AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

ಚಿಕ್ಕ ಮಕ್ಕಳನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರು ಕೂಡ ಸಾಲುವುದಿಲ್ಲ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಹೀಗಾದಾಗ ಏನು ಮಾಡಬೇಕು ಎಂಬುದನ್ನು ತಿಳಿಯುವುದು ಅನಿವಾರ್ಯವಾಗಿದೆ. ಈ ವಿಷಯವಾಗಿ ತಜ್ಞರು ನೀಡಿದ ಮಾಹಿತಿ ಸ್ಟೋರಿಯಲ್ಲಿದೆ.

ಮಕ್ಕಳು ಸಿರಪ್ ತೆಗೆದುಕೊಂಡ ತಕ್ಷಣ ವಾಂತಿ ಮಾಡಿದ್ರೆ ಏನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ
First Direct Fetal Heart Surgery
ಪ್ರೀತಿ ಭಟ್​, ಗುಣವಂತೆ
|

Updated on: Feb 06, 2026 | 8:18 PM

Share

ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲುವುದಿಲ್ಲ. ಜ್ವರ, ಕೆಮ್ಮು ಬಂದಾಗಲೆಲ್ಲಾ ಮಕ್ಕಳಷ್ಟೇ ನೋವನ್ನು ಪೋಷಕರು ಅನುಭವಿಸುತ್ತಾರೆ. ಮಕ್ಕಳಲ್ಲಿ ಏನಾದರೂ ಸ್ವಲ್ಪ ಬದಲಾವಣೆಯಾದರೂ ಕೂಡ ಚಿಂತೆಯಾಗುತ್ತದೆ. ಹಾಗಾಗಿ ತಕ್ಷಣ ಔಷಧ ನೀಡುವುದು ಒಳ್ಳೆಯದು. ಸಾಮಾನ್ಯವಾಗಿ ಮಕ್ಕಳಿಗೆ ಮಾತ್ರೆಗಳನ್ನು ನುಂಗಲು ಸಾಧ್ಯವಾಗದ ಕಾರಣ, ಹೆಚ್ಚಾಗಿ ಸಿರಪ್‌ಗಳನ್ನು (Syrup) ನೀಡಲಾಗುತ್ತದೆ. ಆದರೆ ಕೆಲವು ಮಕ್ಕಳು ಅವುಗಳನ್ನು ತೆಗೆದುಕೊಂಡ ತಕ್ಷಣ ವಾಂತಿ ಮಾಡುತ್ತಾರೆ. ಈ ಕಾರಣದಿಂದಾಗಿ, ಪೋಷಕರು ಹೆಚ್ಚು ಚಿಂತೆಗೀಡಾಗುತ್ತಾರೆ. ಮತ್ತೊಂದು ಡೋಸ್ ನೀಡಬೇಕೇ ಅಥವಾ ಬೇಡವೇ ಎಂಬ ಗೊಂದಲ ಉಂಟಾಗುತ್ತದೆ. ಹಾಗಾಗಿ ಪ್ರತಿಯೊಬ್ಬ ಪೋಷಕರು ಕೂಡ ಈ ಬಗ್ಗೆ ತಿಳಿಯುವುದು ಅನಿವಾರ್ಯವಾಗಿದೆ. ಈ ವಿಷಯವಾಗಿ ತಜ್ಞರು ನೀಡಿದ ಮಾಹಿತಿ ಸ್ಟೋರಿಯಲ್ಲಿದೆ.

ಚಿಕ್ಕ ಮಕ್ಕಳನ್ನು ಎಷ್ಟು ಎಚ್ಚರಿಕೆಯಿಂದ ನೋಡಿಕೊಂಡರೂ ಸಾಲುವುದಿಲ್ಲ. ಅದರಲ್ಲಿಯೂ ಮಕ್ಕಳು ಸಿರಪ್ ತೆಗೆದುಕೊಂಡ ನಂತರ ವಾಂತಿ ಮಾಡಿದರೆ, ಅದು ದೇಹದೊಳಗೆ ಹೋಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಿ. 20 ನಿಮಿಷಗಳ ಒಳಗೆ ವಾಂತಿಯಾದರೆ, ಔಷಧ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ, ಆದ್ದರಿಂದ ಅದನ್ನು ಎರಡನೇ ಬಾರಿಗೆ ನೀಡುವುದು ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಮಕ್ಕಳು ಸಿರಪ್ ತೆಗೆದುಕೊಂಡ ಒಂದು ಗಂಟೆಯ ನಂತರ ವಾಂತಿ ಮಾಡಿದರೆ, ಅದು ಯೋಚಿಸಬೇಕಾದ ವಿಷಯ. ನೀವು ನೀಡಿದ ಸಿರಪ್ ವಾಂತಿಯಲ್ಲಿ ಕಂಡುಬಂದರೆ, ಇನ್ನೊಂದು ಡೋಸ್ ನೀಡುವುದು ಒಳ್ಳೆಯದು.

ಇದನ್ನೂ ಓದಿ: ನಿಮ್ಮ ಮಕ್ಕಳಿಗೆ ಕೆಮ್ಮಿನ ಸಿರಪ್​ ಹಾಕುವ ಮುನ್ನ ಎಚ್ಚರ: ಇಲ್ಲಿದೆ ಆರೋಗ್ಯ ಇಲಾಖೆಯ ಗೈಡ್​ಲೈನ್ಸ್

ಪೋಷಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು:

ಮಗುವಿನ ಬಾಯಿಗೆ ಎಂದಿಗೂ ಸಿರಪ್ ಅನ್ನು ಒಂದೇ ಬಾರಿಗೆ ಸುರಿಯಬೇಡಿ. ಸಿರಪ್ ನೀಡಲು ಸಣ್ಣ ಸಿರಿಂಜ್ ಬಳಸುವುದು ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ನೀಡುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತ. ಮಕ್ಕಳು ಪ್ರತಿ ಬಾರಿ ಸಿರಪ್ ತೆಗೆದುಕೊಂಡಾಗ ವಾಂತಿ ಮಾಡಿಕೊಂಡರೆ, ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್​​ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಪ್ರಬಲ ಸಂದೇಶ ರವಾನಿಸಿದೆ; ರಾಷ್ಟ್ರಪತಿ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
'ಜಮ್ಮು ಕಾಶ್ಮೀರ, ಲಡಾಖ್​ ಭಾರತದ ಅವಿಭಾಜ್ಯ ಅಂಗ'; ವಿದೇಶಾಂಗ ಸಚಿವಾಲಯ
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸೆಟ್ ಹಾಕಲು ಅಂದಾಜು 75 ಕೋಟಿ ರೂಪಾಯಿ ಬಜೆಟ್
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಮನೆ ಮುಂದೆ ವಾಹನ ಪಾರ್ಕಿಂಗ್‌ಗೆ ಶುಲ್ಕ: ಜಿಬಿಎ ನಿಯಮಕ್ಕೆ ಸಿಟಿ ಮಂದಿ ಕಿಡಿ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌; ಹಿಂಬಾಕಿ ಬಿಡುಗಡೆ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಯತೀಂದ್ರ ಸಿದ್ದರಾಮಯ್ಯನವರನ್ನ ವಿಶೇಷವಾಗಿ ಪರಿಚಯಿಸಿದ ಡಿಕೆಶಿ
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
ಜೈಲಾಧಿಕಾರಿಗಳಿಗೆ ಅಲೋಕ್ ಕುಮಾರ್ ಕ್ಲಾಸ್!
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ
RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶ ಬಿಚ್ಚಿಟ್ಟ ಗೃಹ ಸಚಿವ