AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ!

ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ವಿಟಮಿನ್ ಕೊರತೆ ಹೆಚ್ಚಾಗುತ್ತಿದೆ. ಇದರ ಕೊರತೆಯು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅದರ ಕೊರತೆಯಾದಾಗ ಕಂಡುಬರುವ ಲಕ್ಷಣಗಳ ಬಗ್ಗೆ ತಿಳಿದುಕೊಂಡು ಅದನ್ನು ತಡೆಗಟ್ಟುವುದು ಬಹಳ ಅನಿವಾರ್ಯವಾಗಿದೆ. ಹಾಗಾದರೆ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಅದನ್ನು ತಡೆಯುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಈ ರೀತಿಯ ಲಕ್ಷಣಗಳು ಕಂಡುಬರುತ್ತೆ, ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬೇಡಿ!
Women And Vitamin D DeficiencyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Feb 13, 2026 | 6:49 PM

Share

ಇತ್ತೀಚಿನ ದಿನಗಳಲ್ಲಿ, ಮಹಿಳೆಯರಲ್ಲಿ ವಿಟಮಿನ್ ಡಿ (Vitamin D) ಕೊರತೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಇದಕ್ಕೆಲ್ಲಾ ಬದಲಾಗುತ್ತಿರುವ ಜೀವನಶೈಲಿಯೇ ಕಾರಣವಾಗಿದೆ. ಮನೆ ಅಥವಾ ಆಫೀಸ್ ಒಳಗಡೆ ಹೆಚ್ಚು ಸಮಯ ಕಳೆಯುವುದು, ಬಿಸಿಲಿಗೆ ಹೋಗದಿರುವುದು ಮತ್ತು ಸನ್‌ಸ್ಕ್ರೀನ್ ಅನ್ನು ಅತಿಯಾಗಿ ಬಳಸುವುದು ದೇಹದಲ್ಲಿ ವಿಟಮಿನ್ ಡಿ ಉತ್ಪಾದಿಸುವ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ಅದರ ಜೊತೆಗೆ ಆಹಾರದಲ್ಲಿ ಪೋಷಕಾಂಶಗಳ ಕೊರತೆ, ಹಾಲು ಮತ್ತು ಡೈರಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವುದು, ಬೊಜ್ಜು ಮತ್ತು ಹಾರ್ಮೋನುಗಳ ಬದಲಾವಣೆ ಸಹ ಇದಕ್ಕೆ ಕಾರಣವಾಗಬಹುದು. ನಗರ ಪ್ರದೇಶಗಳಲ್ಲಿ, ಹೆಚ್ಚಿನ ಮಟ್ಟದ ಮಾಲಿನ್ಯವು ಸೂರ್ಯನ ಬೆಳಕಿನಿಂದ ಪಡೆಯುವ ಅಗತ್ಯ ಅಂಶಗಳನ್ನು ಕಡಿಮೆ ಮಾಡುತ್ತದೆ. ಅದರಲ್ಲಿಯೂ ಕಾರ್ಯನಿರತ ದಿನಚರಿಯಿಂದಾಗಿ ಅನೇಕ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗುವುದಿಲ್ಲ, ಇದರಿಂದಾಗಿ ಈ ಕೊರತೆ ಕ್ರಮೇಣ ಹೆಚ್ಚಾಗುತ್ತದೆ.

ಸಾಮಾನ್ಯವಾಗಿ ಮೊಬೈಲ್ ಫೋನ್‌ ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ದೀರ್ಘಕಾಲ ಕೆಲಸ ಮಾಡುವುದು ಮತ್ತು ದೈಹಿಕ ಚಟುವಟಿಕೆಯ ಕೊರತೆ ದೇಹದ ನೈಸರ್ಗಿಕ ಪ್ರಕ್ರಿಯೆಗಳ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಾದಂತೆ, ದೇಹದ ವಿಟಮಿನ್ ಡಿ ಹೀರಿಕೊಳ್ಳುವ ಸಾಮರ್ಥ್ಯವೂ ಕಡಿಮೆಯಾಗಬಹುದು. ಕೆಲವು ಔಷಧಿಗಳ ದೀರ್ಘಕಾಲೀನ ಬಳಕೆಯು ಅದರ ಮಟ್ಟವನ್ನು ಕಡಿಮೆ ಮಾಡಬಹುದು. ಆದರೆ ಈ ರೀತಿ ಸಮಸ್ಯೆ ಬಂದಾಗ ನಮ್ಮ ದೇಹ ಕೆಲವು ಎಚ್ಚರಿಕೆಯ ಸಂದೇಶಗಳನ್ನು ನೀಡುತ್ತದೆ. ಆಗ ಆ ಲಕ್ಷಣಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.

ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆಯಾದಾಗ ಕಂಡುಬರುವ ಲಕ್ಷಣಗಳು:

ಆರ್‌ಎಂಎಲ್ ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಸಲೋನಿ ಚಾಧಾ ಹೇಳುವ ಪ್ರಕಾರ, ವಿಟಮಿನ್ ಡಿ ಕೊರತೆಯಿರುವ ಮಹಿಳೆಯರಿಗೆ ನಿರಂತರವಾಗಿ ಆಯಾಸ, ದಣಿವು ಮತ್ತು ದುರ್ಬಲತೆ ಅನುಭವಕ್ಕೆ ಬರಬಹುದು. ಮೂಳೆ ಮತ್ತು ಕೀಲುಗಳಲ್ಲಿ, ಅದರಲ್ಲಿಯೂ ಕೆಳ ಬೆನ್ನು ಮತ್ತು ಕಾಲುಗಳಲ್ಲಿ ನೋವು ಕಂಡುಬರುವುದು ಸಾಮಾನ್ಯ ಲಕ್ಷಣವಾಗಿದೆ. ಸ್ನಾಯು ಸೆಳೆತ ಅಥವಾ ನೋವು ಸಹ ಕಂಡುಬರಬಹುದು. ಕೆಲವರು ಆಗಾಗ ಶೀತ ಅಥವಾ ಸೋಂಕಿನಿಂದ ಬಳಲುತ್ತಾರೆ. ಏಕೆಂದರೆ ಅವರ ರೋಗನಿರೋಧಕ ಶಕ್ತಿ ದುರ್ಬಲಗೊಂಡಿರುತ್ತದೆ. ಇನ್ನು, ಕೂದಲು ಉದುರುವಿಕೆ ಮತ್ತು ಮನಸ್ಥಿತಿ ಬದಲಾವಣೆ, ನಿದ್ರಾಹೀನತೆ ಸಹ ವಿಟಮಿನ್ ಡಿ ಕೊರತೆ ಲಕ್ಷಣಗಳಾಗಿರಬಹುದು.

ಇದನ್ನೂ ಓದಿ: ಚಳಿಗಾಲದಲ್ಲಿ ಇತರರಿಗಿಂತ ತುಸು ಹೆಚ್ಚೆ ನಿಮ್ಗೆ ಚಳಿಯಾಗುತ್ತಾ? ಇದಕ್ಕೆ ಈ ವಿಟಮಿನ್ ಕೊರತೆಯೇ ಕಾರಣ

ವಿಟಮಿನ್ ಡಿ ಕೊರತೆಯ ಅಪಾಯ ಯಾರಲ್ಲಿ ಹೆಚ್ಚಾಗಿ ಕಂಡುಬರುತ್ತದೆ?

ಸೂರ್ಯನ ಬೆಳಕಿಗೆ ಹೋಗದ ಮಹಿಳೆಯರಲ್ಲಿ ಈ ರೀತಿಯ ಅಪಾಯ ಹೆಚ್ಚಾಗಿ ಕಂಡುಬರುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ಮಹಿಳೆಯರಿಗೂ ಹೆಚ್ಚಿನ ವಿಟಮಿನ್ ಡಿ ಅಗತ್ಯವಿರುತ್ತದೆ. ಜೊತೆಗೆ ಬೊಜ್ಜಿರುವ ಮತ್ತು 40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಲ್ಲಿ ಈ ಕೊರತೆ ಹೆಚ್ಚಾಗಿ ಕಂಡುಬರುತ್ತದೆ. ಅಸಮತೋಲಿತ ಆಹಾರ ಅಥವಾ ಹಾರ್ಮೋನುಗಳ ಸಮಸ್ಯೆ ಇರುವವರು ಸಹ ಜಾಗರೂಕರಾಗಿರಬೇಕು.

ಇದನ್ನು ಹೇಗೆ ತಡೆಯುವುದು?

ಪ್ರತಿದಿನ ಬೆಳಿಗ್ಗೆ ಕನಿಷ್ಠ 15 ರಿಂದ 20 ನಿಮಿಷಗಳ ಕಾಲ ಸೂರ್ಯನ ಬೆಳಕನ್ನು ಪಡೆಯಿರಿ. ಹಾಲು, ಮೊಸರು, ಚೀಸ್, ಮೊಟ್ಟೆ ಮತ್ತು ಬಲವರ್ಧಿತ ಆಹಾರಗಳ ಸೇವನೆ ಮಾಡಿ. ನಿಯಮಿತ ವ್ಯಾಯಾಮ ಮಾಡಿ ಮೂಳೆಗಳನ್ನು ಬಲಪಡಿಸಿಕೊಳ್ಳಿ. ಅಗತ್ಯವಿದ್ದರೆ, ವೈದ್ಯರ ಸಲಹೆಯಂತೆ ಪೂರಕಗಳನ್ನು ತೆಗೆದುಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?