಿ ಮಾತ್ರ ಮುಖ್ಯವಲ್ಲ, ಅದರ ಜೊತೆಗೆ ದೇಹದಲ್ಲಿ ಕ್ಯಾಲ್ಸಿಯಂ (Calcium) ಮಟ್ಟ ಕೂಡ ಸಾಕಷ್ಟು ಪ್ರಮಾಣದಲ್ಲಿ ಇರಬೇಕಾಗುತ್ತದೆ. ಕ್ಯಾಲ್ಸಿಯಂ ಪರೀಕ್ಷಿಸದೆಯೇ ಕೇವಲ ವಿಟಮಿನ್ ಡಿ ಮಟ್ಟವನ್ನು ಮಾತ್ರ ಪರಿಗಣಿಸಿ ಅದಕ್ಕೆ ಔಷಧಿಗಳನ್ನು ಸೇವನೆ ಮಾಡುವುದರಿಂದ ಹೆಚ್ಚಿನ ಪ್ರಯೋಜನವಾಗುವುದಿಲ್ಲ. ಹಾಗಾಗಿ ಇವೆರಡರ ಬಗ್ಗೆ ತಿಳಿದುಕೂಂಡು ಅವೆರಡು ದೇಹಕ್ಕೆ ಎಷ್ಟು ಮುಖ್ಯ, ಯಾರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ.

ದೇಹಕ್ಕೆ ವಿಟಮಿನ್ ಡಿ ಯಷ್ಟೇ ಕ್ಯಾಲ್ಸಿಯಂ ಏಕೆ ಮುಖ್ಯ?

ಸಾಮಾನ್ಯವಾಗಿ ದೇಹದಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಇದ್ದಾಗ ಮಾತ್ರ ವಿಟಮಿನ್ ಡಿ ಸರಿಯಾಗಿ ಕೆಲಸ ಮಾಡುತ್ತದೆ. ಕ್ಯಾಲ್ಸಿಯಂ ಕಡಿಮೆಯಿದ್ದರೆ, ವಿಟಮಿನ್ ಡಿ ತೆಗೆದುಕೊಂಡ ನಂತರ ಮೂಳೆಗಳು ಬಲಗೊಳ್ಳುವುದಿಲ್ಲ. ಅಂತಹ ಸಂದರ್ಭಗಳಲ್ಲಿ, ಅವುಗಳನ್ನು ಒಟ್ಟಿಗೆ ತೆಗೆದುಕೊಳ್ಳುವುದು ಅವಶ್ಯಕ. ಒಬ್ಬ ವ್ಯಕ್ತಿ ವಿಟಮಿನ್ ಡಿ ಜೊತೆಗೆ ಕ್ಯಾಲ್ಸಿಯಂ ತೆಗೆದುಕೊಳ್ಳದಿದ್ದರೆ, ಆಸ್ಟಿಯೊಪೊರೋಸಿಸ್ ಬರುವ ಅಪಾಯವಿರಬಹುದು. ಇದು ಚಿಕ್ಕ ವಯಸ್ಸಿನಲ್ಲಿಯೇ ಮೂಳೆ ತೆಳುವಾಗಿ ಮತ್ತು ದುರ್ಬಲವಾಗಲು ಕಾರಣವಾಗಬಹುದು, ಅಷ್ಟೇಅಲ್ಲ, ಮುರಿತದ ಅಪಾಯ ಹೆಚ್ಚಾಗಬಹುದು. ಇದು ಸ್ನಾಯು ನೋವು ಮತ್ತು ಆಯಾಸಕ್ಕೂ ಕಾರಣವಾಗಬಹುದು.

ಇದನ್ನೂ ಓದಿ: ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ!

ಯಾರಲ್ಲಿ ಈ ಅಪಾಯ ಹೆಚ್ಚಾಗಿ ಕಂಡುಬರುತ್ತದೆ?

  • ಬಿಸಿಲಿಗೆ ಕಡಿಮೆ ಹೋಗುವವರಲ್ಲಿ
  • ಕಚೇರಿಯಲ್ಲಿ ಹೆಚ್ಚು ಸಮಯ ಕುಳಿತು ಕೆಲಸ ಮಾಡುವವರಲ್ಲಿ
  • ಹೆಚ್ಚು ಜಂಕ್ ಫುಡ್ ತಿನ್ನುವವರು
  • ಮಹಿಳೆಯರಲ್ಲಿ, ವಿಶೇಷವಾಗಿ 30 ರ ನಂತರ ಈ ಸಮಸ್ಯೆ ಕಂಡುಬರಬಹುದು

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್